More

    ಅಶ್ಲೀಲ ಚಿತ್ರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಫೋಟೋ ಮಾರ್ಫಿಂಗ್: ಎಫ್​​ಐಆರ್ ದಾಖಲು

    ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣ ದೇಶಾದ್ಯಂತ ಸದ್ದು ಮಾಡುತ್ತಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು ಎಂಬ ಒತ್ತಾಯಗಳು ಕೇಳಿಬರುತ್ತಿವೆ. ಈ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಅವರ ಫೋಟೋಗೆ ಬೇರೊಂದು ಅಶ್ಲೀಲ ಚಿತ್ರ ವೈರಲ್ ಆಗಿದ್ದು, ಈ ಸಂಬಂಧ ಕೆಪಿಸಿಸಿ ಕಾನೂನು ಘಟಕ ದೂರು ನೀಡಿದೆ.

    ಇದನ್ನೂ ಓದಿ: ಮಾಜಿ ಡಿಸಿಎಂ ಮನೀಶ್ ಸಿಸೊಡಿಯಾ ಮತ್ತಷ್ಟು ದಿನ ಜೈಲಿನಲ್ಲೇ: 2ನೇ ಬಾರಿಗೆ ಜಾಮೀನು ಅರ್ಜಿ ವಜಾ!

    ಅಶ್ಲೀಲ ಚಿತ್ರಕ್ಕೆ ಶಿವಕುಮಾರ್ ಫೋಟೋ ಮಾರ್ಫಿಂಗ್ ಮಾಡಲಾಗಿದೆ ಎಂದು ಆರೋಪಿಸಿ ಸಂತೋಷ್, ರಾಜೇಶ್, ಕೇಸರಿ ಸಾಮ್ರಾಟ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಗೆ ದೂರು ನೀಡಲಾಗಿದೆ.

    ಈ ಹಿಂದೆಯೇ ಡಿಕೆ ಶಿವಕುಮಾರ್ ಫೋಟೋ ಜೊತೆ ಅಶ್ಲೀಲ ಚಿತ್ರ ಜೋಡಿಸಿ ಸಾಮಾಜಿಕ ಮಾಧ್ಯಮಗಲ್ಲಿ ವೈರಲ್ ಮಾಡಿದ್ದರು. ಆದರೆ ಇದೀಗ ಹಾಸನ ಲೋಕಸಭೆ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿಡಿಯೋಗಳು ವೈರಲ್ ಆಗುತ್ತಿದ್ದಂತೆಯೇ ಡಿಕೆ ಶಿವಕುಮಾರ್ ಅವರ ಎಡಿಟೆಡ್ ಮಾಡಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದರಿಂದ ಕೆಪಿಸಿಸಿ ಕಾನೂನು ಘಟಕ ಫೋಟೋ ಶೇರ್ ಮಾಡಿದ್ದವರ ವಿರುದ್ಧ ಹೈಗ್ರೌಂಡ್ಸ್​ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

    ಪ್ರಜ್ವಲ್​ ರೇವಣ್ಣ ಅವರ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿತ್ತು. ಇದೀಗ 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ಸಿಆರ್‌ಪಿಸಿ 41a ಅಡಿಯಲ್ಲಿ ಎಸ್‌ಐಟಿಯಿಂದ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಚಿವ ಎಚ್. ಡಿ. ರೇವಣ್ಣಗೆ ನೋಟಿಸ್ ನೀಡಲಾಗಿದೆ.

    ಎಸ್ಐಟಿ ಸದಸ್ಯ, ತನಿಖಾಧಿಕಾರಿ ಎಸ್‌ಪಿ ಸೀಮಾ‌ ಲಾಟ್ಕರ್ ಅವರ ಮುಂದೆ ತುರ್ತು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಎಚ್‌.ಡಿ. ರೇವಣ್ಣ ನಿವಾಸಕ್ಕೆ ಎಸ್ಐಟಿ ತಂಡ ನೊಟೀಸ್ ತಲುಪಿಸಿದ್ದು, ಹೊಳೆನರಸೀಪುರದಲ್ಲಿ ದಾಖಲಾದ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.

    24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗಿ: ಪ್ರಜ್ವಲ್‌, ಎಚ್‌ಡಿ ರೇವಣ್ಣಗೆ ಎಸ್‌ಐಟಿ ನೋಟಿಸ್‌!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts