More

    ಬಿಇಒ ಮಂಜುಳಾಗೆ ಡಿಡಿಪಿಐ ನೋಟಿಸ್

    ಕೊಳ್ಳೇಗಾಲ : ತಾಲೂಕಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಕೇಂದ್ರಗಳಲ್ಲಿರುವ ಸಿಸಿ ಕ್ಯಾಮರಾದಲ್ಲಿ ದೃಶ್ಯಾವಳಿಗಳು ಸ್ಪಷ್ಟವಾಗಿರದ ಹಿನ್ನೆಲೆಯಲ್ಲಿ ಕೊಳ್ಳೇಗಾಲ ಬಿಇಒ ಮಂಜುಳಾ ಅವರಿಗೆ ಮಾ.26 ರಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ರಾಮಚಂದ್ರರಾಜೇ ಅರಸ್ ನೋಟಿಸ್ ನೀಡಿದ್ದಾರೆ.
    ರಾಜ್ಯದಲ್ಲಿ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾ.25ರಿಂದ ಆರಂಭಗೊಂಡಿದೆ. ಪಾರದರ್ಶಕತೆ ಹಾಗೂ ವಿದ್ಯಾರ್ಥಿ ಸ್ನೇಹಿಯಾಗಿ ಪರೀಕ್ಷೆ ನಡೆಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮತ್ತು ಶಾಲಾ ಶಿಕ್ಷಣ ಇಲಾಖೆ ನಿರ್ಧರಿಸಿದ್ದು. ಅದರಂತೆ, ಪರೀಕ್ಷೆ ಕೇಂದ್ರದ ಕೊಠಡಿಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಈ ನಡುವೆ ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಪರೀಕ್ಷೆ ನಡೆಸಿದಾಗ ತಾಲೂಕಿನ ಪ್ರಕಾಶ್ ಪಾಳ್ಯದಲ್ಲಿರುವ ಡಾನ್‌ಬಾಸ್ಕೊ ಪ್ರೌಢಶಾಲೆ, ಕಾಮಗೆರೆ ಸಂಸ ಫ್ರಾನ್ಸಿಸ್ ಕ್ಷೇವಿಯರ್ ಪ್ರೌಢಶಾಲೆ ಹಾಗೂ ಸತ್ತೇಗಾಲ ಸರ್ಕಾರಿ ಪ್ರೌಢಶಾಲೆ ಪರೀಕ್ಷಾ ಕೇಂದ್ರದಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾಗಳ ದೃಶ್ಯಾವಳಿಗಳು ಸ್ಪಷ್ಟವಿಲ್ಲದಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಡಿಡಿಪಿಐ ರಾಮಚಂದ್ರರಾಜೇ ಅರಸ್ ಕೊಳ್ಳೇಗಾಲ ಬಿಇಒ ಎಂ.ಮಂಜುಳಾ ಅವರಿಗೆ ನೋಟಿಸ್ ನೀಡಿದ್ದಾರೆ. ಅಲ್ಲದೆ, ಪರೀಕ್ಷಾ ಕೇಂದ್ರಗಳಿಗೆ ತೆರಳಿ ಸಿಸಿ ಕ್ಯಾಮರಾಗಳ ದೃಶ್ಯಾವಳಿಗಳು ಸ್ಪಷ್ಟವಾಗಿ ಕಾಣಲು ಉಂಟಾಗಿರುವ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಿ ಕಚೇರಿಗೆ ವರದಿ ನೀಡಬೇಕೆಂದು ಸೂಚನೆ ನೀಡಿದ್ದಾರೆ. ತಪ್ಪಿದಲ್ಲಿ 2024ರ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ನಡೆಸಲು ವ್ಯವಸ್ಥಿತವಾಗಿ ವಿಫಲವಾಗಿರುವ ಕುರಿತು ನಿಮ್ಮ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಆಯುಕ್ತರಿಗೆ ವರದಿ ನೀಡಲಾಗುವುದು ಎಂದು ಡಿಡಿಪಿಐ ಅವರು ಬಿಇಒ ಮಂಜುಳಾ ಅವರಿಗೆ ಎಚ್ಚರಿಕೆ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts