ನನಗೆ ಯಾವುದೇ ಸಮೀಕ್ಷೆಗಳ ಮೇಲೆ ನಂಬಿಕೆಯಿಲ್ಲ ಎಂದ DCM DK Shivakumar

DCM DK Shivakumar (1)
Published on

ಉಡುಪಿ: ಕರ್ನಾಟಕ ವಿಧಾನಸಭೆ ಹಾಗೂ ಹರಿಯಾಣದ ಚುನಾವಣೆ ಬಗ್ಗೆ ಸಮೀಕ್ಷೆಗಳು ಏನು ಹೇಳಿದ್ದವು? ನನಗೆ ಯಾವುದೇ ಸಮೀಕ್ಷೆಗಳ ಮೇಲೆ ನಂಬಿಕೆಯಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್(DCM DK Shivakumar) ಹೇಳಿದರು.

ಉಡುಪಿಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಗುರುವಾರ (ನ.21) ಪೂಜೆ ಸಲ್ಲಿಸಿದ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.

.

ಸಮೀಕ್ಷೆಗಳನ್ನು ಕಟ್ಟಿಕೊಂಡು ರಾಜಕೀಯ ಮಾಡಲು ಆಗುವುದಿಲ್ಲ. ಯಾರು ಜನರ ಹೃದಯ ಹಾಗೂ ವಿಶ್ವಾಸ ಪಡೆದಿರುತ್ತಾರೋ ಅವರಿಗೆ ಜನ ಗೌಪ್ಯ ಮತದಾನದ ಮೂಲಕ ಬೆಂಬಲ ನೀಡುತ್ತಾರೆ ಎಂದರು.

ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಶು ಕದಾಚನ. ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವು ನಮ್ಮ ಪ್ರಯತ್ನವನ್ನು ಮಾಡಿದ್ದೇವೆ. ಆದರೆ, ಫಲಾಫಲ ಭಗವಂತನದ್ದು ಎಲ್ಲಾ ಕಡೆಯೂ ದೇವರು ನಮಗೆ ಒಳ್ಳೆಯದು ಮಾಡುತ್ತಾನೆ ಎನ್ನುವ ಭರವಸೆಯನ್ನು ಇಟ್ಟಿದ್ದೇವೆ ಎಂದರು.

ಕೊಲ್ಲೂರು ದೇವಸ್ಥಾನ ಆಡಳಿತ ಮಂಡಳಿಯಲ್ಲಿ ಮೂಲ ಕಾಂಗ್ರೆಸ್ಸಿಗರಿಗೆ ಮಣೆ ಹಾಕದೆ ವಲಸಿಗರಿಗೆ ಮಣೆ ಹಾಕಲಾಗಿದೆ ಎನ್ನುವ ಆರೋಪದ ಬಗ್ಗೆ ಕೇಳಿದಾಗ "ಚುನಾವಣೆ ವೇಳೆ ಇಲ್ಲಿಗೆ ಬಂದಾಗ ಈ ಬಗ್ಗೆ ಕೆಲವರಿಗೆ ಮಾತು ಕೊಟ್ಟಿದ್ದೆವು. ಸಲ್ಪ ದಿನ ಅವರು ಆಡಳಿತ ಮಾಡಲಿ ಬಿಡಿ" ಎಂದು ಹೇಳಿದರು.

ಬಿಪಿಎಲ್ ಕಾರ್ಡ್; ಬಡವರಿಗೆ ಅನ್ಯಾಯವಾಗಲು ಬಿಡುವುದಿಲ್ಲ

ಯಾವುದೇ ಕಾರಣಕ್ಕೂ ಬಿಪಿಎಲ್ ಅರ್ಹರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಅರ್ಹರ ಕಾರ್ಡ್​ಗಳು ರದ್ದಾಗಿದ್ದರೆ ಈ ಬಗ್ಗೆ ಪಟ್ಟಿ ಕೊಡಬೇಕು ಎಂದು ಸಂಬಂಧಪಟ್ಟ ಸಚಿವರಿಗೆ ಸೂಚನೆ ನೀಡಲಾಗಿದೆ. ವಂಚಿತರಿಗೆ ಮರು ಅರ್ಜಿ ಹಾಕಲು ಅವಕಾಶ ಕಲ್ಪಿಸಿ ಕೊಡಬೇಕು ಎಂದು ಸೂಚನೆ ನೀಡಿದ್ದೇವೆ. ರಾಜ್ಯ, ತಾಲ್ಲೂಕು, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಗಳು ಇದರ ಬಗ್ಗೆ ಪರಿಶೀಲನೆ ಮಾಡಲಿವೆ. ಒಬ್ಬನೇ ಒಬ್ಬ ಬಡವನಿಗೂ ತೊಂದರೆ ಆಗಲು ಬಿಡುವುದಿಲ್ಲ ಎಂದು ಸರ್ಕಾರದ ಪ್ರತಿನಿಧಿಯಾಗಿ, ಪಕ್ಷದ ಅಧ್ಯಕ್ಷನಾಗಿ ನಾನು ಭರವಸೆ ನೀಡುತ್ತೇನೆ. ಯಾರೂ ಭಯ ಪಡುವ ಅಗತ್ಯವಿಲ್ಲ. ವಿರೋಧ ಪಕ್ಷಗಳು ಮಾತನಾಡಬೇಕು ಎಂದು ಸುಮ್ಮನೆ ಮಾತನಾಡುತ್ತಿವೆ ಎಂದರು.

ನಬಾರ್ಡ್ ಸಾಲ ಕಡಿತ; ಕೇಂದ್ರಕ್ಕೆ ಮನವಿ

ಕೇಂದ್ರ ಸರ್ಕಾರದ ನಬಾರ್ಡ್ ಸಂಸ್ಥೆ ಸಾಲ ಕಡಿತ ಮಾಡಿರುವ ವಿಚಾರದ ಬಗ್ಗೆ ಸಿಎಂ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ದೆಹಲಿಯಲ್ಲಿ ಭೇಟಿ ಮಾಡಿ ನಬಾರ್ಡ್ ಸಾಲ ಕಡಿತ ವಿಚಾರದಲ್ಲಿ ಅನ್ಯಾಯವಾಗಿದೆ ಎಂದು ಮನವಿ ಸಲ್ಲಿಸಿದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net