

ಬೆಂಗಳೂರು: ಡಿಸಿಎಂ ಗೋವಿಂದ ಕಾರಜೋಳ ಅವರ ಪುತ್ರ ಗೋಪಾಲ ಕಾರಜೋಳ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಕರೊನಾ ಸೋಂಕಿನಿಂದ 24 ದಿನಗಳಿಂದಲೂ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗೋಪಾಲ ಕಾರಜೋಳ ಅವರನ್ನು ಇದೀಗ ಚೆನ್ನೈಗೆ ಏರ್ಲಿಫ್ಟ್ ಮಾಡುವ ಬಗ್ಗೆ ಚಿಂತಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಮಣಿಪಾಲ್ನಲ್ಲಿ ವೆಂಟಿಲೇಟರ್ ಮುಖಾಂತರ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೂ ಅವರ ಆರೋಗ್ಯ ಸುಧಾರಿಸಿರಲಿಲ್ಲ. ಹಾಗಾಗಿ ಚೆನ್ನೈ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಕೊಡಿಸಲು ಡಿಸಿಎಂ ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಇನ್ನು ಡಿಸಿಎಂ ಪುತ್ರನ ಆರೋಗ್ಯ ಗಂಭೀರವಾಗಿದೆ ಎಂದು ಇಂದು ಸಿಎಂ ಯಡಿಯೂರಪ್ಪನವರೂ ಹೇಳಿದ್ದರು.