More

    ನರೈನ್​ ಆರ್ಭಟ, ಡೆಲ್ಲಿ ಕ್ಯಾಪಿಟಲ್ಸ್​ ಮೇಲೆ ನೈಟ್‌ ರೈಡರ್ಸ್‌ ಸವಾರಿ! ಕೆಕೆಆರ್​ಗೆ 106 ರನ್​ಗಳ ಜಯ

    ವಿಶಾಖಪಟ್ಟಣ: ಐಪಿಎಲ್ 2024 ರ 16 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 106 ರನ್​ಗಳಿಂದ ಮಣಿಸಿದ ಕೋಲ್ಕತ್ತಾ ನೈಟ್ ರೈಡರ್ಸ್ ಲೀಗ್​ನಲ್ಲಿ ಸತತ ಮೂರನೇ ಗೆಲುವು ದಾಖಲಿಸಿದೆ.

    ಇದನ್ನೂ ಓದಿ: ಯಡಿಯೂರಪ್ಪ ಮಗನನ್ನು ಸೋಲಿಸಲು ಅಮಿತ್ ಷಾ ಆಶೀರ್ವಾದ ಸಿಕ್ಕಿದೆ: ಈಶ್ವರಪ್ಪ

    ಇಲ್ಲಿನ ಡಾ.ವೈ.ಎಸ್. ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್‌ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ ಬರೋಬ್ಬರಿ 272 ರನ್‌ ಸಿಡಿಸಿತ್ತು. ಈ ಗುರಿ ಡೆಲ್ಲಿ ಕ್ಯಾಪಿಟಲ್ಸ್‌ 17.2 ಓವರ್‌ಗಳಲ್ಲೇ 166 ರನ್‌ಗಳಿಗೆ ಸರ್ವಪತನ ಕಂಡು ಸೋಲೊಪ್ಪಿಕೊಂಡಿತು.

    ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 272 ರನ್ ಗಳಿಸಿತು. ತಂಡದ ಪರ ಸ್ಫೋಟಕ ಬ್ಯಾಟಿಂಗ್ ಮಾಡಿದ ಸುನಿಲ್ ನರೈನ್ 7 ಬೌಂಡರಿ ಮತ್ತು 7 ಸಿಕ್ಸರ್‌ಗಳ ಸಹಿತ 85 ರನ್‌ಗಳ ಬಿರುಸಿನ ಇನ್ನಿಂಗ್ಸ್‌ ಆಡಿದರೆ, ಆಲ್​ರೌಂಡರ್​ ಆಟಗಾರ ಆಂಡ್ರೆ ರಸೆಲ್ 41 ರನ್ ಹಾಗೂ ರಿಂಕು ಸಿಂಗ್ 26 ರನ್‌ಗಳ ಸ್ಫೋಟಕ ಇನಿಂಗ್ಸ್ ಆಡಿದರು. ಅಲ್ಲದೇ ಅಧಿಕ ರನ್‌ರೇಟ್‌ನೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

    ಗುರಿ ಬೆನ್ನಟ್ಟಿದ ಡೆಲ್ಲಿ ಆರಂಭದಲ್ಲೇ ಪ್ರಮುಖ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಮಧ್ಯಮ ಕ್ರಮಾಂಕದಲ್ಲಿ ನಾಯಕ ರಿಷಬ್ ಪಂತ್ ಹಾಗೂ ಸ್ಟಬ್ಸ್ ಅರ್ಧಶತಕ ಸಿಡಿಸುವ ಮೂಲಕ ತಂಡ 100 ರನ್​ಗಳ ಒಳಗೆ ಆಲೌಟ್ ಆಗುವುದನ್ನು ತಪ್ಪಿಸಿದರು. ಅಂತಿಮವಾಗಿ ಡೆಲ್ಲಿ ತಂಡ ಪೂರ್ಣ 20 ಓವರ್​ಗಳನ್ನು ಆಡದೆ 17.2 ಓವರ್​ಗಳಲ್ಲಿ ತನ್ನೆಲ್ಲ ವಿಕೆಟ್ ಕಳೆದುಕೊಂಡು 166 ರನ್‌ಗಳಿಗೆ ಆಲೌಟ್‌ ಆಯಿತು.‘

    ಡೆಲ್ಲಿ ಕ್ಯಾಪಿಟಲ್ಸ್‌ ಪರ ವೈಭವ್‌ ಅರೋರ ಮತ್ತು ವರುಣ್‌ ಚಕ್ರವರ್ತಿ ತಲಾ 3 ವಿಕೆಟ್‌ ಕಿತ್ತರೆ, ದುಬಾರಿ ಆಟಗಾರ ಮಿಚೆಲ್‌ ಸ್ಟಾರ್ಕ್‌ 2 ವಿಕೆಟ್‌ ಹಾಗೂ ಆಂಡ್ರೆ ರಸೆಲ್‌, ಸುನೀಲ್‌ ನರೇನ್‌ ತಲಾ ಒಂದೊಂದು ವಿಕೆಟ್‌ ಕಿತ್ತರು.

    ರನ್ ಮಷಿನ್ ಕೊಹ್ಲಿಯನ್ನು ಔಟ್ ಮಾಡುವುದೇ ನನ್ನ ಗುರಿ: ಸಿದ್ದಾರ್ಥ್‌ ಹೀಗ್ಯಾಕೆ ಹೇಳಿದ್ರು ಗೊತ್ತಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts