More

    ಡಿಸಿಎಂ ಫೋಟೋ ಮಾರ್ಫಿಂಗ್ : ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲು

    ಬೆಂಗಳೂರು: ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಫೋಟೋ ಮಾರ್ಫಿಂಗ್ ಮಾಡಲಾಗಿದೆ ಎಂದು ಆರೋಪಿಸಿ ಕೆಪಿಸಿಸಿ ಕಾನೂನು ಘಟಕದ ವತಿಯಿಂದ ಹೈಗ್ರೌಂಡ್ಸ್ ಠಾಣೆಗೆ ದೂರು ನೀಡಲಾಗಿದೆ.
    ಈ ಹಿಂದೆ ವೈರಲ್ ಆಗಿದ್ದ ಬಿಜೆಪಿ ಮುಖಂಡವೊಬ್ಬರ ಅಶ್ಲೀಲ ಭಾವಚಿತ್ರಕ್ಕೆ ಡಿ.ಕೆ ಶಿವಕುಮಾರ್ ಮುಖ ಜೋಡಣೆ ಮಾಡಿ ಆ ಎಡಿಟ್ ಫೋಟೋವನ್ನು ವೈರಲ್ ಮಾಡಲಾಗಿದೆ. ಫೇಸ್‌ಬುಕ್, ಯೂಟ್ಯೂಬ್ ಮತ್ತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಹೀಗಾಗಿ ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಕೆಪಿಸಿಸಿ ಕಾನೂನು ಘಟಕ ದೂರು ನೀಡಿದೆ. ದೂರಿನ ಮೇರೆಗೆ ಹೈಗ್ರೌಂಡ್ಸ್ ಪೊಲೀಸರು ಸಂತೋಷ್, ರಾಜೇಶ್, ಕೇಸರಿ ಸಾಮ್ರಾಟ್ ಎಂಬುವವರ ವಿರುದ್ಧ ಎ್ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
    ಪ್ರಜ್ವಲ್ ರೇವಣ್ಣ ಅವರ ವಿಡಿಯೋಗಳು ವೈರಲ್ ಆಗುತ್ತಿದ್ದಂತೆಯೇ ಇದೀಗ ಡಿ.ಕೆ ಶಿವಕುಮಾರ್ ಅವರ ಎಡಿಟೆಟ್ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಸಂಬಂಧ ಜೆಡಿಎಸ್, ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ-ಪ್ರತ್ಯಾರೋಪಗಳು ನಡೆದಿವೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts