ಖುಷಿಯಾಗೋರಿಗೆ ಆಗಲಿ; ಹೆಚ್ಚಿನ ಡಿಸಿಎಂ ಬೇಡಿಕೆ ಪ್ರಸ್ತಾವಕ್ಕೆ ಡಿಕೆಶಿ ತಿರುಗೇಟು

dk shi
Published on

ವಿಜಯವಾಣಿ ಸುದ್ದಿಜಾಲ ಮಂಗಳೂರು
ಉಪಮುಖ್ಯಮಂತ್ರಿ ಸ್ಥಾನಗಳ ಹೆಚ್ಚಳ ಸಂಬಂಧಿಸಿ ನೀವು (ಮಾಧ್ಯಮಗಳು) ದಿನಾಲು ನ್ಯೂಸ್ ಹಾಕುತ್ತಿದ್ದೀರಲ್ಲ. ಇದರಿಂದ ಖುಷಿಯಾಗೋರಿಗೆ ಆಗಲಿ. ಯಾರು ಏನು ಬೇಕಿದ್ದರೂ ಬೇಡಿಕೆ ಮುಂದಿಡಲಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನದಲ್ಲಿ ಮಂಗಳವಾರ ಬೆಳಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ವಿಷಯದಲ್ಲಿ ಪಕ್ಷ ಯಾರಿಗೆ ಏನು ಉತ್ತರ ಕೊಡಬೇಕೋ ಕೊಡುತ್ತದೆ ಂದು ಉತ್ತರಿಸಿದರು.
ಚನ್ನಪಟ್ಟಣ ಉಪ ಚುನಾವಣೆ ವಿಚಾರ ಸಂಬಂಧಿಸಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನನ್ನ ತಮ್ಮನಿಗೆ (ಡಿ.ಕೆ.ಸುರೇಶ್) ಚುನಾವಣೆಯಲ್ಲಿ ಆಸಕ್ತಿ ಇಲ್ಲ. ಜನ ನಮಗೆ ರೆಸ್ಟ್ ತೆಗೆದುಕೊಳ್ಳಲು ಹೇಳಿದ್ದಾರೆ. ಪಾರ್ಟಿ ಕೆಲಸ ಮಾಡಬೇಕಂಬ ಆಸೆ ಇದೆ. ನಮಗೆ 85 ಸಾವಿರ ಜನ ಮತ ಕೊಟ್ಟಿದ್ದಾರೆ. ಎಂದಿಗೂ ಆ ಜನರನ್ನ ಬಿಡೋಕಾಗಲ್ಲ ಎಂದು ಅವರು ಪ್ರತಿಕ್ರಿಯಿಸಿದರು.
ನಾವು ಒಂದಷ್ಟು ಅಳಿಲು ಸೇವೆ ಮಾಡಬೇಕೆಂದು ಇದ್ದೀವಿ. 136 ಸೀಟ್ ಕೊಟ್ಟಿದ್ದಾರೆ ಅದನ್ನು ಉಳಿಸಿಕೊಳ್ಳಬೇಕು. ಚನ್ನಪಟ್ಟಣ ಜನಕ್ಕೆ ಏನೂ ಆಗಿಲ್ಲ ಅನ್ನೋ ಭಾವನೆ ಇದೆ. ನಾವು ಅಧಿಕಾರ ಇದ್ದಾಗ ಮಾಡಿದ್ದೀವಿ. ಇದೀಗ ರೈಟ್ ಟೈಮ್ ಎಂದರು.
ನಾನು ಚನ್ನಪಟ್ಟಣ ಏನೂ ಮಾಡಿಲ್ಲ ಎಂದು ಕುಮಾರಸ್ವಾಮಿಗೆ ಏನು ಗೊತ್ತು ? ಕುಮಾರಸ್ವಾಮಿ ಚನ್ನಪಟ್ಟಣ ನೋಡೋ ಮೊದಲು ನಾನು ನೋಡಿದ್ದೇನೆ. ಕುಮಾರಸ್ವಾಮಿ ಬಹಳ ಲೇಟಾಗಿ ರಾಜಕಾರಣಕ್ಕೆ ಬಂದವರು. 1985ಕ್ಕೆನೇ ವಿಧಾನಸಭಾ ಚುನಾವಣೆಗೆ ನಿಂತವನು ನಾನು. ಅವರು 1995 ರ ನಂತರ ರಾಜಕಾರಣಕ್ಕೆ ಬಂದವರು. ಅವರಿಗಿಂತ 10 ವರ್ಷ ಮೊದಲೇ ನನಗೆ ಚನ್ನಪಟ್ಟಣ ಗೊತ್ತು ಎಂದು ಅವರು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net