More

    ಪೊಲೀಸ್ ಇಲಾಖೆಯನ್ನು ಕೇಸರೀಕರಣ ಮಾಡಲು ಬಿಡಲ್ಲ: ಡಿಕೆಶಿ

    ಬೆಂಗಳೂರು: ಪೊಲೀಸ್ ಇಲಾಖೆಯನ್ನು ಕೇಸರೀಕರಣ ಮಾಡಲು ಹೊರಟಿದ್ದೀರಾ ನೀವು? ನಮ್ಮ ಸರ್ಕಾರದಲ್ಲಿ ಇದಕ್ಕೆ ಅವಕಾಶ ಕೊಡುವುದಿಲ್ಲ. ಮಂಗಳೂರು, ಬಿಜಾಪುರ, ಬಾಗಲಕೋಟದಲ್ಲಿ ನೀವು ಹೇಗೆ ಕೇಸರಿ ಬಟ್ಟೆ ಹಾಕಿಕೊಂಡು ಇಲಾಖೆಗೆ ಅವಮಾನ ಮಾಡಿದ್ದೀರಿ ಎಂಬುದು ಗೊತ್ತಿದೆ. ಈ‌ ಸಭೆಗೂ ಕೇಸರಿ ಶಾಲು ಹಾಕಿಕೊಂಡು ಬರಬೇಕಾಗಿತ್ತು. ದೇಶದ ಬಗ್ಗೆ ಗೌರವ ಇದ್ದರೆ ರಾಷ್ಟ್ರ ಧ್ವಜ ಹಾಕಿಕೊಂಡು ಕೆಲಸ ಮಾಡಬೇಕಿತ್ತು. ನಮ್ಮ ಸರ್ಕಾರ ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ಬಿಡುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

    ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಹಲವು ಸೂಚನೆ ನೀಡಿದರು. ಸೈಬರ್‌ ಅಪರಾಧಗಳ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚಿಸಿದರು. ಈ ಸಭೆಯಲ್ಲಿ ಭಾಗವಹಿಸಿದ್ದ ಡಿಸಿಎಂ ಡಿಕೆಶಿ, ಹಿರಿಯ ಪೊಲೀಸ್ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು.

    ಇದನ್ನೂ ಓದಿ: 2 ವರ್ಷ ಕಳೆಯಲಿ, ಮತ್ತೆ 8 ವರ್ಷ ಡಿಕೆಶಿ ಸಿಎಂ; ಭವಿಷ್ಯ ನುಡಿದ ಜ್ಯೋತಿಷಿ!

    ಪಿಎಸ್​ಐ ಅಕ್ರಮದಲ್ಲಿ ಒಬ್ಬ ಎಡಿಜಿಪಿ OMR ಪ್ರತಿಯನ್ನು ತಿದ್ದುತ್ತಾರೆ ಅಂದರೆ ಇಲಾಖೆ ಎಷ್ಟು ಕೆಟ್ಟು ಹೋಗಿದೆ ಎಂಬುದು ಗೊತ್ತಾಗುತ್ತದೆ. ಪ್ರೆಸ್ ಕಾನ್ಫರೆನ್ಸ್ ಮಾಡಿ ಪ್ರಕರಣ ಬಯಲಿಗೆ ತಂದವರನ್ನೇ ಹರಾಸ್ ಮಾಡಿದ್ದೀರಾ. ಪ್ರಿಯಾಂಕ ಖರ್ಗೆ ಅವರಿಗೆ ಕಾಟ ಕೊಟ್ಟಿದ್ದೀರಾ. ಇಡೀ ದೇಶದಲ್ಲಿ ಕರ್ನಾಟಕ ಪೊಲೀಸ್ ಇಲಾಖೆಗೆ ಒಳ್ಳೆಯ ಹೆಸರಿತ್ತು. ಆ ಗೌರವ, ಘನತೆಯನ್ನು ಹಾಳು‌ ಮಾಡಿದ್ದೀರ. ಎಲ್ಲಿ ನೋಡಿದರೂ ಬರೀ ಕಾಸು, ಕಾಸು, ಕಾಸು. ನಮ್ಮ ಸರ್ಕಾರದಲ್ಲಿ ಎಲ್ಲವೂ ಕ್ಲೀನ್ ಆಗಬೇಕು. ಜನ ಈ ಸರಕಾರದಿಂದ ಬಹುದೊಡ್ಡ ಬದಲಾವಣೆಯನ್ನು ನಿರೀಕ್ಷೆ ಮಾಡಿದ್ದಾರೆ. ಅದು ಪೊಲೀಸ್ ಇಲಾಖೆಯಿಂದಲೇ ಶುರು ಆಗಬೇಕು ಎಂದು ಡಿಕೆಶಿ ಖಡಕ್ ಸೂಚನೆ ನೀಡಿದರು.

    ಇದನ್ನೂ ಓದಿ: ಪ್ರಧಾನಿ ಮೋದಿ ‘ಬಾಸ್’: ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್

    ನಿಮ್ಮಿಂದ ನಮಗೆ ನಯಾಪೈಸೆ ಹಣ ಬೇಕಿಲ್ಲ. ನೀವು ಯಾರಿಗೂ ಹಣ ಕೊಡುವುದೂ ಬೇಡ. ಜನ ನರಳದಂತೆ ಉತ್ತಮವಾಗಿ ಕೆಲಸ ಮಾಡಿದರೆ ಸಾಕು. ನಿಮ್ಮ ಹಿಂದಿನ ವರ್ತನೆ ನಮ್ಮ ಸರ್ಕಾರದಲ್ಲಿ ನಡೆಯಲ್ಲ. ಹಿಂದೆ ಪೇ ಸಿಎಂ ಅಭಿಯಾನ ಮಾಡಿದಾಗ ನನ್ನ ಮತ್ತು ಸಿದ್ದರಾಮಯ್ಯರ ಜತೆ ಹೇಗೆ ನಡೆದುಕೊಂಡಿದ್ದೀರಾ ಎಂಬುದು ಗೊತ್ತಿದೆ. ನಮ್ಮನ್ನೇ, ಬಿಡದ ನೀವು ಇನ್ನು ಸಾಮಾನ್ಯ ಜನರನ್ನು ಬಿಡ್ತೀರಾ? ನಾವು ಎಲ್ಲವನ್ನೂ ಗಮನಿಸಿದ್ದೇವೆ. ಇವೆಲ್ಲ ನಮ್ಮ ಸರ್ಕಾರದಲ್ಲಿ ನಡೆಯುವುದಿಲ್ಲ. ನೀವು ಬದಲಾಗಬೇಕು. ನಿಮ್ಮ ವರ್ತನೆಯೂ ಬದಲಾಗಬೇಕು. ಇಲ್ಲದೇ ಹೋದಲ್ಲಿ ನಿಮ್ಮನ್ನೇ ಬದಲಾವಣೆ ಮಾಡಬೇಕಾಗುತ್ತದೆ. ನಾವು ದ್ವೇಷ ಸಾಧಿಸುವುದಿಲ್ಲ. ಅದರಲ್ಲಿ ನಮಗೆ ನಂಬಿಕೆ ಇಲ್ಲ. ನೀವು ಬದಲಾಗಿ, ಹಳೆಯದು ಬಿಡಿ. ಹೊಸದಾಗಿ ಕೆಲಸ ಶುರು ಮಾಡಿ. ಜನರ ನೆಮ್ಮದಿ ಕಾಪಾಡಿ. ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ನಾವು ನಿಮ್ಮೊಂದಿಗೆ ಇರುತ್ತೇವೆ. ಈ ಸರ್ಕಾರದ ಮೇಲೆ ಜನ ನಂಬಿಕೆ ಇಟ್ಟಿದ್ದಾರೆ. ಅದನ್ನ ಉಳಿಸಿಕೊಳ್ಳಿ. ಈ ಸರಕಾರದಿಂದ ಬದಲಾವಣೆ ಆಗುತ್ತಿದೆ ಎಂಬ ಸಂದೇಶವನ್ನು ನಿಮ್ಮ ಕೆಲಸದ ಮೂಲಕ ಜನರಿಗೆ ನೀಡಿ ಎಂದು ಡಿಕೆಶಿ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts