More

    ಡಾ.ಗಂಗಾಧರ ಶ್ರೀಗಳಿಂದ ತ್ರಿವಿಧ ದಾಸೋಹ

    ಯಾದಗಿರಿ: ಶಿಕ್ಷಣದಿಂದ ಉತ್ತಮ ನಾಗರಿಕರಾಗಲು ಸಾಧ್ಯ. ಪಾಲಕರು ಶಿಕ್ಷಣಕ್ಕೆ ಮಹತ್ವ ನೀಡಿ ಮಕ್ಕಳಿಗೆ ಅಕ್ಷರ ಜ್ಞಾನ ನೀಡುವ ಅಗತ್ಯವಿದೆ ಎಂದು ಡಿಡಿಪಿಯು ಚಂದ್ರಕಾಂತ ಹಿಳ್ಳಿ ಹೇಳಿದರು.

    ಅಬ್ಬೆತುಮಕೂರಿನ ಶ್ರೀ ವಿಶ್ವಾರಾಧ್ಯರ ಜಾತ್ರಾ ಮಹೋತ್ಸವದಲ್ಲಿ ಸೋಮವಾರ ಸಂಜೆ ಏರ್ಪಡಿಸಿದ್ದ ಶ್ರೀ ವಿಶ್ವಾರಾಧ್ಯ ವಿದ್ಯಾಸಂಸ್ಥೆ ವಾರ್ಷಿಕ ಸ್ನೇಹ ಸಮ್ಮೇಳನ ಉದ್ಘಾಟಿಸಿದ ಅವರು, ಮಠದ ಪೀಠಾಧಿಪತಿ ಶ್ರೀ ಡಾ.ಗಂಗಾಧರ ಸ್ವಾಮೀಜಿ ಶೈಕ್ಷಣಿಕ ಕ್ಷೇತ್ರಕ್ಕೆ ಗಣನೀಯ ಕೊಡುಗೆ ಮೂಲಕ ತ್ರಿವಿಧ ದಾಸೋಹ ನಡೆಸುತ್ತಿದ್ದಾರೆ ಎಂದು ಬಣ್ಣಿಸಿದರು.

    ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ರಜನಿಕಾಂತ ಮಾತನಾಡಿ, ವರ್ತಮಾನದ ವ್ಯವಸ್ಥೆಯಲ್ಲಿ ಶಿಕ್ಷಣಕ್ಕೆ ತುಂಬ ಮಹತ್ವವಿದೆ. ಅದಕ್ಕಾಗಿ ಪ್ರತಿಯೊಬ್ಬ ಪಾಲಕರು ತಮ್ಮ ಮಕ್ಕಳನ್ನು ತಪ್ಪದೆ ಶಿಕ್ಷಿತರನ್ನಾಗಿ ಮಾಡಬೇಕು ಎಂದರು.

    ವೈದ್ಯ ಡಾ.ಸಿ.ಎಂ. ಪಾಟೀಲ್ ಮಾತನಾಡಿ, ಮಠ ಮಾನ್ಯಗಳ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಪಡೆಯುವುದರಿಂದ ಉತ್ತಮ ಸಂಸ್ಕಾರ ದೊರೆಯುತ್ತದೆ. ಮಠಮಾನ್ಯಗಳಲ್ಲಿ ವ್ಯಾಸಂಗ ಮಾಡಿದವರು ದೇಶ ವಿದೇಶಗಳಲ್ಲಿ ಉನ್ನತ ಸ್ಥಾನಗಳಲ್ಲಿದ್ದಾರೆ ಎಂದು ಹೇಳಿದರು.

    ಮಠದ ಪೀಠಾಧಿಪತಿ ಶ್ರೀ ಡಾ.ಗಂಗಾಧರ ಸ್ವಾಮೀಜಿ ನೇತೃತ್ವ ವಹಿಸಿದ್ದರು. ಡಾ.ವೀರೇಶ ಜಾಕಾ, ಡಾ.ಶರಣಬಸವ ಎಲ್ಹೇರಿ, ಡಾ.ಸುಭಾಶ್ಚಂದ್ರ ಕೌಲಗಿ, ಎಸ್.ಎನ್. ಮಿಂಚನಾಳ, ವೆಂಕಟರೆಡ್ಡಿ ಮಾಲಿಪಾಟೀಲ್, ರಾಜಪ್ಪಗೌಡ ಮಾಲಿಪಾಟೀಲ್, ಮಲ್ಲಿಕಾರ್ಜುನ ಶಾಸ್ತ್ರಿ ಐನಾಪುರ, ಬಸವರಾಜ ಶಾಸ್ತ್ರಿ ಎಲೆಕೂಡ್ಲಗಿ ಸೇರಿ ವಿಶ್ವಾರಾಧ್ಯ ಶಿಕ್ಷಣ ಸಂಸ್ಥೆ ಶಿಕ್ಷಕರು, ಉಪನ್ಯಾಸಕರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts