More

    ಹೊಸನೀರಲಗಿಯಲ್ಲಿ ಡಿಸಿ ವಾಸ್ತವ್ಯ

    ಸವಣೂರ: ಸರ್ಕಾರದ ಯೋಜನೆಯಂತೆ ತಾಲೂಕಿನಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯಕ್ಕೆ ದಿನಾಂಕ ನಿಗದಿಪಡಿಸಲಾಗಿದ್ದು, ಗ್ರಾಮೀಣ ಪ್ರದೇಶ ಅಭಿವೃದ್ಧಿಗಾಗಿ ಸಹಕಾರ ನೀಡಲು ಸಮಗ್ರ ಮಾಹಿತಿಯೊಂದಿಗೆ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ ಸೂಚನೆ ನೀಡಿದರು.

    ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ ಕುರಿತು ಪಟ್ಟಣದ ಉಪವಿಭಾಗಾಧಿಕಾರಿ ಕಾರ್ಯಾಲಯದಲ್ಲಿ ಬುಧವಾರ ಆಯೋಜಿಸಿದ್ದ ತಾಲೂಕು ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಾಲೂಕಿನ ಹೊಸನೀರಲಗಿ ಗ್ರಾಮದಲ್ಲಿ ಫೆ. 20ರಂದು ಜಿಲ್ಲಾಧಿಕಾರಿಗಳ ತಂಡ ಗ್ರಾಮ ವಾಸ್ತವ್ಯ ಮಾಡಲಿದೆ. ಗೈರು ಹಾಜರಾಗುವ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ಬಗ್ಗೆ

    ದೂರುಗಳು ಕೇಳಿ ಬರುತ್ತಿವೆ. ಕೂಡಲೆ, ಅಬಕಾರಿ ಇಲಾಖೆ ಅಧಿಕಾರಿಗಳು ಕಡಿವಾಣ ಹಾಕಿ ವರದಿ ನೀಡಬೇಕು ಎಂದು ಎಚ್ಚರಿಕೆ ನೀಡಿದರು.

    ಸಭೆಗೆ ಗೈರು ಹಾಜರಾದ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಸಮಾಜ ಕಲ್ಯಾಣ, ಸಾರಿಗೆ, ಪಂಚಾಯತ್ ರಾಜ್ ಇಂಜಿನಿಯರಿಂಗ್, ನೀರು ಮತ್ತು ನೈರ್ಮಲ್ಯ ಹಾಗೂ ರಸ್ತೆ ಮತ್ತು ಒಳಚರಂಡಿ ಇಲಾಖೆ, ಶಿಕ್ಷಣ ಇಲಾಖೆ, ಹೆಸ್ಕಾಂ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಎಸಿ ಮುದಕಮ್ಮನವರ ಅವರು ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಸಿಬ್ಬಂದಿಗೆ ಸೂಚನೆ ನೀಡಿದರು. ಪ್ರಭಾರ ತಹಸೀಲ್ದಾರ್ ಸಿ.ಎಸ್. ಜಾಧವ, ಅಬಕಾರಿ ನಿರೀಕ್ಷಕ ಮಹೇಶಗೌಡ ಪಾಟೀಲ, ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

    ಅಕ್ರಮ ಮದ್ಯ ಮಾರಾಟ ತಡೆಯಲು ಕ್ರಮಕೈಗೊಳ್ಳಿ

    ಹೊಸನೀರಲಗಿ ಗ್ರಾಮದ ಬಸ್ ನಿಲ್ದಾಣ ಬಳಿ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದೆ. ಇದರಿಂದಾಗಿ ಮಹಿಳೆಯರು ಹಾಗೂ ಮಕ್ಕಳಿಗೆ ತೀವ್ರ ತೊಂದರೆಯಾಗುತ್ತಿರುವ ಕುರಿತು ಸಾಮಾನ್ಯ ಸಭೆಯಲ್ಲಿ ರ್ಚಚಿಸಲಾಗಿದೆ. ಹೀಗಾಗಿ ಅಧಿಕಾರಿಗಳು ಕೂಡಲೆ ಕ್ರಮ ಜರುಗಿಸಬೇಕು ಎಂದು ಮಂತ್ರವಾಡಿ ಗ್ರಾಪಂ ಪಿಡಿಒ ಈಶ್ವರಪ್ಪ ಎನ್.ಒ. ಮನವಿ ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts