More

    ಡಿಸಿಸಿ ಬ್ಯಾಂಕ್‌ನಿಂದ 2019-20ನೇ ಸಾಲಿನ ಸಾಲವನ್ನು ಸರ್ಕಾರ ಮನ್ನಾ ಮಾಡಲಿ

    ಮಾಲೂರು: ರಾಜ್ಯಾದ್ಯಂತ ಕರೊನಾ ಹರಡಿರುವುದರಿಂದ ಡಿಸಿಸಿ ಬ್ಯಾಂಕ್‌ನಿಂದ 2019-20ನೇ ಸಾಲಿನಲ್ಲಿ ರೈತರು ಪಡೆದ ಬೆಳೆ ಸಾಲವನ್ನು ಹಾಗೂ ಮಹಿಳಾ ಸಂಘಗಳಿಗೆ ನೀಡಿರುವ ಸಾಲದ ಹಣದಲ್ಲಿ 3 ತಿಂಗಳ ಕಂತಿನ ಸಾಲದ ಹಣವನ್ನು ಸರ್ಕಾರ ಮನ್ನಾ ಮಾಡಬೇಕು ಎಂದು ಶಾಸಕ ಕೆ.ವೈ.ನಂಜೇಗೌಡ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

    ಪಟ್ಟಣದ ಡಿಸಿಸಿ ಬ್ಯಾಂಕ್ ಕಚೇರಿಯಲ್ಲಿ ಶುಕ್ರವಾರ ದೊಡ್ಡಶಿವಾರ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದಿಂದ 90 ರೈತರಿಗೆ 1,36,28000 ರೂಗಳ ಬೆಳೆ ಸಾಲದ ಚೆಕ್ ವಿತರಿಸಿ ಮಾತನಾಡಿ, ಕೋಲಾರ ಡಿಸಿಸಿ ಬ್ಯಾಂಕ್ ರೈತರಿಗೆ ಹಾಗೂ ಮಹಿಳಾ ಸ್ವ-ಸಹಾಯ ಸಂಘಗಳಿಗೆ ಸಾಲ ನೀಡುವುದರಲ್ಲಿ ಹಾಗೂ ವಸೂಲಿ ಮಾಡುವುದರಲ್ಲಿ ರಾಜ್ಯದಲ್ಲೇ ಮೊದಲನೇ ಸ್ಥಾನದಲ್ಲಿದೆ ಎಂದರು.

    ಕರೊನಾ ಇರುವುದರಿಂದ ಬೆಳೆ ನಾಶವಾಗಿ ಸಂಕಷ್ಟದಲ್ಲಿರುವ ರೈತರು ಬ್ಯಾಂಕಿನಿಂದ ಪಡೆದ ಸಾಲದ ಅಸಲು ಸಹ ಮರುಪಾವತಿ ಮಾಡಲು ಸಾಧ್ಯವಾಗುತ್ತಿಲ್ಲ. ಸರ್ಕಾರ ಈಗಾಗಲೆ ಕೆಲವು ಪ್ಯಾಕೇಜ್ ಪ್ರಕಟಿಸಿದೆ. ಆದರೆ ರೈತರಿಗೆ ಹಾಗೂ ಮಹಿಳಾ ಸಂಘಗಳಿಗೆ ಪ್ಯಾಕೇಜ್ ಪ್ರಕಟಿಸಿದರೆ ಹೆಚ್ಚು ಅನುಕೂಲವಾಗುತ್ತದೆ. ಡಿಸಿಸಿ ಬ್ಯಾಂಕ್ ಅಧ್ಯಕ ಬ್ಯಾಲಹಳ್ಳಿ ಗೋವಿಂದಗೌಡ ಅವರ ಕಾರ್ಯಕಾರಿ ಮಂಡಳಿ ಡಿಸಿಸಿ ಬ್ಯಾಂಕ್ ಕಟ್ಟಿ ಬಲಿಷ್ಠವಾಗಿ ಮಾಡಿದ್ದಾರೆ. ತಾಲೂಕಿನಲ್ಲಿರುವ 14 ಕೃಷಿ ಪತ್ತಿನ ಸಹಕಾರ ಸಂಘಗಳ ಕಾರ್ಯಕಾರಿ ಮಂಡಳಿಗಳು ಶಿಸ್ತುಬದ್ಧವಾಗಿ ಕೆಲಸ ಮಾಡುತ್ತಿದ್ದು, ಸಹಕಾರ ಸಂಸ್ಥೆಗಳನ್ನು ಉಳಿಸಿ ಬೆಳಸಲು ರೈತರು ಹಾಗೂ ಮಹಿಳಾ ಸಂಘಗಳು ಪಡೆದ ಸಾಲವನ್ನು ಸಕಾಲಕ್ಕೆ ಮರುಪಾವತಿಸಬೇಕು ಎಂದರು.

    ನಿರ್ದೇಶಕ ಕೆ.ಎಚ್.ಚನ್ನರಾಯಪ್ಪ, ದೊಡ್ಡಶಿವಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಸ್.ವಿ. ಗೋವರ್ಧನರೆಡ್ಡಿ, ವ್ಯವಸ್ಥಾಪಕ ನಿರ್ದೇಶಕರಾದ ಎಚ್.ವಿ.ತಿರುಮೇಗೌಡ, ಸುಧಾಕರ್, ಗೋಪಿನಾಥ್, ಮುನಿನಾರಾಯಣಪ್ಪ, ವೆಂಕಟಪ್ಪ, ವೆಂಕಟಗಿರಿಯಪ್ಪ, ಶ್ರೀನಿವಾಸ್, ರಾಧಾಕೃಷ್ಣ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts