More

    ಮುಂದಿನ 5 ವರ್ಷ ನಾನೇ ಸಿಎಂ ಎಂಬ ಹೇಳಿಕೆ; ಡಿಸಿಎಂ ಡಿ.ಕೆ. ಶಿವಕುಮಾರ್ ಕೊಟ್ಟ ರಿಯಾಕ್ಷನ್ ಹೀಗಿತ್ತು

    ಬೆಂಗಳೂರು: ಸದ್ಯ ನಾನು ಮುಖ್ಯಮಂತ್ರಿಯಾಗಿದ್ದೇನೆ. ನಾನೇ ಹುದ್ದೆಯಲ್ಲಿ ಮುಂದುವರಿಯಲಿದ್ದೇನೆ. ಐದು ವರ್ಷ ಸರ್ಕಾರ ಸುಭದ್ರವಾಗಿರಲಿದೆ ಎಂದು ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್​ನಲ್ಲಿ ಆಂತರಿಕ ತಲ್ಲಣ ಶುರುವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್​ ಪ್ರತಿಕ್ರಿಯಿಸಿದ್ದಾರೆ.

    ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್​, ನಾವು ಪಕ್ಷದ ಶಿಸ್ತಿನ ಸಿಪಾಯಿಗಳು. ಪಕ್ಷದ ಹೈಕಮಾಂಡ್ ಏನು ಹೇಳುತ್ತದೆಯೋ ಅದನ್ನು ‌ಕೇಳುತ್ತೇವೆ ಅಱ್ಟೇ. ನಾನು ಯಾವತ್ತೂ ಏನೂ ಮಾತನಾಡಿಲ್ಲ, ಮಾತನಾಡುವುದೂ ಇಲ್ಲ. ಪಕ್ಷ ಏನು ಹೇಳುತ್ತದೆಯೋ ಅದನ್ನು ಕೇಳುತ್ತೇನೆ ಎಂದು ಹೇಳಿದ್ದಾರೆ.

    ಮಾಜಿ ಸಿಎಂ ಬಿಎಸ್​ವೈ ಆರೋಪಕ್ಕೆ ಪ್ರತಿಕ್ರಿಯಿಸಿ, ಬಿಜೆಪಿ ಪಕ್ಷದೊಳಗಿನ ಕಿತ್ತಾಟದಿಂದ ವಿರೋಧ ಪಕ್ಷದ ನಾಯಕನ ನೇಮಕ ಮಾಡಲೂ ಆಗ್ತಿಲ್ಲ. ಅವರ ಪಕ್ಷದ ಸಮಸ್ಯೆಯನ್ನು ಮುಚ್ಚಿಕೊಳ್ಳಲು ನಮ್ಮ ಬಗ್ಗೆ ಮಾತಾಡ್ತಾರೆ. ನಮ್ಮ ಶಾಸಕರಿಗೆ ಚಾಕಲೇಟ್ ಕೊಡಲು ಬರ್ತಾರೆ ಎಂದು ಆರೋಪಿಸಿದ್ದಾರೆ.

    ತಲ್ಲಣವನ್ನುಂಟು ಮಾಡಿದ ಸಿಎಂ ಹೇಳಿಕೆ

    ಬುಧವಾರವಷ್ಟೇ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರ ಜತೆ ಸಭೆ ನಡೆಸಿತ್ತು. ಬಳಿಕ, ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಬಹಿರಂಗ ಚರ್ಚೆ ಮಾಡಬಾರದು. ಏನಿದ್ದರೂ ಸಿಎಂ, ಡಿಸಿಎಂ ಬಳಿ ಅಥವಾ ನಮ್ಮ ಬಳಿ ಚರ್ಚಿಸಿ ಎಂದು ನಾಯಕರಿಗೆ ಹೈಕಮಾಂಡ್ ಸೂಚಿಸಿತ್ತು. ಇದಾದ ಮರುದಿನವೇ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್​ ಪಾಳಯದಲ್ಲಿ ತಲ್ಲಣವನ್ನುಂಟು ಮಾಡಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts