More

    ಜೂ.22ರಂದು ಡಿಸಿಇಟಿ ಪರೀಕ್ಷೆ: ಆನ್‌ಲೈನ್ ಬದಲು ಒಎಂಆರ್‌ಗೆ ವಾಪಸ್ಸಾದ ಕೆಇಎ

    ಬೆಂಗಳೂರು ಡಿಪ್ಲೊಮಾ ಅಭ್ಯರ್ಥಿಗಳಿಗೆ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷದ ಅಥವಾ 3ನೇ ಸೆಮಿಸ್ಟರ್‌ನ ಕೋರ್ಸ್‌ಗಳಿಗೆ ಪ್ರವೇಶಕ್ಕೆ ಜೂ.22ರಂದು ಡಿಪ್ಲೊಮಾ ಸಾಮಾನ್ಯ ಪ್ರವೇಶ ಪರೀಕ್ಷೆ-2024 ಪರೀಕ್ಷೆ ನಡೆಸಲಾಗುತ್ತಿದೆ. ಪರೀಕ್ಷೆಯನ್ನು ಆನ್‌ಲೈನ್ ಬದಲು ಆ್ಲೈನ್ ಮಾದರಿಯಲ್ಲಿ ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ.

    ಡಿಸಿಇಟಿ ಪರೀಕ್ಷೆಯನ್ನು ಆನ್‌ಲೈನ್ ಮೂಲಕ ನಡೆಸಲಾಗುವುದೆಂದು ಈ ಮೊದಲು ತಿಳಿಸಲಾಗಿತ್ತು. ಆದರೆ, ವಿವಿಧ ಕಾರಣಗಳಿಂದಾಗಿ ಪರೀಕ್ಷೆಯನ್ನು ಆಫ್‌ಲೈನ್ ಸ್ವರೂಪದಲ್ಲಿ ಹಿಂದಿನ ವರ್ಷಗಳಲ್ಲಿ ನಡೆಸಿದಂತೆಯೇ ಓಎಂಆರ್ ಉತ್ತರ ಪತ್ರಿಕೆಯ ಮಾದರಿಯಲ್ಲಿ ನಡೆಸಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

    ಪರೀಕ್ಷೆಯನ್ನು ಬಾಗಲಕೋಟೆ, ಬಳ್ಳಾರಿ, ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಉಡುಪಿ, ಮೈಸೂರು, ಶಿವಮೊಗ್ಗ, ತುಮಕೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಮಾತ್ರ ನಡೆಸಲಾಗುವುದು. ಡಿಸಿಇಟಿ-2024ಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಈ ಮೇಲಿನ ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಜಿಲ್ಲೆಗಳನ್ನು ಪರೀಕ್ಷಾ ಸ್ಥಳವನ್ನಾಗಿ ಆಯ್ಕೆ ಮಾಡಿಕೊಂಡಿರುವ ಅಭ್ಯರ್ಥಿಗಳು ಈ ಮೇಲಿನ ಜಿಲ್ಲೆಗಳಲ್ಲಿ ಒಂದನ್ನು ಆಯ್ಕೆ ಮಾಡಿ ಡಿಸಿಇಟಿ-2024 ಪರೀಕ್ಷೆಗೆ ಹಾಜರಾಗಬೇಕು ಎಂದು ಅವರು ಸೂಚಿಸಿದ್ದಾರೆ.

    ಈ ಮೇಲಿನ ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಜಿಲ್ಲೆಗಳನ್ನು ಪರೀಕ್ಷಾ ಸ್ಥಳವನ್ನಾಗಿ ಆಯ್ಕೆ ಮಾಡಿಕೊಂಡಿರುವ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ನಿಗದಿತ ಲಿಂಕ್ ಮೂಲಕ ಮೇ 24ರ ಬೆಲಗ್ಗೆ 11 ಗಂಟೆಯಿಂದ 27ರ ರಾತ್ರಿ 11.59ರೊಳಗೆ ಬದಲಿ ಪರೀಕ್ಷಾ ಜಿಲ್ಲೆಯನ್ನು
    ಆಯ್ಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

    ಈ ಮೇಲೆ ತಿಳಿಸಿರುವ ಜಿಲ್ಲೆಗಳ ಪೈಕಿ ಯಾವುದಾದರೂ ಒಂದು ಜಿಲ್ಲೆಯನ್ನು ಪರೀಕ್ಷಾ ಕೇಂದ್ರವನ್ನಾಗಿ ಆಯ್ಕೆ ಮಾಡಿಕೊಂಡಿರುವ ಅಭ್ಯರ್ಥಿಗಳು ಮತ್ತೊಮ್ಮೆ ಪರೀಕ್ಷಾ ಕೇಂದ್ರದ ಜಿಲ್ಲೆಯನ್ನು ಆಯ್ಕೆ ಮಾಡುವ ಅಗತ್ಯವಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts