More

    ಹೆಚ್ಚು ಜನ ಸೇರದಂತೆ ಕ್ರಮ ಕೈಗೊಳ್ಳಿ

    ಯಾದಗಿರಿ: ಕರೊನಾ ವೈರಸ್ ನಿಯಂತ್ರಣದ ಹಿನ್ನೆಲೆ ಈ ಬಾರಿ ಕಲ್ಯಾಣ ಕನರ್ಾಟಕ ಉತ್ಸವವನ್ನು ಸರಳ ರೀತಿಯಲ್ಲಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ತಿಳಿಸಿದರು.

    ಕಾರ್ಯಕ್ರಮ ನಿಮಿತ್ತ ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, 17ರಂದು ಬೆಳಗ್ಗೆ ನಗರದ ಸಕರ್ಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಹೆಚ್ಚು ಜನ ಸೇರಿಸಬಾರದು. ಆದರೆ, ಕಾರ್ಯಕ್ರಮ ವೀಕ್ಷಿಸುವ ಸೌಭಾಗ್ಯ ಎಲ್ಲರಿಗೂ ದೊರಕುವಂತಾಬೇಕು ಮತ್ತು ಫೇಸ್ಬುಕ್, ಯೂ ಟ್ಯೂಬ್ ಹಾಗೂ ಟಿವಿ ಚಾನೆಲ್ಗಳಲ್ಲಿ ನೇರಪ್ರಸಾರ ಮಾಡಲಾಗುವುದು. ಸಾರ್ವಜನಿಕರು ತಾವಿದ್ದಲ್ಲಿಯೇ ನೇರವಾಗಿ ಕಾರ್ಯಕ್ರಮ ವೀಕ್ಷಿಸಬಹುದು ಎಂದು ತಿಳಿಸಿದರು.

    ಅಂದು ಜಿಲ್ಲೆಯ ಎಲ್ಲ ಸಕರ್ಾರಿ ಕಚೇರಿ ಹಾಗೂ ಸಕರ್ಾರಿ, ಅನುದಾನಿತ, ಅನುದಾನರಹಿತ ಶಾಲಾ-ಕಾಲೇಜುಗಳಲ್ಲಿಯೂ ಸಹ ಧ್ವಜಾರೋಹಣ ನೆರವೇರಿಸಬೇಕು. ತಾಲೂಕು ಮಟ್ಟದಲ್ಲಿ ಕೂಡ ಅರ್ಥಪೂರ್ಣವಾಗಿ ಕಲ್ಯಾಣ ಕರ್ನಾಟಕ ಉತ್ಸವ ದಿನ ಆಚರಣೆ ಮಾಡಬೇಕು ಎಂದರು.

    ಕಾರ್ಯಕ್ರಮದ ಸಾಮೂಹಿಕ ಕವಾಯಿತುನಲ್ಲಿ ಪೊಲೀಸ್ ಇಲಾಖೆಯಿಂದ-1, ಗೃಹರಕ್ಷಕ ದಳ-1, ಅಗ್ನಿಶಾಮಕ-1ಹಾಗೂ ಅರಣ್ಯ ಇಲಾಖೆಯ-1 ಒಟ್ಟು 4 ತಂಡಗಳು ಭಾಗವಹಿಸಬೇಕು. ಕವಾಯತ್ನಲ್ಲಿ ಪಾಲ್ಗೊಳ್ಳುವವರಿಗೆ ಮೂರು ದಿನಗಳ ತರಬೇತಿ ಅವಧಿಯಲ್ಲಿ ಲಘು ಉಪಾಹಾರದ ವ್ಯವಸ್ಥೆ ಮಾಡಲು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶಿಸಿದರು.

    ಸಮಾರಂಭದ ವೇದಿಕೆಗೆ ಟೆಂಟ್, ಆಸನ, ಮೈಕ್, ವಿದ್ಯುತ್, ಸೌಂಡ್ ಸಿಸ್ಟಮ್, ಶಾಮಿಯಾನ, ಜನರೇಟರ್, ಬ್ಯಾಕ್ ಡ್ರಾಪ್ ವ್ಯವಸ್ಥೆ ಮಾಡಬೇಕು. ಜಿಲ್ಲಾಡಳಿತ ಕಾಯರ್ಾಲಯ, ಎಲ್ಲ ಸಕರ್ಾರಿ ಕಚೇರಿ ಹಾಗೂ ನಗರದ ವೃತ್ತಗಳಲ್ಲಿ ವಿದ್ಯುತ್ ದೀಪಾಲಂಕಾರದ ವ್ಯವಸ್ಥೆ ಮಾಡಬೇಕು. ನಗರ ಸ್ವಚ್ಛತೆಗೆ ಕ್ರಮ ವಹಿಸಬೇಕು. ಪೊಲೀಸ್ ಬಂದೋಬಸ್ತ್, ಅಗ್ನಿಶಾಮಕ ವಾಹನ ಹಾಗೂ ಕಾಲೇಜು ಮೈದಾನದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಅಂಬುಲೆನ್ಸ್ ವ್ಯವಸ್ಥೆ ಮಾಡಬೇಕು. ಅಂದು ಬೆಳಗ್ಗೆ 5ರಿಂದ ರಾತ್ರಿ 7ರವರೆಗೆ ವಿದ್ಯುತ್ ಲೋಡ್ಶೆಡ್ಡಿಂಗ್ ಮಾಡದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್, ತಹಸೀಲ್ದಾರ್ ಸೂಫಿಯಾ ಸುಲ್ತಾನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಜಿಲ್ಲಾ ಭಾವೈಕ್ಯತಾ ಸಮಿತಿಯ ಬಾಬು ದೋಖಾ, ಸಿದ್ದಾರಡ್ಡಿ ಬಲ್ಕಲ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts