ಡಿಸಿಎಂ ಕಾರಜೋಳ ಪುತ್ರನ ಆರೋಗ್ಯ ಸ್ಥಿತಿ ಗಂಭೀರ, ಹೈದರಾಬಾದ್​ಗೆ ಶಿಫ್ಟ್​

gopal karajola
Published on

ಬೆಂಗಳೂರು: ಡಿಸಿಎಂ ಗೋವಿಂದ ಕಾರಜೋಳ ಪುತ್ರ ಡಾ.ಗೋಪಾಲ್​ ಕಾರಜೋಳ ಅವರ ಆರೋಗ್ಯ ಸ್ಥಿತಿ ಗಂಭಿರವಾಗಿದ್ದು, ಹೈದರಾಬಾದ್​ನ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ.

ಡಾ.ಗೋಪಾಲ್​ ಕಾರಜೋಳ ಕರೊನಾ ಸೋಂಕಿನಿಂದ ಬಳಲುತ್ತಿದ್ದು, ಕಳೆದ 24 ದಿನದಿಂದಲೂ ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಯಲ್ಲಿ ವೆಂಟಿಲೇಟ​ರ್​ನಲ್ಲಿದ್ದರು. ಶನಿವಾರದಿಂದ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಹೀಗಾಗಿ, ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಭಾನುವಾರ ಹೈದರಾಬಾದ್​ಗೆ ಏರ್​ಲಿಫ್ಟ್​​ ಮೂಲಕ ಕರೆದೊಯ್ಯಲಾಗಿದೆ.

ಗೋವಿಂದ ಕಾರಜೋಳ ಮತ್ತು ಅವರ ಪತ್ನಿ ಸೇರಿದಂತೆ ಕುಟುಂಬದ 8 ಮಂದಿ ಕರೊನಾ ಸೋಂಕಿಗೆ ಒಳಗಾಗಿದ್ದಾರೆ. ಡಿಸಿಎಂ ಕಾರಜೋಳ ಗುಣಮುಖರಾಗಿದ್ದಾರೆ. ಸೋಂಕಿನಿಂದ ಆಸ್ಪತ್ರೆ ಸೇರಿದ್ದ ಅವರ ಪತ್ನಿ ಚಿಕಿತ್ಸೆ ಬಳಿಕ ಹಿಂದಿರುಗಿದ್ದಾರೆ. ಸೋಂಕು ಕಾಣಿಸಿಕೊಂಡಾಗಿನಿಂದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಡಾ.ಗೋಪಾಲ್​, 24 ದಿನದಿಂದ ವೆಂಟಿಲೇಟ​ರ್​ನಲ್ಲಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net