ಪಾಂಡವಪುರ ಸಕ್ಕರೆ ಕಾರ್ಖಾನೆಗೆ ಡಿಸಿ ಡಾ.ಕುಮಾರ ಭೇಟಿ: ಸಿಬ್ಬಂದಿಗಳ ಕುಂದು ಕೊರತೆ ಆಲಿಕೆ

2
Published on

ಮಂಡ್ಯ: ಜಿಲ್ಲಾಧಿಕಾರಿ ಡಾ.ಕುಮಾರ ಅವರು ಪಾಂಡವಪುರ ಸಕ್ಕರೆ ಕಾರ್ಖಾನೆಗೆ ಬುಧವಾರ ಭೇಟಿ ನೀಡಿ ಆಡಳಿತ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಕಾರ್ಖಾನೆಯಲ್ಲಿ ಕಬ್ಬು ಅರೆಯುವ ಘಟಕದಿಂದ ಹಿಡಿದು ಸಕ್ಕರೆ ಉತ್ಪಾದನಾ ಘಟಕದವರೆಗೂ ನಡೆಯುವ ಪ್ರಕ್ರಿಯೆ ಬಗ್ಗೆ ಪರಿಶೀಲನೆ ನಡೆಸಿ ಸಿಬ್ಬಂದಿಗಳ ಕುಂದು ಕೊರತೆಗಳನ್ನು ಆಲಿಸಿದರು. ಪಿಎಸ್‌ಎಸ್‌ಕೆ ಶಾಲೆಗೆ ಭೇಟಿ ನೀಡಿ ಶಾಲೆಯ ಹಾಜರಾತಿ, ಫಲಿತಾಂಶ ಹಾಗೂ ಮೂಲ ಸೌಕರ್ಯದ ಮಾಹಿತಿ ಪಡೆದುಕೊಂಡರು. ಅಂತೆಯೇ ಪಾಂಡವಪುರ ತಾಲೂಕು ಕಚೇರಿಗೆ ಭೇಟಿ ನೀಡಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಗೃಹಲಕ್ಷ್ಮೀ ಯೋಜನೆ ಉದ್ಘಾಟನೆ ಸಂಬಂಧ ಹಾಗೂ ಇಲಾಖಾವಾರು ಸಭೆ ನಡೆಸಿ ಸಾರ್ವಜನಿಕರ ಕುಂದು ಕೊರತೆಗಳನ್ನು ಸ್ವೀಕರಿಸಿ ನಿಯಮಾನುಸಾರ ಪರಿಶೀಲಿಸಿ ವಿಲೇವಾರಿ ಮಾಡುವಂತೆ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net