More

    ಅಪಾರ್ಟ್‌ಮೆಂಟ್‌ಗಾಗಿ ಕೆರೆ ಮಧ್ಯೆ ರಸ್ತೆ! ಈ ಐಡಿಯಾ ಕೊಟ್ಟವರು ಯಾರು? ಡಿಕೆಶಿ ಪ್ರಶ್ನೆ

    ಬೆಂಗಳೂರು: ಪ್ರಭಾವಿ ಅಪಾರ್ಟ್ಮೆಂಟ್ ಮಾಲೀಕರಿಗೆ ಅನುಕೂಲ ಮಾಡಿಕೊಡಲು ಹೊಸಕೆರೆಹಳ್ಳಿಯಲ್ಲಿ ಕೆರೆ ಮಧ್ಯೆ ರಸ್ತೆ ನಿರ್ಮಾಣ ಯೋಜನೆ ರೂಪಿಸಿದ, ಅನುಷ್ಠಾನಕ್ಕೆ ತಂದ ಎಲ್ಲ ಅಧಿಕಾರಿಗಳು, ಇಂಜಿನಿಯರ್​ಗಳನ್ನು ಇವತ್ತು ಸಂಜೆ ಒಳಗೆ ಸೇವೆಯಿಂದ ಅಮಾನತು ಮಾಡುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಅವರಿಗೆ ಸೂಚನೆ ನೀಡಿದ್ದಾರೆ.

    ಈ ಕೆರೆ ಮಧ್ಯೆ ರಸ್ತೆ ನಿರ್ಮಾಣ ಮಾಡುವ ಐಡಿಯಾ ಕೊಟ್ಟವರು ಯಾರು? ಯೋಜನೆ ರೂಪಿಸಿದವರು ಯಾರು? ಅನುಷ್ಠಾನಕ್ಕೆ ತಂದವರು ಯಾರು? ಯಾಕಾಗಿ ಇದನ್ನು ಮಾಡಿದ್ದೀರಿ? ಯಾರಿಗೆ ಅನುಕೂಲ ಮಾಡಿಕೊಡಲು ಮಾಡಿದ್ದೀರಾ? ಯಾರ್‍ಯಾರು ಇದರಲ್ಲಿ ಭಾಗಿಯಾಗಿದ್ದೀರಿ ಎಂದು ಉಪಮುಖ್ಯಮಂತ್ರಿ ಡಿಕೆಶಿ ಸಭೆಯಲ್ಲಿ ಅಧಿಕಾರಿಗಳನ್ನು ಪ್ರಶ್ನಿಸಿದ್ಧಾರೆ.

    ಇದನ್ನೂ ಓದಿ: ಹಿಂದೂ ಯುವತಿಯನ್ನು ಮತಾಂತರ ಮಾಡಲು ಗುರುತು ಮರೆಮಾಚಿದ ಯುವಕ; ಆರೋಪಿ ಅರೆಸ್ಟ್​

    ಡಿಸಿಎಂ ಕೇಳಿದ ಸರಣಿ ಪ್ರಶ್ನೆಗಳಿಗೆ ತಬ್ಬಿಬ್ಬಾದ ಅಧಿಕಾರಿಗಳು ಉತ್ತರಿಸಲು ತಡಬಡಾಯಿಸಿದರು. ತಕ್ಷಣವೇ ಉಪಮುಖ್ಯಮಂತ್ರಿಗಳು ಹೊಸಕೆರೆಹಳ್ಳಿ ಕೆರೆ ಭಾಗ ಮಾಡಿ ರಸ್ತೆ ನಿರ್ಮಾಣ ಮಾಡಿದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಸೂಚನೆ ನೀಡಿದ್ಧಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts