ಶಿವಮೊಗ್ಗ: ಡಿಸಿಸಿ ಬ್ಯಾಂಕ್ ಚುನಾವಣೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಜೂ. 20ರಂದು ಮುಕ್ತಾಯವಾಗಲಿದ್ದು, ಬುಧವಾರ ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಸೇರಿ ಪ್ರಮುಖರು ನಾಮಪತ್ರ ಸಲ್ಲಿಸಿದರು.
ಜಿಪಂ ಮಾಜಿ ಸದಸ್ಯ ಹೊನಗೋಡು ರತ್ನಾಕರ, ಶಿವಮೊಗ್ಗ ಗ್ರಾಮಾಂತರ ಕಾಂಗ್ರೆಸ್ ಮುಖಂಡ ಎಚ್.ಜಿ.ಮಲ್ಲಯ್ಯ, ಶಿವಮೊಗ್ಗ ಗ್ರಾಮಾಂತರ ಬಿಜೆಪಿ ಮುಖಂಡ ವಿರೂಪಾಕ್ಷಪ್ಪ, ಶಿವಮೊಗ್ಗ ಉದ್ಯಮಿ ಮಹಾಲಿಂಗಯ್ಯ ಶಾಸ್ತ್ರಿ ನಾಮಪತ್ರ ಸಲ್ಲಿಸಿದ ಪ್ರಮುಖರಾಗಿದ್ದಾರೆ.
ಅಂತಿಮ ದಿನ ಇನ್ನಷ್ಟು ಮಂದಿ ನಾಮಪತ್ರ ಸಲ್ಲಿಸುವ ಸಾಧ್ಯತೆಗಳಿವೆ. ಈ ಮಧ್ಯೆ ನಾಮಪತ್ರ ಹಿಂಪಡೆಯುವ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸಹಕಾರ ಭಾರತಿ ಪ್ರಮುಖರು ಸುದ್ದಿಗೋಷ್ಠಿ ನಡೆಸಿ ತಮ್ಮ ಬಣದ ಅಭ್ಯರ್ಥಿಗಳು ಯಾರು ಎಂಬುದನ್ನು ಬಹಿರಂಗಪಡಿಸಲು ನಿರ್ಧರಿಸಿದ್ದಾರೆ. ಇದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.