More

    ಒಕ್ಕಲಿಗರ ಮೀಸಲು ಹೆಚ್ಚಳ ಬೇಡಿಕೆಗೆ ಪ್ರತಿಕ್ರಿಯಿಸಿದ ಡಾ.ಅಶ್ವತ್ಥನಾರಾಯಣ

    ಬೆಂಗಳೂರು: ಮೀಸಲು ಪ್ರಮಾಣವನ್ನು ಹೆಚ್ಚಳ ಮಾಡಬೇಕು ಎಂದು ಎಲ್ಲ ಸಮುದಾಯಗಳು ಕೇಳುವುದು ಸಹಜ. ಪ್ರತಿಯೊಬ್ಬರಿಗೂ ಅವರದ್ದೇ ಆದ ಆಕಾಂಕ್ಷೆಗಳಿರುತ್ತವೆ. ವೈಜ್ಞಾನಿಕವಾಗಿ ಹಾಗೂ ನ್ಯಾಯ ಸಮ್ಮತವಾಗಿ ಯಾರಿಗೆ ಮೀಸಲು ಸೌಲಭ್ಯ ಸಿಗಬೇಕೋ ಅವರಿಗೆ ನೀಡಲು ಸರಕಾರ ಸಂವಿಧಾನದ ಚೌಕಟ್ಟನಲ್ಲಿ ಪ್ರಯತ್ನ ಮಾಡಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

    ಬೆಂಗಳೂರಿನ ಸರಕಾರಿ ಕಲಾ ಕಾಲೇಜಿನಲ್ಲಿ ಗುರುವಾರ ನೂತನ ಜಿಮ್‌ ಹೌಸ್‌ ಹಾಗೂ ವಾರ್ಷಿಕ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ನಂತರ ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ ಮಾತನಾಡಿದ ಡಿಸಿಎಂ; ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಒಕ್ಕಲಿಗರಿಗೆ ಮೀಸಲು ಹೆಚ್ಚಿಸುವ ಹಾಗೂ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವ ಬೇಡಿಕೆ ಇಟ್ಟಿರುವ ಬಗ್ಗೆ ಗಮನ ಸೆಳೆದಾಗ ಮೇಲಿನಂತೆ ಉತ್ತರಿಸಿದರು.

    ನಾನಾ ಸಮುದಾಯಗಳು ಮೀಸಲು ಸೌಲಭ್ಯಕ್ಕಾಗಿ ಹೋರಾಟ ನಡೆಸುತ್ತಿವೆ. ಸರಕಾರದ ಮುಂದೆ ಬೇಡಿಕೆ ಮಂಡಿಸುತ್ತಿವೆ. ಇದೀಗ ಒಕ್ಕಲಿಗರು ಬೇಡಿಕೆ ಇಟ್ಟಿದ್ದಾರೆ. ಎಲ್ಲರ ಬೇಡಿಕೆಗಳನ್ನು ಸರಕಾರ ಪರಿಶೀಲನೆ ಮಾಡಲಿದೆ. ಇತರೆ ಸಮುದಾಯಗಳಲ್ಲಿ ಇರುವಂತೆ ಒಕ್ಕಲಿಗರಲ್ಲೂ ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿರುವ ಜನರಿದ್ದಾರೆ. ಹೀಗಾಗಿ ಸ್ವಾಮೀಜಿ ಅವರು ಬೇಡಿಕೆ ಇಟ್ಟಿದ್ದಾರೆ. ಕೇಳುವುದರಲ್ಲಿ ತಪ್ಪೇನಿದೆ? ಈ ಎಲ್ಲ ಬೇಡಿಕೆ ಹಾಗೂ ಸಮುದಾಯಗಳ ಸ್ಥಿತಿಗತಿಗಳನ್ನು ಸರಕಾರ ಪರಿಗಣನೆಗೆ ತೆಗೆದುಕೊಳ್ಳಲಿದೆ. ಯಾರಿಗೆ ಅನ್ಯಾಯ ಆಗಿದೆಯೋ ಅವರೆಲ್ಲರಿಗೂ ಮೀಸಲು ಸೌಲಭ್ಯ ಸಿಗಲಿ ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಉಪ ಮುಖ್ಯಮಂತ್ರಿ ಹೇಳಿದರು.

    ಪೆಟ್ರೋಲ್ ಬೆಲೆ ಗಗನಕ್ಕೆ: ಅಮಿತಾಬ್, ಅಕ್ಷಯ್​ರನ್ನು ಎಳೆದು ತಂದ ಕಾಂಗ್ರೆಸ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts