More

    ಸೋಲಿನ ಬೆನ್ನಲ್ಲೇ ರಿಷಭ್​ ಪಂತ್​ಗೆ 24 ಲಕ್ಷ ರೂ. ದಂಡ, ​ನಿಷೇಧದ ಭೀತಿ

    ವಿಶಾಖಪಟ್ಟಣಂ: ಇಲ್ಲಿನ ವೈ.ಎಸ್​. ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆದ 16ನೇ ಐಪಿಎಲ್​ ಪಂದ್ಯದಲ್ಲಿ ಆಲ್ರೌಂಡ್​ ಪ್ರದರ್ಶನದ ಫಲವಾಗಿ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಕಲ್ಕತ್ತಾ ನೈಟ್​ರೈಡರ್ಸ್​ ತಂಡವು 106ರನ್​ಗಳ ಜಯ ಸಾಧಿಸುವ ಪಾಯಿಂಟ್ಸ್​​ ಟೇಬಲ್ನಲ್ಲಿ ಅಗ್ರಸ್ಥಾನಕ್ಕೇರಿದೆ.

    ಇನ್ನೂ ಕಲ್ಕತ್ತಾ ವಿರುದ್ಧದ ಪಂದ್ಯದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಕಾರಣ ಡೆಲ್ಲಿ ಕ್ಯಾಪಿಟಲ್ಸ್​ ತಂಡದ ನಾಯಕ ರಿಷಭ್​ ಪಂತ್​ಗೆ ದಂಡ ವಿಧಿಸಲಾಗಿದ್ದು, ನಿಷೇಧದ ಭೀತಿಯನ್ನು ಎದುರಿಸುತ್ತಿದ್ದಾರೆ. ಹಾಲಿ ಆವೃತ್ತಿಯಲ್ಲಿ ರಿಷಭ್​ ಪಂತ್​ಗೆ ಎರಡನೇ ಬಾರಿಗೆ ದಂಡ ವಿಧಿಸಲಾಗುತ್ತಿದ್ದು, ಹೀಗೆ ಆದಲ್ಲಿ ಅವರನ್ನು ನಿಷೇಧಿಸುವ ಸಾಧ್ಯತೆ ಹೆಚ್ಚಿದೆ.

    ಐಪಿಎಲ್​ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ಬೌಂಡರಿ ಲೈನ್​ನಿಂದ ಒಬ್ಬ ಫೀಲ್ಡರ್​ನನ್ನು ಕಡಿತ ಮಾಡಲಾಗುತ್ತದೆ. ಹಾಗೆಯೇ ಈ ತಪ್ಪನ್ನು ಮಾಡಿದ ತಂಡದ ನಾಯಕನಿಗೆ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

    Rishabh Pant

    ಇದನ್ನೂ ಓದಿ: ಐಪಿಎಲ್​ನ 2 ಪಂದ್ಯಗಳ ದಿನಾಂಕ ಬದಲಿಸಿದ ಬಿಸಿಸಿಐ; ಕಾರಣ ಹೀಗಿದೆ

    ಅದರಂತೆ ಬೌಲಿಂಗ್ ವೇಳೆ ಸ್ಲೋ ಓವರ್​ ರೇಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ನಿಗದಿತ ಸಮಯದೊಳಗೆ ಪಂದ್ಯವನ್ನು ಮುಗಿಸಿರಲಿಲ್ಲ. ಈ ಕಾರಣಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್​ಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ. ಹಾಗೆಯೇ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಂಡ ಆಟಗಾರರಿಗೆ 6 ಲಕ್ಷ ರೂ. ಅಥವಾ ಪಂದ್ಯ ಶುಲ್ಕದ ಶೇ.25 ರಷ್ಟು ದಂಡ ಪಾವತಿಸಬೇಕೆಂದು ತಿಳಿಸಲಾಗಿದೆ.

    ಇನ್ನು ಇದೇ ತಪ್ಪನ್ನು 2ನೇ ಬಾರಿ ಪುನರಾವರ್ತಿಸಿದರೆ ನಾಯಕನಿಗೆ 24 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರಿಗೆ 6 ಲಕ್ಷ ಅಥವಾ ಪಂದ್ಯದ ಶುಲ್ಕದ 25% ದಂಡವನ್ನು ವಿಧಿಸಲಾಗುತ್ತದೆ. ಈ ತಪ್ಪನ್ನು ಮೂರನೇ ಬಾರಿ ಆವರ್ತಿಸಿದರೆ, ತಂಡದ ನಾಯಕನಿಗೆ 30 ಲಕ್ಷ ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಒಂದು ಪಂದ್ಯದಿಂದ ನಿಷೇಧಕ್ಕೊಳಗಾಗಲಿದ್ದಾರೆ. ಹಾಗೆಯೇ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರು ತಲಾ 12 ಲಕ್ಷ ರೂ. ಅಥವಾ ಪಂದ್ಯದ ಶುಲ್ಕದ ಶೇ. 50 ರಷ್ಟು ದಂಡವನ್ನು ಪಾವತಿಸಬೇಕಾಗುತ್ತದೆ.

    ಇದೀಗ ರಿಷಭ್ ಪಂತ್ 2 ಬಾರಿ ಈ ತಪ್ಪನ್ನು ಮಾಡಿದ್ದಾರೆ. ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ಶಿಕ್ಷೆಗೆ ಗುರಿಯಾಗಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ, ಇದೀಗ ಕೆಕೆಆರ್ ವಿರುದ್ಧ ಕೂಡ ಅದೇ ತಪ್ಪನ್ನು ಪುನರಾವರ್ತಿಸಿದ್ದಾರೆ. ಇನ್ನು ಮುಂಬರುವ ಪಂದ್ಯಗಳಲ್ಲಿ ಈ ತಪ್ಪನ್ನು ಮಾಡಿದರೆ ಒಂದು ಪಂದ್ಯದಿಂದ ನಿಷೇಧಕ್ಕೊಳಗಾಗಲಿದ್ದಾರೆ. 

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts