More

    ಸಹಕಾರ ಕ್ಷೇತ್ರ ರಾಜಕೀಯದಿಂದ ಮುಕ್ತವಾಗಲಿ

    ಸೊರಬ: ಪ್ರತಿ ಗ್ರಾಮಗಳಲ್ಲೂ ಸಹಕಾರ ಕ್ಷೇತ್ರದ ವಿಸ್ತರಣೆಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಸಹಕಾರ ಬ್ಯಾಂಕ್ ನಿರ್ದೇಶಕ ಶ್ರೀಪಾದ ಹೆಗಡೆ ಹೇಳಿದರು.

    ಪಟ್ಟಣದಲ್ಲಿ ಬುಧವಾರ ತಾಲೂಕಿನ ಸಹಕಾರ ಸಂಘ ಹಾಗೂ ಬ್ಯಾಂಕ್​ಗಳು ಹಮ್ಮಿಕೊಂಡಿದ್ದ 67ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರಾಜಕೀಯ ಹಸ್ತಕ್ಷೇಪದಿಂದ ಸಹಕಾರ ಕ್ಷೇತ್ರ ಮುಕ್ತವಾದಾಗ ಮಾತ್ರ ಉನ್ನತಿ ಕಾಣಲು ಸಾಧ್ಯ. ರಾಜಕೀಯದಿಂದ ದೂರ ಉಳಿದು ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿಗಳು ಪ್ರಯತ್ನಿಸಬೇಕು ಎಂದು ತಿಳಿಸಿದರು.

    ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಹಕಾರ ಕ್ಷೇತ್ರಕ್ಕೆ ಹೆಚ್ಚು ನೆರವು ನೀಡುತ್ತಿವೆ. ಕರೊನಾ ಸಂದರ್ಭದಲ್ಲಿ ಹಾಲು ಮಾರಾಟ ಸ್ಥಗಿತವಾಗಿ 5 ಲಕ್ಷ ಲೀಟರ್ ಹಾಲು ಉಳಿಯುತ್ತಿತ್ತು. ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದ ಪರಿಣಾಮ ಹಾಲಿನ ಪುಡಿಗೆ ಸ್ಥಳೀಯ ಹಾಲನ್ನು ಬಳಸಿಕೊಳ್ಳಲು ಸಾಧ್ಯವಾಯಿತು. ಇದರಿಂದ ಹಾಲು ಒಕ್ಕೂಟಗಳು ಆರ್ಥಿಕ ಸಂಕಷ್ಟದಿಂದ ಹೊರಬರಲು ಸಾಧ್ಯವಾಯಿತು ಎಂದರು.

    ತಾಲೂಕಿನ ಪ್ರಾಥಮಿಕ ಸಹಕಾರ ಬ್ಯಾಂಕ್​ಗಳಿಂದ 2 ಸಾವಿರ ರೈತರಿಗೆ ಜಿಲ್ಲಾ ಸಹಕಾರ ಬ್ಯಾಂಕ್ 21 ಕೋಟಿ ರೂ. ಸಾಲ ನೀಡಿದೆ. ಜಿಲ್ಲಾ ಸಹಕಾರ ಬ್ಯಾಂಕ್​ನಿಂದ ತಾಲೂಕಿಗೆ 91 ಕೋಟಿ ರೂ. ಸಾಲ ನೀಡಲಾಗಿದೆ. ವಾಹನ ಸಾಲವನ್ನು ಡಿಸೆಂಬರ್ ಮೊದಲ ವಾರದವರೆಗೂ ವಿಸ್ತರಿಸಿದ್ದು ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts