More

  ನಮ್ಮದು ಶೋಷಿತರ ಪರ ಸರ್ಕಾರ

  ಯಾದಗಿರಿ: ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮೊ ಸೇರಿ ಇತರೆ ಕೋಸರ್್ಗಳಲ್ಲಿ ಅಧ್ಯಯನ ಮಾಡುವ ಹೆಣ್ಣುಮಕ್ಕಳಿಗೆ ಉತ್ತಮ ದರ್ಜೆಯ ವಸತಿ ಶಾಲೆ ನಿರ್ಮಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಉಪಮುಖ್ಯಮಂತ್ರಿ ಮತ್ತು ಸಮಾಜ ಕಲ್ಯಾಣ ಸಚಿವ ಗೋವಿಂದ ಕಾರಜೋಳ ತಿಳಿಸಿದರು.

  ತಾಲೂಜಿನ ರಾಚನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಸಂಜೆ ಬೆಂಗಳೂರಿನ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ಜಿಲ್ಲಾಡಳಿತದ ಆಶ್ರಯದಲ್ಲಿ ಹಮ್ಮಿಕೊಂಡ ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಯ ನೂತನ ಸಂಕೀರ್ಣ ಲೋಕಾರ್ಪಣೆಗೊಳಿಸಿ ಮಾತನಾಡಿ ಅವರು, ಸುವ್ಯವಸ್ಥಿತ ಸೈನಿಕ ಶಾಲೆ ಮಾದರಿಯಲ್ಲಿ ನಿಮರ್ಾಣವಾಗಲಿರುವ ಪ್ರತಿಯೊಂದು ಶಾಲೆಗೆ 50 ಕೋಟಿ ರೂ. ವೆಚ್ಚವಾಗಲಿದೆ. ಈ ಪೈಕಿ 40 ಕೋಟಿ ರೂ. ಕೇಂದ್ರ ಸಕರ್ಾರ ಭರಿಸಲಿದ್ದು, 10 ಕೋಟಿ ರೂ. ರಾಜ್ಯ ಸಕರ್ಾರ ಪಾವತಿಸಲಿದೆ. ಈ ರೀತಿ ಸಕರ್ಾರ ಬಡವರು, ಹೆಣ್ಣುಮಕ್ಕಳು, ಶೋಷಿತರಿಗೆ ಶಿಕ್ಷಣ ನೀಡುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.

  ಭೂ ಒಡೆತನ ಯೋಜನೆಯಡಿ ಪರಿಶಿಷ್ಟ ಜನಾಂಗದವರಿಗೆ ಇದುವರೆಗೂ 240 ಕೋಟಿ ರೂ. ವೆಚ್ಚ ಮಾಡಿ ಭೂಮಿ ಖರೀದಿಸಿ ಕೊಡಲಾಗಿದೆ. 2020-21ನೇ ಸಾಲಿನಲ್ಲಿ ಈ ಯೋಜನೆಯಡಿ 1000 ಕೋಟಿ ರೂ.ಗೂ ಹೆಚ್ಚಿನ ಮೊತ್ತದ ಭೂಮಿಯನ್ನು ಖರೀದಿಸಿ, ಪರಿಶಿಷ್ಟ ಜನಾಂಗದವರಿಗೆ ನೀಡಲು ಮುಖ್ಯಮಂತ್ರಿ ಒಪ್ಪಿಗೆ ಸೂಚಿಸಿದ್ದಾರೆ ಎಂದು ಹೇಳಿದರು.

  ರಾಜ್ಯ ಸಕರ್ಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಬಡವರು, ದೀನ ದಲಿತರು, ರೈತರ ಏಳ್ಗೆಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇತ್ತೀಚೆಗೆ ಸಂಭವಿಸಿದ ಪ್ರವಾಹ ಹಾನಿಯಿಂದ 30 ಸಾವಿರ ಕೋಟಿ ರೂ.ಗಿಂತ ಹೆಚ್ಚಿನ ಹಾನಿ ಉಂಟಾಗಿದೆ. ನಿರಾಶ್ರಿತರಿಗೆ ಪರಿಹಾರ ಕಲ್ಪಿಸಲಾಗಿದೆ. ಮುಂಬರುವ ಬಜೆಟ್ನಲ್ಲಿ ಉತ್ತರ ಕನರ್ಾಟಕ ಭಾಗದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಅಲ್ಲದೇ, ಶಾಸಕರ ಮನವಿ ಮೇರೆಗೆ ಯಾದಗಿರಿ ಜಿಲ್ಲೆಗೆ ಹೆಚ್ಚುವರಿ ವಸತಿ ಶಾಲೆಗಳನ್ನು ಮಂಜೂರು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

  ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ ಮಾತನಾಡಿ, ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆ (ಪರಿಶಿಷ್ಟ ಪಂಗಡ)ಯು 2017-18ನೇ ಸಾಲಿನಲ್ಲಿ ಆರಂಭವಾಗಿದ್ದು, ನೂತನವಾಗಿ 16.25 ಕೋಟಿ ರೂ. ವೆಚ್ಚದಲ್ಲಿ ವಸತಿ ಶಾಲೆಯ ಸಂಕೀರ್ಣ ಕಟ್ಟಡಗಳನ್ನು ನಿಮರ್ಿಸಲಾಗಿದೆ. ಈ ವಸತಿ ಶಾಲೆಗೆ 250 ವಿದ್ಯಾಥರ್ಿಗಳ ಮಂಜೂರಾತಿ ಇರುವುದಾಗಿ ತಿಳಿಸಿದರು.

  ಇದೇ ಸಂದರ್ಭದಲ್ಲಿ ಪಿಯು ವಿದ್ಯಾಥರ್ಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ಟ್ಯಾಬ್ಗಳನ್ನು ವಿತರಿಸಲಾಯಿತು. ಜಿಪಂ ಅಧ್ಯಕ್ಷ ರಾಜಶೇಖರಗೌಡ ಪಾಟೀಲ್ ವಜ್ಜಲ್, ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ್, ನರಸಿಂಹ ನಾಯಕ (ರಾಜುಗೌಡ), ಗ್ರಾಪಂ ಅಧ್ಯಕ್ಷೆ ರಾಮಲಿಂಗಮ್ಮ ಸಿದ್ಧಪ್ಪ, ಜಿಪಂ ಸದಸ್ಯೆ ಶಶಿಕಲಾ ಭೀಮಣ್ಣಗೌಡ ಕ್ಯಾತನಾಳ, ತಾಪಂ ಸದಸ್ಯ ಚಂದ್ರಪ್ಪ ಸಿದ್ರಾಮಪ್ಪ ಕಾವಲಿ, ಜಿಲ್ಲಾಧಿಕಾರಿ ಎಂ. ಕೂಮರ್ಾರಾವ್, ಜಿಪಂ ಸಿಇಒ ಶಿಲ್ಪಾ ಶಮರ್ಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ, ಕ್ರೈಸ್ ನಿದರ್ೇಶಕ ರಾಘವೇಂದ್ರ, ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ ಇದ್ದರು.
  ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಂದಾನವಾಜ್ ಗೇಸುದರಾಜ್ ಸ್ವಾಗತಿಸಿದರು. ಶಿಕ್ಷಕ ಮಡಿವಾಳಪ್ಪ ಪಾಟೀಲ್ ನಿರೂಪಿಸಿದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts