ಡಾ.ಶಿವರಾಮ ಕಾರಂತ ಥೀಮ್ ಪಾರ್ಕ್‌ಗೆ ಡಿಸಿ ಸ್ವರೂಪಾ ಭೇಟಿ

kota (1)
Published on

ಕೋಟ: ಕೋಟತಟ್ಟು ಗ್ರಾಮ ಪಂಚಾಯಿತಿಯ ಕಾರಂತ ಥೀಮ್ ಪಾರ್ಕ್‌ಗೆ ಗುರುವಾರ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕಾರಂತ ಥೀಂ ಪಾರ್ಕ್ ಅಭಿವೃದ್ಧಿ ಕುರಿತಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಪಿಡಿಒ ಅವರೊಂದಿಗೆ ಚರ್ಚಿಸಿದರು.

ಪಂಚಾಯಿತಿಯೊಂದು ಸಾಹಿತಿಯೊಬ್ಬರ ಹೆಸರಿನಲ್ಲಿ ಥೀಮ್ ಪಾರ್ಕ್ ನಿರ್ಮಿಸಿ ಅದನ್ನು ಉತ್ತಮವಾಗಿ ನಿರ್ವಹಿಸುತ್ತಿರುವ ಕಾರ್ಯವೈಖರಿಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ, ಸಮೀಪದ ಕಲ್ಮಾಡಿ ಅಂಗನವಾಡಿ ಮಕ್ಕಳೊಂದಿಗೆ ಕೆಲಕಾಲ ಕಳೆದರು.

ಕೋಟತಟ್ಟು ಗ್ರಾಪಂ ಅಧ್ಯಕ್ಷ ಕೆ.ಸತೀಶ್ ಕುಂದರ್ ಬಾರಿಕೆರೆ, ಉಪಾಧ್ಯಕ್ಷೆ ಸರಸ್ವತಿ, ಸದಸ್ಯರಾದ ವಾಸು ಪೂಜಾರಿ, ಸೀತಾ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್, ಕಾರ್ಯದರ್ಶಿ ಸುಮತಿ ಅಂಚನ್, ಕಂದಾಯ ನಿರೀಕ್ಷಕರಾದ ಮಂಜುನಾಥ ಬಿಲ್ಲವ, ಗ್ರಾಮಾಡಳಿತಾಧಿಕಾರಿ ಚೆಲುವರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿ ಪೂರ್ಣಿಮಾ ಹಾಗೂ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net