More

    ಸಂಕಷ್ಟದ ಸಮಯದಲ್ಲಿ ರೈತರಿಗೆ ಡಿಸಿಸಿ ಬ್ಯಾಂಕ್ ಬೆನ್ನೆಲುಬು

    ಗೌರಿಬಿದನೂರು: ಸಂಕಷ್ಟದ ಸಮಯದಲ್ಲಿ ಬಡ್ಡಿ ರಹಿತ ಸಾಲ ಸೌಲಭ್ಯ ಕಲ್ಪಿಸುವ ಮೂಲಕ ಡಿಸಿಸಿ ಬ್ಯಾಂಕ್ ರೈತರಿಗೆ ಬದುಕಿಗೆ ಬೆನ್ನೆಲುಬಾಗಿ ನಿಂತಿದೆ ಎಂದು ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ಹೇಳಿದರು.

    ತಾಲೂಕಿನ ಕಲ್ಲೂಡಿಯಲ್ಲಿ ಭಾನುವಾರ ಡಿಸಿಸಿ ಬ್ಯಾಂಕ್‌ನಿಂದ ಆಯೋಜಿಸಿದ್ದ ಸಾಲದ ಎಟಿಎಂ ಕಾರ್ಡ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ ರೈತರ ಕುಟುಂಬಗಳಿಗೆ ನೆರವಾಗುವ ನಿಟ್ಟಿನಲ್ಲಿ ಡಿಸಿಸಿ ಬ್ಯಾಂಕ್ ವತಿಯಿಂದ ಸ್ಥಳೀಯ ವ್ಯವಸಾಯ ಸೇವಾ ಸಹಕಾರ ಸಂಘದ ಮೂಲಕ ಸಾಲದ ಸೌಲಭ್ಯ ಕಲ್ಪಿಸಲಾಗಿದೆ. ಇದರಿಂದಾಗಿ ರೈತರು ನೆಮ್ಮದಿಯಿಂದ ಬದುಕಲು ಸಾಧ್ಯವಾಗುತ್ತಿದೆ. ಈ ಹಿಂದೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿ ರೈತರ ಸಾಲಮನ್ನಾ ಮಾಡುವ ಮೂಲಕ ಅವರ ಕಷ್ಟಗಳಿಗೆ ನೆರವಾಗಿತ್ತು. ತಾಲೂಕಿನಲ್ಲಿನ ರೈತರಿಗೆ ಗರಿಷ್ಠ ಮಟ್ಟದಲ್ಲಿ ಸಾಲದ ಸೌಲಭ್ಯಗಳನ್ನು ನೀಡುವ ಮೂಲಕ ರೈತರ ಆರ್ಥಿಕ ಸಬಲೀಕರಣಕ್ಕೆ ಶ್ರಮಿಸಲಾಗುವುದು ಎಂದು ತಿಳಿಸಿದರು.

    ಡಿಸಿಸಿ ಬ್ಯಾಂಕ್ ನಿರ್ದೇಶಕ ಮರಳೂರು ಹನುಮಂತರೆಡ್ಡಿ ಮಾತನಾಡಿ, ತಾಲೂಕಿನಲ್ಲಿರುವ ಸುಮಾರು 50 ಸಾವಿರಕ್ಕೂ ಅಧಿಕ ಬಡಕುಟುಂಬಗಳಿಗೆ ಡಿಸಿಸಿ ಬ್ಯಾಂಕ್‌ನಿಂದ ಸಾಲ ಸೌಲಭ್ಯ ನೀಡಲಾಗಿದೆ. ಬ್ಯಾಂಕಿನಿಂದ ಪಡೆದ ಸಾಲವನ್ನು ರೈತರು ಮತ್ತು ಮಹಿಳಾ ಸಂಘದ ಫಲಾನುಭವಿಗಳು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಸಕಾಲದಲ್ಲಿ ಮರುಪಾವತಿ ಮಾಡಬೇಕು. ಬ್ಯಾಂಕಿನಲ್ಲಿನ ಎಲ್ಲ ವ್ಯವಹಾರ ಸಂಪೂರ್ಣವಾಗಿ ಗಣಕೀಕೃತವಾಗುವ ಮೂಲಕ ಪಾರದರ್ಶಕವಾದ ಆಡಳಿತ ನಡೆಸುತ್ತಿದ್ದೇವೆ ಎಂದರು.

    ಕಲ್ಲೂಡಿ ವಿಎಸ್‌ಎಸ್‌ಎನ್ ವತಿಯಿಂದ 75 ರೈತರಿಗೆ ಮತ್ತು 40 ಮಹಿಳಾ ಸಂಘಗಳಿಗೆ ಸೇರಿ ಒಟ್ಟು 3.57 ಲಕ್ಷ ಸಾಲದ ಎಟಿಎಂ ಕಾರ್ಡ್‌ಗಳನ್ನು ವಿತರಣೆ ಮಾಡಲಾಗಿದೆ ಎಂದು ವಿಎಸ್‌ಎಸ್‌ಎನ್ ಕಾರ್ಯದರ್ಶಿ ಕೆ.ಸಿ.ರಾಮಲಿಂಗಪ್ಪ ತಿಳಿಸಿದರು.

    ಬ್ಯಾಂಕಿನ ವ್ಯವಸ್ಥಾಪಕ ಮೊಹಮ್ಮದ್ ಅಸ್ಲಾಂ ಬ್ಯಾಂಕಿನಲ್ಲಿ ಗ್ರಾಹಕರಿಗೆ ದೊರೆಯುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
    ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯರಾದ ಕೆ.ಎಂ.ಗಾಯತ್ರಿ ಬಸವರಾಜ್, ಸಹಕಾರ ಸಂಘದ ಮಾಜಿ ಅಧ್ಯಕ್ಷ ಪಿ.ಎನ್.ನಾಗರಾಜ್, ನಿರ್ದೇಶಕರಾದ ಅಶ್ವತ್ಥನಾರಾಯಣಪ್ಪ, ಕೆ.ವಿ.ವೆಂಕಟಾಚಲ, ಕೆ.ಪಿ.ನರಸಿಂಹಮೂರ್ತಿ, ಕೆ.ಎನ್.ವೆಂಕಟಪ್ಪ, ವಿಎಸ್‌ಎಸ್‌ಎನ್ ಸಿಬ್ಬಂದಿ ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts