ಸಿಎಂ ಪ್ರಾಸಿಕ್ಯೂಷನ್ ಅನುಮತಿ ಬೆನ್ನಲ್ಲೇ ಡಿಸಿಎಂ ಡಿ.ಕೆ. ಶಿವಕುಮಾರ್​ಗೆ ಲೋಕಾಯುಕ್ತ ನೋಟಿಸ್​!

ವಿಜಯವಾಣಿ - 2024-08-22T131156.925
Published on

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟ ಕೆಲವೇ ದಿನಗಳಲ್ಲಿ ಇದೀಗ ಡಿಸಿಎಂ ಡಿ.ಕೆ. ಶಿವಕುಮಾರ್​ಗೆ ಲೋಖಾಯುಕ್ತ ನೋಟಿಸ್​ ರವಾನಿಸಿದೆ. ಅಕ್ರಮ ಹಣ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಕ್ಷಣ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ನೀಡಲಾಗಿದೆ. 

ಇತ್ತೀಚೆಗಷ್ಟೇ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟಿದ್ದರು. ಗವರ್ನರ್​ ನೀಡಿದ ಅನುಮತಿಗೆ ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದ ಕಾಂಗ್ರೆಸ್​ ನಾಯಕರು ಹಾಗೂ ಕಾರ್ಯಕರ್ತರು ರಾಜ್ಯವಾಪಿ ಬೃಹತ್ ಪ್ರತಿಭಟನೆ ನಡೆಸಿ, ಬಿಜೆಪಿ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದರು.

ಇದೀಗ ಈ ವಿಷಯ ಮಾಸುವ ಮುನ್ನವೇ ಲೋಕಾಯುಕ್ತ ಡಿಸಿಎಂ ಡಿ.ಕೆ. ಶಿವಕುಮಾರ್​ಗೆ ನೋಟಿಸ್​ ರವಾನಿಸಿದ್ದು, ಕೂಡಲೇ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ. ಸದ್ಯ ಲೋಕಾ ನೀಡಿರುವ ನೋಟಿಸ್​ ಪಡೆದಿರುವ ಡಿಕೆಶಿ, ಮುಂದಿನ ವಿಚಾರಣೆಗೆ ತೆರಳಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net