More

    ಕೋವಿಡ್ ಕೆಲಸಕ್ಕೆ ಕೈಕೊಟ್ಟರೆ ಉದ್ಯೋಗವನ್ನೇ ಕಳೆದುಕೊಳ್ತೀರಿ: ನರ್ಸ್, ವೈದ್ಯರಿಗೆ ಸರ್ಕಾರದ ಎಚ್ಚರಿಕೆ

    ಬೆಂಗಳೂರು: ಸಂಕಷ್ಟದ ಪರಿಸ್ಥಿತಿಯಲ್ಲಿ ಕೆಲಸ ಮಾಡದೇ ತಪ್ಪಿಸಿಕೊಂಡಿರುವ ವೈದ್ಯರು ಮತ್ತು ನರ್ಸ್ ಗಳ ಲೈಸೆನ್ಸ್ ಮತ್ತು ನೋಂದಣಿಯನ್ನು ಅಮಾನತು ಮಾಡುವುದಾಗಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಎಚ್ಚರಿಕೆ ನೀಡಿದರು.

    ಬೆಂಗಳೂರಿನ ಕೋವಿಡ್ ಕೇಂದ್ರಗಳ ಉಸ್ತುವಾರಿಯೂ ಆಗಿರುವ ಅವರು ನಗರದಲ್ಲಿ ಬುಧವಾರ ಕೋವಿಡ್ ಕೇರ್ ಕೇಂದ್ರಗಳ ವ್ಯವಸ್ಥೆ, ಅವುಗಳ ವಿವಿಧ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಜತೆ ಮಹತ್ವದ ಸಭೆ ನಡೆಸಿ, “ಕೆಲಸದಿಂದ ಪಲಾಯನ ಮಾಡಿರುವ ವೈದ್ಯರು, ನರ್ಸುಗಳನ್ನು ಗುರುತಿಸಿ ಅವರನ್ನು ಕೂಡಲೇ ವೃತ್ತಿಯಿಂದ ಬಿಡುಗಡೆ ಮಾಡಲು ಈಗಾಗಲೇ ಸರ್ಕಾರವು ಮೆಡಿಕಲ್ ಕೌನ್ಸಿಲ್ ಹಾಗೂ ನರ್ಸಿಂಗ್ ಕೌನ್ಸಿಲ್’ಗೆ ಕರಾರುವಕ್ಕಾದ ಸೂಚನೆ ನೀಡಿದೆ” ಎಂದರು. ಇದನ್ನೂ ಓದಿ ನಟ ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾಗೆ ಕರೊನಾ ಪಾಸಿಟಿವ್​

    ಇದು ಸೋಂಕಿನ ಕಾಯಿಲೆ. ವ್ಯಾಪಕವಾಗಿ ಹರಡುತ್ತಿದೆ. ಹೀಗಾಗಿ ಸಮರೋಪಾದಿಯಲ್ಲಿ ಚಿಕಿತ್ಸೆ ನೀಡಬೇಕಾದ ಹೊಣೆಗಾರಿಕೆ ವೈದ್ಯರ ಮೇಲಿದೆ. ನಿಯಂತ್ರಣಕ್ಕಾಗಿ ಹರಸಾಹಸ ಮಾಡುತ್ತಿರುವ ವೇಳೆಯಲ್ಲಿ ನಿರ್ಲಕ್ಷ್ಯ ಧೋರಣೆ ತಾಳಿರುವುದು ಅಮಾನವೀಯ. ಮುಂದೆ ಪರಿಸ್ಥಿತಿ ಕೈಮೀರಿ ಹೋಗಲಿದೆ ಎಂಬ ಪರಿಜ್ಞಾನವೂ ಇಲ್ಲದಿದ್ದರೆ ಹೇಗೆ? ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಈ ಕ್ಲಿಷ್ಟ ಸಮಯದಲ್ಲಿ ಖಾಸಗಿ ವೈದ್ಯರು ಹೆದರಿ ಹಿಂದೆ ಸರಿಯುತ್ತಿರುವುದು ಸರಿಯಲ್ಲ. ಯುದ್ಧದ ಪರಿಸ್ಥಿತಿ ರಾಜ್ಯದಲ್ಲಿ ತಲೆದೋರಿದ್ದು, ಸೇವಾ ಮನೋಭಾವದಿಂದ ಕೆಲಸ ಮಾಡಬೇಕಾಗಿದೆ. ಸರಕಾರ ಎಲ್ಲ ರೀತಿಯ ರಕ್ಷಣೆ ನೀಡುತ್ತಿದೆ. ಅದುಬಿಟ್ಟು ವೃತ್ತಿಗೆ ದ್ರೋಹ ಬಗೆದು ಸೋಂಕಿತರನ್ನು ನಡುನೀರಿನಲ್ಲಿ ಬಿಟ್ಟು ಪಲಾಯನ ಮಾಡುವುದು ತಪ್ಪು. ಇದನ್ನು ಸರಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಕೂಡಲೇ ಸೇವೆಗೆ ಹಾಜರಾಗದ ವೈದ್ಯರು, ನರ್ಸುಗಳು ಹಾಗೂ ಪೂರಕ ಸಿಬ್ಬಂದಿಯ ಹೆಸರುಗಳ ಸಮೇತ ಪ್ರಕಟಿಸಲಾಗುವುದು ಎಂದು ಅವರು ಖಡಕ್ ವಾರ್ನಿಂಗ್ ಕೊಟ್ಟರು.

    ಪ್ರಸ್ತುತ ಬೆಂಗಳೂರು ನಗರದ ಕೋವಿಡ್ ಕೇರ್ ಕೇಂದ್ರಗಳಲ್ಲಿ 2,624 ಹಾಸಿಗೆಗಳಿದ್ದು, ಅಲ್ಲಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕೇಂದ್ರಗಳಿಗೆ ಒಟ್ಟಾರೆ 86 ವೈದ್ಯರ ಅಗತ್ಯವಿದ್ದರೆ, 61 ವೈದ್ಯರು ಮಾತ್ರ ನಮಗೆ ಲಭ್ಯವಿದ್ದಾರೆ. ಇನ್ನು 134 ನರ್ಸುಗಳು ನಮಗೆ ಅಗತ್ಯವಿದ್ದು, ಕೇವಲ 54 ಜನ ಲಭ್ಯರಿದ್ದಾರೆ. 80 ನರ್ಸುಗಳ ಕೊರತೆ ಇದೆ. ಇದು ನಿಜಕ್ಕೂ ಕಳವಳಕಾರಿ. ಬಾಕಿವರೆಲ್ಲ ಕೆಲಸಕ್ಕೆ ಬಾರದೆ ತಪ್ಪಿಸಿಕೊಂಡಿರುವ ಕಾರಣ ಕೆಲಸ ಮಾಡುತ್ತಿರುವವರಿಗೆ ತೀವ್ರ ಒತ್ತಡ ಉಂಟಾಗುತ್ತಿದೆ. ರೋಗಿಗಳಿಗೂ ತುಂಬಾ ಕಷ್ಟವಾಗುತ್ತಿದೆ ಎಂದು ಮಾಹಿತಿ ನೀಡಿದರು.

    ಇದನ್ನೂ ಓದಿ ಕೇಸರಿ ಬಟ್ಟೆ, ತಿಲಕ ವಿರೋಧಿಸಿ ಮುಸ್ಲಿಂ ವ್ಯಕ್ತಿಯಿಂದ ಥಳಿತ; ಸನ್ಯಾಸಿಯ ಸಾವು!

    ಈ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರತಿ 100 ರೋಗಿಗಳಿಗೆ ಒಬ್ಬ ವೈದ್ಯರು, ಇಬ್ಬರು ನರ್ಸುಗಳ ಅಗತ್ಯವಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ಈ ಸಿಬ್ಬಂದಿಯನ್ನು ಒದಗಿಸಬೇಕು. ಇನ್ನು, ಔಷಧಿ, ಪಿಪಿಎ ಕಿಟ್ಟುಗಳು, ಎನ್-95 ಮಾಸ್ಕುಗಳು, ಫಲ್ಸಾಕ್ಸಿ ಮೀಟರ್ ಮತ್ತಿತರೆ ಪರಿಕರಗಳನ್ನು ಸಕಾಲಕ್ಕೆ ಒದಗಿಸುವಂತೆ ಆರೋಗ್ಯ ಇಲಾಖೆಯನ್ನು ಕೋರಲಾಗಿದೆ. ಇದರ ಜತೆಗೆ, ಈ ಕೇಂದ್ರಗಳಲ್ಲಿ ಬಯೋಮೆಡಿಕಲ್ ವೇಸ್ಟ್ ವಿಲೇವಾರಿ, ಊಟ, ಹೌಸ್ ಕೀಪಿಂಗ್ ಮತ್ತಿತರೆ ವಿಷಯಗಳ ಬಗ್ಗೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಒಂದು ಸಣ್ಣ ಅನಾನುಕೂಲ ಆಗದಂತೆ ಕಟ್ಟೆಚ್ಚರ ವಹಿಸಲಾಗಿದೆ ಎಂದು ವಿವರಿಸಿದರು.

    ಮಾರುಕಟ್ಟೆಗೆ ಬರಲಿದೆ ಆಯುರ್ವೇದಿಕ್​ ಮಾಸ್ಕ್​ !

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts