

ಚಾಮರಾಜನಗರ: ನಮ್ಮ ಮೇಲೆ ವಿಶ್ವಾಸ ಇಟ್ಟು, ಪಕ್ಷಕ್ಕೆ ಬಲತುಂಬುವವರನ್ನು ನಾವು ಸ್ವಾಗತಿಸುತ್ತೇವೆ. ಅನ್ಯ ಪಕ್ಷದ ಮುಖಂಡರು ಕ್ಷೇತ್ರದ ಸಮಸ್ಯೆಗಳ ಕುರಿತು ನಮ್ಮನ್ನು ಭೇಟಿ ಮಾಡತ್ತಾರೆ ಅದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಹೊನ್ನಾಳಿ ಕ್ಷೇತ್ರದ ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ತಮ್ಮನ್ನು ಭೇಟಿ ಮಾಡಿದ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್ ನಮಗೆ ಆಪರೇಷನ್ ಹಸ್ತದ ಅವಶ್ಯಕತೆಯಿಲ್ಲ. ಆದರೆ, ಕಾಂಗ್ರೆಸ್ ಪಕ್ಷವನ್ನು ಸೇರುವವರನ್ನು ನಾವು ತಡೆಯುವುದಿಲ್ಲ ಎಂದಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಆಪರೇಷನ್ ಹಸ್ತದ ಅವಶ್ಯಕತೆಯಿಲ್ಲ. ನಮ್ಮ ಮೇಲೆ ವಿಶ್ವಾವಿಟ್ಟು ಪಕ್ಷಕ್ಕೆ ಬಲತುಂಬುವವರನ್ನು ನಾವು ಸದಾ ಸ್ವಾಗತಿಸುತ್ತೇವೆ. ಕಾಂಗ್ರೆಸ್ ಪಕ್ಷಕ್ಕೆ ಸೇರಲು ಬಯಸುವವರನ್ನು ನಾವು ತಡೆಯುವುದಿಲ್ಲ ಎಂದಿದ್ದಾರೆ.
ಮಾಜಿ ಶಾಸಕ ರೇಣುಕಾಚಾರ್ಯ ಭೇಟಿ ಕುರಿತು ಪ್ರತಿಕ್ರಿಯಿಸಿದ ಅನ್ಯ ಪಕ್ಷದ ಮುಖಂಡರು ತಮ್ಮ ಕ್ಷೇತ್ರದಲ್ಲಿನ ಕೆಲಸಗಳ ಕುರಿತು ನಮ್ಮನ್ನು ಭೇಟಿ ಮಾಡಿ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಾರೆ. ಅದೇ ರೀತಿ ರೇಣುಕಾಚಾರ್ಯ ತಮ್ಮ ಕ್ಷೇತ್ರದಲ್ಲಿನ ಸಮಸ್ಯೆ ಸಂಬಂಧ ನನ್ನ ಹಾಗೂ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದಾರಷ್ಟೇ ಎಂದು ತಿಳಿಸಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಸೋತ ನಂತರ ಬಿಜೆಪಿ ನಾಯಕರಿಗೆ ಹೆಚ್ಚಿನ ಮನ್ನಣೆ ಸಿಗದ ವಿಚಾರವಾಗಿ ಪ್ರತಿಕ್ರಿಯಿಸಿ ಇಲ್ಲಿಯವರೆಗೂ ಅವರಿಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಪ್ರಧಾನ ಮಂತ್ರಿ ಕಚೇರಿ ಸಂದೇಶವೇ ಆರ್. ಅಶೋಕ್ ಅವರಿಗೆ ತಿಳಿದಿಲ್ಲ ಎಂದು ಬಿಜೆಪಿ ನಾಯಕರನ್ನು ಕುಟುಕಿದ್ದಾರೆ.
2021ರಲ್ಲಿ ಸಂಭವಿಸಿದ ಆಕ್ಸಿಜನ್ ದುರಂತಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಗಳಿಗೆ ನ್ಯಾಯ ಒದಗಿಸುವುದು ನಮ್ಮ ಆದ್ಯತೆಯಾಗಿದೆ. ಈ ವಿಚಾರವಾಗಿ ನಾನು ಹಾಗೂ ಮುಖ್ಯಮಂತ್ರಿಗಳು ವೈದ್ಯಕೀಯ ಶಿಕ್ಷಣ ಸಚಿವರ ಜೊತೆ ಸಭೆ ನಡೆಸಿದ್ದೇವೆ. ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕಾರ್ಯದರ್ಶಿಗಳಿಗೆ ಪರಿಹಾರ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಚಾಮರಾಜನಗರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.