More

    38 ಸಾವಿರ ಕುಟುಂಬಗಳಿಗೆ ವಸತಿ ಭಾಗ್ಯ ; ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಭರವಸೆ

    ಮಂಚೇನಹಳ್ಳಿ: ಸಚಿವರು ಮತ್ತು ಅಧಿಕಾರಿಗಳ ಕನ್ನಡ ಗೀತೆಗಳ ಗಾಯನ, ದಲಿತರ ಮನೆಯಲ್ಲಿ ಭೋಜನ, ಬೆಳಗ್ಗೆಯೇ ಜನರೊಂದಿಗೆ ಊರಿನ ಸಂಚಾರ, ಅಹವಾಲು ಸ್ವೀಕಾರ… ಇವು ಜಿಲ್ಲಾಧಿಕಾರಿ ನಡೆ ಗ್ರಾಮದ ಕಡೆ ಹೆಸರಿನಲ್ಲಿ ಜಿಲ್ಲಾಡಳಿತ ಪುರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕಂಡ ದೃಶ್ಯಗಳು. ಶನಿವಾರ ಮಧ್ಯಾಹ್ನ ಪ್ರಾರಂಭವಾದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಗ್ರಾಮ ವಾಸ್ತವ್ಯ ಭಾನುವಾರ ಮುಕ್ತಾಯ ಕಂಡಿತು.

    ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ.ಸುಧಾಕರ್, ಜಿಲ್ಲಾಧಿಕಾರಿ ಆರ್. ಲತಾ, ಜಿಪಂ ಸಿಇಒ ಪಿ.ಶಿವಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುವಾರ್, ಜಿಲ್ಲಾ ಅರಣ್ಯಾಧಿಕಾರಿ ಅರಸಲನ್ ಸೇರಿ ಹಲವರು ಗ್ರಾಮದ ದಲಿತ ಸಮುದಾಯದ ಗಂಗಾಧರ್ ಮನೆಯಲ್ಲಿ ಭೋಜನ ಸವಿದರು. ಸ್ವತಃ ಸಚಿವರು ಸೇರಿ ಅಧಿಕಾರಿಗಳು ರಾತ್ರಿ ಗ್ರಾಮದಲ್ಲೇ ವಾಸ್ತವ್ಯ ಹೂಡಿದ್ದರು.

    ಜಿಲ್ಲೆಯಲ್ಲಿನ ಬಡ ಜನರ ಸ್ವಂತ ಸೂರಿನ ಕನಸನ್ನು ನನಸು ವಾಡುವ ಉದ್ದೇಶದಿಂದ 834 ಎಕರೆ ಜಮೀನು ಗುರುತಿಸಿ, ನಿವೇಶನಗಳನ್ನಾಗಿ ವಿಂಗಡಿಸಿ, ಹಂಚಿಕೆಗೆ ಕ್ರಮ ಕೈಗೊಳ್ಳಲಾಗಿದೆ. ವರ್ಷದೊಳಗೆ 38 ಸಾವಿರ ಕುಟುಂಬಗಳಿಗೆ ವಸತಿ ಭಾಗ್ಯ ದೊರಕಲಿದೆ ಎಂದು ಡಾ.ಕೆ.ಸುಧಾಕರ್ ತಿಳಿಸಿದರು.

    ಮುಖ್ಯಮಂತ್ರಿ ಬಸವರಾಜ ಬೊವ್ಮಾಯಿ ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ರಾಜ್ಯಾದ್ಯಂತ 750 ಗ್ರಾ. ಪಂ.ಗಳನ್ನು ಅಮೃತ ಗ್ರಾಮ ಪಂಚಾಯಿತಿಗಳನ್ನಾಗಿ ಆಯ್ಕೆ ವಾಡಿದ್ದಾರೆ. ಇದರಡಿ ಗುರುತಿಸಲಾದ ಜಿಲ್ಲೆಯ 18 ಗ್ರಾಪಂಗಳಲ್ಲಿ ಪುರ ಗ್ರಾಪಂ ಸಹ ಸೇರಿದೆ ಎಂದರು.
    ಜನರ ಮನೆ ಬಾಗಿಲಿಗೆ ಬಂದು ಸರ್ಕಾರಿ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ಒದಗಿಸುವ, ಸಮಸ್ಯೆಗಳನ್ನು ಆಲಿಸಿ ಬಗೆಹರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ನಡೆ ಗ್ರಾಮದ ಕಡೆ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು.

    ಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಆರೋಗ್ಯ, ಕಂದಾಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಿಂದ ಶಿಬಿರಗಳು ನಡೆದವು. ಜನರಲ್ಲಿ ಜಾಗೃತಿ ಮೂಡಿಸಲು ವಾಹಿತಿ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಪುರ ಗ್ರಾಪಂ ಅಧ್ಯಕ್ಷ ವಿರುಪಾಕ್ಷಗೌಡ, ಉಪಾಧ್ಯಕ್ಷೆ ವಾಲಾಶ್ರೀ, ವ್ಯವಸಾಯ ಸೇವಾ ಸಹಕಾರ ಸಂದ ಅಧ್ಯಕ್ಷ ಟಿ.ಎನ್. ಜಗನ್ನಾಥ್, ಕೆಎಂಎಫ್ ನಿರ್ದೇಶಕ ಸುಬ್ಬಾರೆಡ್ಡಿ, ಗೌರಿಬಿದನೂರು ತಹಸೀಲ್ದಾರ್ ಶ್ರೀನಿವಾಸ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts