

ಬೆಂಗಳೂರು: ಆರೋಪಿಗಳನ್ನು ಬಂಧಿಸಲು ಕೆರಳಕ್ಕೆ ತೆರಳಿದ್ದ ವೈಟ್ಫೀಲ್ಡ್ ಸೈಬರ್ ಕ್ರೈಂ ಠಾಣೆಯ ಇನ್ಸ್ಪೆಕ್ಟರ್ ಶಿವಕುಮಾರ್ ಹಾಗೂ ಸಿಬ್ಬಂದಿಯನ್ನು ಕೇರಳ ಪೊಲೀಸರು ಬಂಧಿಸಿಲ್ಲ. ಪ್ರಕರಣ ಸಂಬಂಧ ನೋಟಿಸ್ ನೀಡಿ ವಿಚಾರಣೆ ನಡೆಸಿ ಬಿಡುಗಡೆ ಮಾಡಿದ್ದಾರೆ ಎಂದು ವೈಟ್ಫೀಲ್ಡ್ ವಿಭಾಗದ ಡಿಸಿಪಿ ಎಸ್. ಗಿರೀಶ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಡಿಸಿಪಿ ಗಿರೀಶ್ ಸೈಬರ್ ಕ್ರೈಂ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣ ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಲು ಕೇರಳದ ಕೊಚ್ಚಿಗೆ ತೆರಳಿದಾಗ ಶಿವಕುಮಾರ್ ಹಾಗೂ ಸಿಬ್ಬಂದಿಯನ್ನು ಸ್ಥಳೀಯ ಆರಕ್ಷಕರು ವಶಕ್ಕೆ ಪಡೆದಿದ್ದರು.
ಎಸಿಪಿ ನೇತೃತ್ವದ ತಂಡ ಈಗಾಗಲೇ ಕೇರಳದ ಕೊಚ್ಚಿಗೆ ತೆರಳಿದ್ದು, ಅಲ್ಲಿನ ಪೊಲೀಸರಿಗೆ ಈ ಕುರಿತು ಮಾಹಿತಿ ನೀಡಲಾಗಿದೆ. ಈ ಸಂಬಂಧ ವೈಟ್ಫೀಲ್ಡ್ ಸೈಬರ್ ಕ್ರೈಂ ಠಾಣೆಯ ಇನ್ಸ್ಪೆಕ್ಟರ್ ಶಿವಕುಮಾರ್ ಹಾಗೂ ಸಿಬ್ಬಂದಿಯನ್ನು ಪುನಃ ವಿಚಾರಣೆಗೆ ಬರುವಂತೆ ನೋಟಿಸ್ ನೀಡಿ ಬಿಡುಗಡೆ ಮಾಡಲಾಗಿದೆ.
ಬೆಂಗಳೂರು ಪೊಲೀಸರು ಕೆಲ ಆರೋಪಿಗಳನ್ನು ಬಂಧಿಸಲೆಂದು ಕೇರಳಕ್ಕೆ ತೆರಳಿದ್ದರು. ಈ ಸಂದರ್ಭ ಕೇರಳದ ಕಲ್ಮಶೇರಿ ಪೊಲೀಸರು ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಅರೆಸ್ಟ್ ಮಾಡಿದ್ದರು.
ವಂಚನೆ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರು, ಆರೋಪಿಗಳಿಂದ ಹಣಕ್ಕಾಗಿ ಡಿಮ್ಯಾಂಡ್ ಮಾಡಿದ್ದಾರೆ ಎನ್ನುವ ಆರೋಪವನ್ನು ಹೊರಿಸಲಾಗಿದ್ದು, ಆರೋಪಿಗಳು ಕಲ್ಮಶೇರಿ ಪೊಲೀಸರಿಗೆ ದೂರು ನೀಡಿದ್ದರು.
ಈ ಹಿಂದೆ ಉದ್ಯೋಗ ಕೊಡಿಸುವುದಾಗಿ ಸಾಫ್ಟ್ವೇರ್ ಇಂಜಿನಿಯರ್ಗೆ ಮೋಸವಾಗಿದ್ದ ಹಿನ್ನಲೆಯಲ್ಲಿ ಸಿಇಎನ್ ಇನ್ಸ್ಪೆಕ್ಟರ್ ಶಿವಪ್ರಕಾಶ್ ಹಾಗೂ ತಂಡ, ಹಣದ ರಿಕವರಿಗೆಂದು ಕೇರಳಕ್ಕೆ ತೆರಳಿದ್ದರು. ಚಂದಕ್ ಶ್ರೀಕಾಂತ್ ಎಂಬುವವರು ಕೊಟ್ಟಿದ್ದ ದೂರಿನ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಕೇರಳಕ್ಕೆ ತೆರಳಿದ್ದರು.