ಬಿಬಿಎಂಪಿ ಬಜೆಟ್ ಕುರಿತು ಬೆಂಗಳೂರು ಶಾಸಕರ ಜತೆ ಸಭೆ ನಡೆಸಿದ ಡಿಸಿಎಂ|BBMP budget

blank

ಬೆಂಗಳೂರು: ಮನೆ ಬಾಗಿಲಿಗೆ ಉಚಿತವಾಗಿ ಖಾತೆ ವಿತರಣೆ, ಬೀದಿಬದಿ ವ್ಯಾಪಾರಿಗಳಿಗೆ ತಳ್ಳುವ ಗಾಡಿ ವಿತರಣೆ, ಅಕ್ರಮ ನಿರ್ಮಾಣಗಳ ಪತ್ತೆಗೆ ‘ಎಐ’ ತಂತ್ರಜ್ಞಾನದ ಬಳಕೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್(DCM DK Shivakumar) ತಿಳಿಸಿದರು.

2025-26 ನೇ ಸಾಲಿನ ಬಿಬಿಎಂಪಿ ಬಜೆಟ್ ಕುರಿತು ಬೆಂಗಳೂರು ನಗರದ ಶಾಸಕರ ಜತೆ ಸಭೆ(DCM holds meeting with Bengaluru MLAs regarding BBMP budget)ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ನಗರದ ಸುಮಾರು 7 ಲಕ್ಷ ಮನೆಗಳು ತೆರಿಗೆ ಕಟ್ಟಿರಲಿಲ್ಲ, ಇವುಗಳಲ್ಲಿ 1 ಲಕ್ಷ ಮನೆಗಳು ತೆರಿಗೆ ವ್ಯಾಪ್ತಿಗೆ ಬಂದಿದ್ದು, ಇನ್ನೂ 6 ಲಕ್ಷ ಮನೆಗಳನ್ನು ತೆರಿಗೆ ವ್ಯಾಪ್ತಿಗೆ ತರಬೇಕಿದೆ. ಆದ ಕಾರಣ ಒಂದು ಬಾರಿ ಪಾವತಿಗೆ ಅವಕಾಶ (ಓಟಿಎಸ್) ಮಾಡಿಕೊಡಲಾಯಿತು. ಅಕ್ರಮ ನಿರ್ಮಾಣಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶ ಪಾಲಿಕೆಗೆ ಇರಲಿಲ್ಲ. ಕಳೆದ ವಾರ ಸದನದಲ್ಲಿ ಈ ಬಗ್ಗೆ ವಿಧೇಯಕ ಅಂಗೀಕಾರವಾಗಿದೆ. ಜೊತೆಗೆ ಕಂದಾಯ ಬಡಾವಣೆಗಳಲ್ಲಿ ಇರುವ ಖಾಸಗಿ ರಸ್ತೆಗಳನ್ನೂ ಸಹ ಸರ್ಕಾರಿ ರಸ್ತೆಗಳು ಎಂದು ಘೋಷಣೆ ಮಾಡಲಾಗುವುದು ಎಂದರು.

ಎಐ ಮೂಲಕ ಅಕ್ರಮ ನಿರ್ಮಾಣಗಳ ಪತ್ತೆ

ನಗರದಲ್ಲಿ ಉತ್ತಮ ತೆರಿಗೆ ಸಂಗ್ರಹವಾಗಬೇಕು. ನೀರು, ರಸ್ತೆ ಸೇರಿದಂತೆ ಅನೇಕ ಮೂಲಸೌಕರ್ಯಗಳನ್ನು ನೀಡಿದ್ದೇವೆ. ಆದರೆ ಅನೇಕರು ಇದಕ್ಕೆ ತಕ್ಕಂತೆ ತೆರಿಗೆ ಪಾವತಿ ಮಾಡುತ್ತಿಲ್ಲ. ಅನುಮತಿ ನೀಡಿದ್ದಕ್ಕಿಂತ ಹೆಚ್ಚು ವಿಸ್ತೀರ್ಣದ ಹಾಗೂ ಮಹಡಿಗಳನ್ನು ಅಕ್ರಮವಾಗಿ ಕಟ್ಟಿಕೊಂಡಿದ್ದಾರೆ. ಇಂತಹ ಅಕ್ರಮಗಳನ್ನು ‘ಎಐ’ ತಂತ್ರಜ್ಞಾನದ ಮೂಲಕ ಪತ್ತೆ ಮಾಡುವ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ವಿವರಿಸಿದರು.

ಅಧಿಕಾರಿಗಳ ಅಕ್ರಮ:

ಮನೆ, ನಿವೇಶನ ಮಾಲೀಕರ ಜೊತೆ ಒಳ ಒಪ್ಪಂದ ಮಾಡಿಕೊಂಡು ಕಂದಾಯ ಬಡಾವಣೆ ಅಕ್ರಮಗಳಲ್ಲಿ ಅಧಿಕಾರಿಗಳು ಭಾಗಿಯಾಗಿದ್ದರೆ ಅಂತಹವರನ್ನು ನನ್ನ ಗಮನಕ್ಕೆ ತರದೆಯೂ ಕೂಡಲೇ ಅಮಾನತು ಮಾಡಿ ಎಂದು ಉನ್ನತ ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ಸಂದೇಶ ರವಾನಿಸಿದರು.

ಮನೆ ನಿರ್ಮಾಣ ವಿಚಾರದಲ್ಲಿ ಶೇ. 50 ರಷ್ಟು ಗುಂಪು ಮನೆಗಳು, ಶೇ. 50 ರಷ್ಟು ಒಂಟಿ ಮನೆಗಳು ಮಾಡಬೇಕು ಎನ್ನುವ ಸಲಹೆಯನ್ನು ಶಾಸಕರು ನೀಡಿದ್ದಾರೆ ಎಂದು ಹೇಳಿದರು.

ಮನೆ ಬಾಗಿಲಿಗೆ ಉಚಿತ ಖಾತೆ

ಮನೆ ಬಾಗಿಲಿಗೆ ತೆರಳಿ ಉಚಿತವಾಗಿ ಖಾತೆ ನೀಡುವ ವಿನೂತನ ವ್ಯವಸ್ಥೆಯನ್ನು ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಜಾರಿಗೆ ತರಲಾಗಿದೆ. ಈ ಕಾರ್ಯಕ್ರಮಕ್ಕೆ ಏಪ್ರಿಲ್ ತಿಂಗಳಿನಿಂದ ಚಾಲನೆ ದೊರೆಯಲಿದೆ ಎಂದು ತಿಳಿಸಿದರು.

ಸರ್ಕಾರದಿಂದ ದಾಖಲೆ ಅನುದಾನ

ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಿಬಿಎಂಪಿಗೆ ನೀಡುತ್ತಿರುವ ಅನುದಾನವನ್ನು 4 ಸಾವಿರ ಕೋಟಿ ರೂ.ಗಳಿಂದ 7 ಸಾವಿರ ಕೋಟಿಗೆ ಹೆಚ್ಚಳ ಮಾಡಿದೆ ಎಂದು ಹೇಳಿದರು.

ಬೀದಿ ಬದಿ ವ್ಯಾಪಾರಿಗಳಿಗೆ ರಸ್ತೆಬದಿ ಮಳಿಗೆ ನಿರ್ಮಾಣಕ್ಕೆ ಮುಂದಿನ ದಿನಗಳಲ್ಲಿ ಅವಕಾಶವಿಲ್ಲ. ಈಗ ಸುಮಾರು 3,778 ಜನ ತಳ್ಳುವ ಗಾಡಿ ನೀಡಿ ಎಂದು ಅರ್ಜಿ ಹಾಕಿದ್ದಾರೆ. ನಾವು ಈ ವರ್ಷ ಪಾಲಿಕೆಯಿಂದ ಸುಮಾರು 10 ಸಾವಿರ ತಳ್ಳುವ ಗಾಡಿಗಳನ್ನು ನೀಡಲು ತಯಾರಿದ್ದೇವೆ. ಗಾಡಿ ಬೇಕಾದವರು ನೋಂದಣಿ ಮಾಡಿಕೊಳ್ಳಬೇಕು. ಪ್ರತಿದಿನ ಎಲ್ಲಿ, ಯಾವ ಜಾಗದಲ್ಲಿ ಗಾಡಿಯಲ್ಲಿ ವಹಿವಾಟು ನಡೆಸಲಾಯಿತು ಎನ್ನುವ ಮಾಹಿತಿ ತಿಳಿದುಕೊಳ್ಳುವ ವ್ಯವಸ್ಥೆ ಜಾರಿಗೆ ತರಲಿದ್ದೇವೆ. ಗಾಡಿಯನ್ನು ಮನೆಯಲ್ಲಿ ನಿಲ್ಲಿಸಿಕೊಳ್ಳುವುದು, ಮತ್ತೊಬ್ಬರಿಗೆ ಮಾರುವುದಕ್ಕೆ ಅವಕಾಶವಿಲ್ಲ ಎಂದರು.

ಏಪ್ರಿಲ್ ಕೊನೆವರೆಗೂ ವಿಸ್ತರಣೆ

ಇದುವರೆಗೂ ಪಾಲಿಕೆಯಿಂದ 27,565 ಬೀದಿಬದಿ ವ್ಯಾಪಾರಿಗಳು ನೋಂದಣಿ ಮಾಡಿಕೊಂಡಿದ್ದಾರೆ. ನೋಂದಣಿ ದಿನಾಂಕವನ್ನು ಏಪ್ರಿಲ್ ಕೊನೆಯವರೆಗೆ ವಿಸ್ತರಿಸಲಾಗುವುದು. ನೋಂದಣಿ ಮಾಡಿಕೊಳ್ಳದ ವ್ಯಾಪಾರಿಗಳನ್ನು ಗಡುವು ನಂತರ ತೆರವುಗೊಳಿಸಲಾಗುವುದು. ನೋಂದಣಿ ಮಾಡಿಕೊಂಡವರಿಗೆ ಸಹಾಯಧನ ನೀಡಿ ತಳ್ಳುವ ಗಾಡಿಗಳನ್ನು ನೀಡಲಾಗುವುದು. ನಾಲ್ಕು ಮಾದರಿಯ ತಳ್ಳು ಗಾಡಿಗಳನ್ನು ಪಾಲಿಕೆ ಸಿದ್ಧಪಡಿಸಿದೆ ಎಂದು ತಿಳಿಸಿದರು.

ವ್ಯಾಪಾರ ಮುಗಿದ ನಂತರ ಗಾಡಿಗಳನ್ನು ಅಲ್ಲಿಯೇ ನಿಲ್ಲಿಸುವಂತಿಲ್ಲ. ಪ್ರತಿ ಬೀದಿಬದಿ ವ್ಯಾಪಾರಿಗಳ ಲೆಕ್ಕಾಚಾರ ಪಾಲಿಕೆ ಬಳಿ ಇರಬೇಕು. ಪೊಲೀಸರು, ಅಧಿಕಾರಿಗಳು, ಗೂಂಡಾಗಳು ತೊಂದರೆ ಕೊಡುತ್ತಾರೆ ಎನ್ನುವ ದೂರುಗಳನ್ನು ತಪ್ಪಿಸಲು ಈ ವ್ಯವಸ್ಥೆ ತರಲಾಗುತ್ತಿದೆ. ಒಂದು ಕುಟುಂಬಕ್ಕೆ ಒಂದೇ ಗಾಡಿ ಎಂದು ತಿಳಿಸಿದರು.

ಶೀಘ್ರ ಬಿಬಿಎಂಪಿ ಚುನಾವಣೆ

ಬಿಬಿಎಂಪಿ ಚುನಾವಣೆಯನ್ನು ಆದಷ್ಟು ಶೀಘ್ರದಲ್ಲಿಯೇ ನಡೆಸಲು ಸರ್ಕಾರ ತಯಾರಿ ಮಾಡಿಕೊಂಡಿದೆ. ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಈಗಾಗಲೇ ಒಪ್ಪಿಗೆ ಸಿಕ್ಕಿದೆ. ಇದರ ಬಗ್ಗೆ ವಿಪಕ್ಷಗಳು ಜಂಟಿ ಸದನ ಸಮಿತಿ ರಚಿಸುವಂತೆ ಮನವಿ ಮಾಡಿದ್ದೆವು. ಈಗಾಗಲೇ ಅನೇಕರು ತಮ್ಮ ಸಲಹೆಗಳನ್ನು ನೀಡಿದ್ದಾರೆ. ರಾಜ್ಯಪಾಲರು ಎಷ್ಟು ಬೇಗ ಸಹಿ ಹಾಕಿ ಕಳುಹಿಸುತ್ತಾರೋ ಅಷ್ಟು ಬೇಗ ಪ್ರದೇಶಗಳನ್ನು ಗುರುತಿಸಿ, ಶಾಸಕರ ಬಳಿ ಮತ್ತೊಮ್ಮೆ ಚರ್ಚೆಮಾಡಿ ಚುನಾವಣೆಗೆ ತೆರಳುತ್ತೇವೆ. 73, 74ನೇ ತಿದ್ದುಪಡಿ ಬಗ್ಗೆ ನಮಗೆ ಬದ್ಧತೆಯಿದೆ ಎಂದರು.

ಬಿಜೆಪಿಯವರು ಸಭೆಗೆ ಗೈರು

ಸದನದಿಂದ ಅಮಾನತು ಆದೇಶವನ್ನು ಹಿಂಪಡೆಯಿರಿ ಎಂದು ಅನೇಕ ಬಿಜೆಪಿ ಶಾಸಕರು ಬಿಬಿಎಂಪಿ ಬಜೆಟ್ ಸಭೆಗೆ ಗೈರಾಗಿದ್ದಾರೆ. ಇದು ನನಗೆ ಸಂಬಂಧಪಟ್ಟ ವಿಚಾರವಲ್ಲ ಸಭಾಧ್ಯಕ್ಷರು ಹಾಗೂ ನೀವುಂಟು ಎಂದು ಹೇಳಿದ್ದೇನೆ. ಸಭೆಯಲ್ಲಿ ಹಾಜರಿರುವ ಶಾಸಕರು, ಮಂತ್ರಿಗಳ ಬಳಿ ಬಜೆಟ್ ಬಗ್ಗೆ ಸಲಹೆ ಸೂಚನೆಗಳನ್ನು ತೆಗೆದುಕೊಂಡಿದ್ದೇವೆ. ಬಿಬಿಎಂಪಿ ಆಡಳಿತಾಧಿಕಾರಿಗಳು ಸಮಯ ನೋಡಿ ವಾಸ್ತವವಾಗಿ ಎಷ್ಟು ಗಾತ್ರದ ಬಜೆಟ್ ಅನ್ನು ಮಂಡಿಸಲು ಸಾಧ್ಯವೋ ಅದನ್ನು ಮಂಡಿಸುತ್ತಾರೆ ಎಂದು ತಿಳಿಸಿದರು.

ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್, ಶಾಸಕ ಅಶ್ವತ್ಥ ನಾರಾಯಣ ಅವರ ಬಳಿ ಬಜೆಟ್ ಸಭೆ ದಿನಾಂಕದ ಬಗ್ಗೆ ಚರ್ಚೆ ಮಾಡಿಯೇ ನಿಗದಿ ಮಾಡಿದ್ದೆ. ಅವರಿಂದ ಸೂಕ್ತ ಸಲಹೆಗಳನ್ನು ಪಡೆದುಕೊಂಡು ಏನಾದರೂ ಬದಲಾವಣೆ ಮಾಡಲು ನಾವು ಬದ್ದರಾಗಿದ್ದೇವೆ. ಅನಧಿಕೃತವಾಗಿ ವಿರೋಧ ಪಕ್ಷಗಳ ನಾಯಕರು ಸಹ ಅನೇಕ ನಿರ್ಧಾರಗಳನ್ನು ಸ್ವಾಗತಿಸಿದ್ದಾರೆ. ರಾಜಕೀಯ ಕಾರಣಕ್ಕೆ ಸಭೆಗೆ ಗೈರಾಗಿದ್ದಾರೆ ಎಂದು ಶಿವಕುಮಾರ್ ಹೇಳಿದರು.

blank
Share This Article

ಬೇಸಿಗೆಯಲ್ಲಿ ಕೋಳಿ ಅಥವಾ ಮೀನು?; ತಿನ್ನಲು ಯಾವ ಮಾಂಸ ಉತ್ತಮ? ಇಲ್ಲಿದೆ ಮಾಹಿತಿ.. | Meat

Meat : ಸಾಮಾನ್ಯವಾಗಿ ಬೇಸಿಗೆಯಲ್ಲಿ ಅಧಿಕ ಜನರು ತಂಪುಪಾನಿಯಗಳನ್ನು ಸೇವಿಸುತ್ತಾರೆ. ಈ ಸಮಯದಲ್ಲಿ ಹೆಚ್ಚಿನವರು ಹಗುರವಾದ(ಮೃದುವಾದ)…

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…