ಲಾಯಿಲದಲ್ಲಿ ಮದ್ಯವರ್ಜನಾ ಶಿಬಿರ ಸಮಾಪ್ತಿ

de-addiction camp
ವಿಶೇಷ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭವನ್ನು ಮುಖ್ಯಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್‌ಎಸ್.ಎಸ್. ಉದ್ಘಾಟಿಸಿದರು. ಜನಜಾಗೃತಿ ವೇದಿಕೆ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ. ಪಾಸ್, ಯೋಜನಾಧಿಕಾರಿ ಮಾಧವಗೌಡ, ಶಿಬಿರಾಧಿಕಾರಿ ದಿವಾಕರ ಪೂಜಾರಿ ಮತ್ತಿತರರಿದ್ದರು.
Published on

ಬೆಳ್ತಂಗಡಿ: 224ನೇ ವಿಶೇಷ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ಲಾಲ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನ ಕೇಂದ್ರದಲ್ಲಿ ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಅನಿಲ್‌ಕುಮಾರ್ ಎಸ್.ಎಸ್.ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು. ರಾಜ್ಯದ ವಿವಿಧೆಡೆಯಿಂದ ಆಗಮಿಸಿದ 84 ಶಿಬಿರಾರ್ಥಿಗಳಿಗೆ ಮನೋ ವೈದ್ಯಕೀಯ ಚಿಕಿತ್ಸೆ ಮತ್ತು ಆಪ್ತ ಸಮಾಲೋಚನೆ ಸಹಿತ ಪ್ರೇರಣೆ ನೀಡಲಾಯಿತು. ಜನಜಾಗೃತಿ ವೇದಿಕೆ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ. ಪಾಸ್, ಯೋಜನಾಧಿಕಾರಿ ಮಾಧವಗೌಡ, ಶಿಬಿರಾಧಿಕಾರಿ ದಿವಾಕರ ಪೂಜಾರಿ, ಚಿತ್ತರಂಜನ್, ಫಿಲೋಮಿನಾ, ರಂಜಿತಾ ಸಹಕರಿಸಿದರು. ಜೂನ್ 3ರಿಂದ ಮುಂದಿನ ವಿಶೇಷ ಶಿಬಿರ ಆರಂಭವಾಗಲಿದೆ ಎಂದು ವೇದಿಕೆಯ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net