More

    ಫೆ.11 ರಂದು ನಡೆಯುವ ಸಹಕಾರಿ ಸಮಾವೇಶಕ್ಕೆ 40 ಸಾವಿರ ಸಹಕಾರಿಗಳು ಭಾಗಿ

    ಮಂಗಳೂರು: ಕೇಂದ್ರ ಸರ್ಕಾರದ ಗೃಹ ಹಾಗೂ ಸಹಕಾರ ಇಲಾಖೆಯ ಸಚಿವ ಅಮಿತ್ ಶಾ ಅವರು ಪ್ರಥಮ ಬಾರಿಗೆ ಜಿಲ್ಲೆಗೆ ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಬೃಹತ್ ಸಹಕಾರಿ ಸಮಾವೇಶ ಫೆ.11 ರಂದು ಪುತ್ತೂರಿನ ತೆಂಕಿಲದಲ್ಲಿ ನಡೆಯಲಿದೆ. ಈ ಸಮಾವೇಶದ ಪೂರ್ವಭಾವಿ ಸಭೆಯು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆಯಿತು.
    ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸಹಕಾರ ಸಂಘಗಳ ಪ್ರತಿನಿಧಿಗಳು ಭಾಗವಹಿಸಿದ ಈ ಪೂರ್ವಭಾವಿ ಸಭೆಯಲ್ಲಿ ಸಮಾವೇಶದ ಯಶಸ್ಸಿಗೆ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ನೇತೃತ್ವದಲ್ಲಿ ಸಹಕಾರಿಗಳೆಲ್ಲರೂ ಒಗ್ಗೂಡಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದಾಗಿ ನಿರ್ಧರಿಸಲಾಯಿತು.
    ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು, ಸಹಕಾರ ಸಚಿವರಾದ ಬಳಿಕ ಅಮಿತ್ ಶಾ ಅವರು ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಅಮಿತ್ ಶಾ ಅವರು ಪಾಲ್ಗೊಳ್ಳುವ ಈ ಸಹಕಾರಿ ಸಮಾವೇಶ ಅರ್ಥಪೂರ್ಣವಾಗಿ ನಡೆಯಬೇಕಿದೆ. ಹಾಗಾಗಿ ಸುಮಾರು 35,000 ರಿಂದ 40,000 ಸಹಕಾರಿಗಳು ಈ ಸಮಾವೇಶದಲ್ಲಿ ಭಾಗವಹಿಸಲಿರುವರು ಎಂದರು.
    ಎಸ್‌ಸಿಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷ ವಿನಯಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಟಿ.ಜಿ. ರಾಜಾರಾಮ ಭಟ್, ಶಶಿಕುಮಾರ್ ರೈ ಬಾಲ್ಯೊಟ್ಟು, ದ.ಕ. ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕರಾದ ರಮೇಶ್, ಸಹಕಾರ ಸಂಘಗಳ ಸಹಾಯಕ ನಿಬಂಧಕರುಗಳಾದ ಸುಧೀರ್ ಕುಮಾರ್, ತ್ರಿವೇಣಿ ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts