ಅರಣ್ಯವಾಸಿಗಳ ಪುನರ್ವಸತಿಗೆ ಸೂಕ್ತ ಕ್ರಮ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

ಬೆಳಗಾವಿ:ಭೀಮಗಡ ಅಭಯಾರಣ್ಯದಲ್ಲಿ ವಾಸಿಸುತ್ತಿರುವ ಖಾನಾಪುರ ತಾಲೂಕಿನ ತಳೇವಾಡಿ ಗ್ರಾಮಸ್ಥರನ್ನು ಸ್ಥಳಾಂತರಿಸುವುದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಶನಿವಾರ ಗ್ರಾಮಸ್ಥರ ಸಭೆಯನ್ನು ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು, ಅಭಯಾರಣ್ಯದಿಂದ ಹೊರಬರಲು ಇಚ್ಛಿಸುವ ಕುಟುಂಬಗಳಿಗೆ‌ ಸರಕಾರದ‌ ಮಾರ್ಗಸೂಚಿ ಪ್ರಕಾರ ಪುನರ್ವಸತಿಯನ್ನು ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.ಅಭಯಾರಣ್ಯದಲ್ಲಿ ವಾಸಿಸುವ ಜನರಿಗೆ ರಸ್ತೆ, ನೀರು, ವಿದ್ಯುತ್ ಮತ್ತಿತರ ಮೂಲಸೌಕರ್ಯಗಳನ್ನು ಕಲ್ಪಿಸುವುದು ಸಾಧ್ಯವಾಗುತ್ತಿಲ್ಲ. ಆದ್ದರಿಂದ ತಳೇವಾಡಿ‌ ಗ್ರಾಮದ ಜನರು ಸ್ವ ಇಚ್ಛೆಯಿಂದ ಸ್ಥಳಾಂತರಕ್ಕೆ ಒಪ್ಪಿಗೆ ನೀಡಿದರೆ ತಕ್ಷಣವೇ ಎಲ್ಲ ರೀತಿಯ ನೆರವು ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.ಅರಣ್ಯವಾಸಿಗಳ ಪುನರ್ವಸತಿಗೆ ಸೂಕ್ತ ಕ್ರಮ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮಸ್ಥರು, ಎಲ್ಲ‌ ಕುಟುಂಬಗಳಿಗೆ ಪರ್ಯಾಯ ಜಾಗೆ ಮತ್ತು ಮನೆಯನ್ನು ಒದಗಿಸಬೇಕು ಎಂದು ಮನವಿ ಮಾಡಿಕೊಂಡರು.ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ಅವರು, ಸರಕಾರದ‌ ಮಾರ್ಗಸೂಚಿ ಪ್ರಕಾರ ವ್ಯವಸ್ಥೆ‌ ಮಾಡಲಾಗುವುದು ಎಂದರು.
ಗ್ರಾಮಸ್ಥರ‌ ಬಳಿ ಇರುವ ದಾಖಲೆಗಳನ್ನು ಪರಿಶೀಲಿಸಬೇಕು ಹಾಗೂ ಪುನರ್ವಸತಿಗಾಗಿ ಸರಕಾರದಿಂದ ಬಿಡುಗಡೆಯಾಗುವ ಅನುದಾನದ ಬಳಕೆಗೆ ಅನುಕೂಲವಾಗುವಂತೆ ಜಿಲ್ಲಾಧಿಕಾರಿಗಳು ಮತ್ತು ಪುನರ್ವಸತಿ ಸಮಿತಿಯ ಸದಸ್ಯ‌ ಕಾರ್ಯದರ್ಶಿಗಳ ಹೆಸರಿನಲ್ಲಿ ಜಂಟಿ‌ ಖಾತೆ ತೆರಯುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನವನ್ನು ನೀಡಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಡಿಸಿಎಫ್ ಮರಿಯಾ ಕ್ರಿಸ್ತುರಾಜಾ, ಎಸಿಎಫ್ ಸುನೀತಾ ನಿಂಬರಗಿ, ಖಾನಾಪುರ ತಹಶೀಲ್ದಾರ ಪ್ರಕಾಶ್ ಗಾಯಕವಾಡ ಸೇರಿದಂತೆ ಅರಣ್ಯ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ತಳೇವಾಡಿ ಗ್ರಾಮದ ಜನರು ಸಭೆಯಲ್ಲಿ ಉಪಸ್ಥಿತರಿದ್ದರು.
***ಅರಣ್ಯವಾಸಿಗಳ ಪುನರ್ವಸತಿಗೆ ಸೂಕ್ತ ಕ್ರಮ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

Share This Article

ಬಿಕ್ಕಳಿಕೆ ಏಕೆ ಬರುತ್ತದೆ? ಕಿರಿಕಿರಿ ಉಂಟುಮಾಡುವ ಅದನ್ನು ನಿಯಂತ್ರಿಸುವುದು ಹೇಗೆ?

 ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…

ಈ ದಿನಾಂಕದಂದು ಜನಿಸಿದವರು ದಾನದಲ್ಲಿ ಕರ್ಣನನ್ನು ಮೀರಿಸುತ್ತಾರೆ! ನೀವೂ ಹುಟ್ಟಿದ್ದು ಇದೇ ದಿನಾನಾ?

ಜ್ಯೋತಿಷ್ಯಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಇದರ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು…

ಗೋಲ್ಡನ್ ಅವರ್ ರಹಸ್ಯ: ಮುಂಜಾನೆ ಬೇಗ ಏಳುವುದರಿಂದ ಇದೆ 6 ಪ್ರಯೋಜನಗಳು

 ಬೆಂಗಳೂರು: ಮನೆಯಲ್ಲಿ ಕೆಲವರು ಸೂರ್ಯೋದಯಕ್ಕೂ ಮೊದಲೇ ಏಳುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಮುಂಜಾನೆ ಬೇಗ ಏಳುವುದನ್ನು ರೂಢಿ…