More

    ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಪ್ರತಿನಿಧಿ ಆಯ್ಕೆಗೆ ಕಸರತ್ತು

    ಕೋಲಾರ: ಅಪೆಕ್ಸ್ ಬ್ಯಾಂಕಿಗೆ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಪ್ರತಿನಿಧಿಯಾಗಿ ಆಯ್ಕೆ ಮಾಡುವ ಸಂಬಂಧ ಸೋಮವಾರ ಕೋಲಾರ ಡಿಸಿಸಿನಲ್ಲಿ ಮಹತ್ವದ ಸಭೆ ನಡೆಯಿತು.

    ರಾಜ್ಯದ 21 ಡಿಸಿಸಿ ಬ್ಯಾಂಕಿನಿಂದ ತಲಾ ಒಬ್ಬರು ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾಗಲು ಅವಕಾಶವಿದ್ದು, ಮುಳಬಾಗಿಲಿನ ನೀಲಕಂಠೇಗೌಡ 5 ವರ್ಷ ಜಿಲ್ಲೆಯ ಪ್ರತಿನಿಧಿಯಾಗಿದ್ದು. ಅವರ ಅಧಿಕಾರಾವಧಿ ಮುಕ್ತಾಯಗೊಂಡಿರುವುದರಿಂದ ಹೊಸದಾಗಿ ಜಿಲ್ಲಾ ಪ್ರತಿನಿಧಿ ಆಯ್ಕೆ ಮಾಡಲು ಕರೆದಿದ್ದ ಸಭೆಯಲ್ಲಿ ಶಾಸಕರಾದ ಕೆ.ಆರ್.ರಮೇಶ್ ಕುಮಾರ್, ಕೆ.ಶ್ರೀನಿವಾಸಗೌಡ, ಕೆ.ವೈ.ನಂಜೇಗೌಡ, ಎಸ್.ಎನ್.ನಾರಾಯಣಸ್ವಾಮಿ, ಗೌರಿಬಿದನೂರಿನ ಶಿವಶಂಕರರೆಡ್ಡಿ, ಮಾಜಿ ಶಾಸಕರಾದ ಕೊತ್ತೂರು ಮಂಜುನಾಥ್ ಇನ್ನಿತರರು ಪಾಲ್ಗೊಂಡಿದ್ದರು.
    ಪ್ರತಿನಿಧಿಯಾಗಲು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ, ನಿರ್ದೇಶಕರಾದ ಯಲವಾರ ಸೊಣ್ಣೇಗೌಡ, ಎಂ.ಎಲ್.ಅನಿಲ್‌ಕುಮಾರ್, ನೀಲಕಂಠೇಗೌಡ, ಹನುಮಂತರೆಡ್ಡಿ ಅಪೇಕ್ಷೆ ವ್ಯಕ್ತಪಡಿಸಿದರು.

    ಪೈಪೋಟಿ ತಪ್ಪಿಸುವ ಸಲುವಾಗಿ ಶಾಸಕರು ಡಿಸಿಸಿ ಬ್ಯಾಂಕ್ ನಿರ್ದೇಶಕರ ಅಭಿಪ್ರಾಯ ಕೇಳಿದಾಗ ಬಹುತೇಕರು ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡರ ಪರ ಒಲವು ತೋರಿದರೆನ್ನಲಾಗಿದೆ.
    ನೀಲಕಂಠೇಗೌಡ ಮತ್ತೊಂದು ಅವಧಿಗೆ ತಮ್ಮನ್ನು ಜಿಲ್ಲಾ ಪ್ರತಿನಿಧಿಯಾಗಿ ಆಯ್ಕೆ ಮಾಡಿ ಕಳುಹಿಸಲು ತಿಳಿಸಿದ್ದು ಬಹುಮತದ ಆಧಾರದ ಮೇಲೆ ಜಿಲ್ಲಾ ಪ್ರತಿನಿಧಿ ಆಯ್ಕೆ ಮಾಡಿ ಕಳುಹಿಸಲು ಸಭೆ ತೀರ್ಮಾನಿಸಿದ್ದು ಡಿ.20ರಂದು ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆ ಇದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts