ಅತ್ತಿಬೆಲೆ ಪಟಾಕಿ ಗೋದಾಮು ದುರಂತ; ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೊಷಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

DK Shivakumar
Published on

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಗಳಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.

ಶನಿವಾರ ತಡರಾತ್ರಿ ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಸರ್ಕಾರದಿಂದ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ನೀಡಲಾಗುವುದು ಎಂದು ಪ್ರಕಟಿಸಿದ್ದಾರೆ.

ಬಳಿಕ ಮಾತನಾಡಿದ ಡಿ.ಕೆ. ಶಿವಕುಮಾರ್, ಇದೊಂದು ಘೋಷರ ದುರಂತ. ಅವಘಡದಲ್ಲಿ ಅಮಾಯಕರು ಮೃತಪಟ್ಟಿದ್ಧಾರೆ. ಪಟಾಕಿ ಗೋದಾಮಿನಲ್ಲಿ ಇನ್ನೂ ಕೆಲವರು ಸಿಲಕಿರುವ ಬಗ್ಗೆ ಶಂಕೆ ವ್ಯಕ್ತವಾಗುತ್ತಿದೆ. ಹಿಂಬದಿ ಬಾಗಿಲು ಒಡೆದು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಘಟನೆ ನಡೆದಾಗ 30-40 ಮಂದಿ ಗೋದಾಮಿನಲ್ಲಿ ಇದ್ದರು, ಹೆಚ್ಚಿನವರು ತಮಿಳುನಾಡು ಮೂಲದವರು ಎಂದು ತಮಿಳುನಾಡು ಮೂಲದವರು ಎಂದು ತಿಳಿದು ಬಂದಿದೆ. ದುರಂತ ಸಂಭವಿಸಿದ ಸಮಯದಲ್ಲಿ ಕೆಲ ಗ್ರಾಹಕರು ಅಂಗಡಿಯಲ್ಲಿದ್ದರು ಎಂದು ವರದಿಯಾಗಿದೆ. ಪಟಾಕಿ ಅಂಗಡಿಗೆ ಅನುಮತಿ ಪಡೆಯಲಾಗಿದ್ದು, ಗೋದಾಮಿಗೆ ಯಾವುದೇ ಅನುಮತಿಯನ್ನು ಪಡೆದಿಲ್ಲ. ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳು ತನಿಖೆ ನಡೆಸಿ ವರದಿ ಸಲ್ಲಿಸಲಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net