ವಿಜಯವಾಣಿ ಸುದ್ದಿಜಾಲ ಕಡಬ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕಡಬ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳ ಸಹಯೋಗದಲ್ಲಿ, ಪುಣ್ಚಪ್ಪಾಡಿ ವಿನಾಯಕನಗರ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಆಶ್ರಯದಲ್ಲಿ ಕಡಬ ತಾಲೂಕಿನ ಪುಣ್ಚಪ್ಪಾಡಿ ಗ್ರಾಮದ ಪುಣ್ಚಪ್ಪಾಡಿ ನೇರೋಳ್ತಡ್ಕದಲ್ಲಿ ಸೆ.29ರವರೆಗೆ ನಡೆಯಲಿರುವ 1843ನೇ ಮದ್ಯವರ್ಜನ ಶಿಬಿರ ಉದ್ಘಾಟನೆಗೊಂಡಿತು.
ಕಡಬ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಮಹೇಶ್ ಕೆ.ಸವಣೂರು ಅಧ್ಯಕ್ಷತೆ ವಹಿಸಿದ್ದರು. ಸವಣೂರು ಗ್ರಾ.ಪಂ.ಅಧ್ಯಕ್ಷೆ ಸುಂದರಿ ಬಿ.ಎಸ್.,ವಿಜಯ ಬ್ಯಾಂಕ್ ನಿವೃತ್ತ ರೀಜನಲ್ ಮ್ಯಾನೇಜರ್ ಎ.ಕೃಷ್ಣ ರೈ ಪುಣ್ಚಪ್ಪಾಡಿ ತಳಮನೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಪ್ರವೀಣ್ ಕುಮಾರ್, ಪುತ್ತೂರು ರೋಟರಿ ಕ್ಲಬ್‌ನ ಮಾಜಿ ಅಧ್ಯಕ್ಷ ಪಿ.ಡಿ.ಕೃಷ್ಣ ಕುಮಾರ್ ರೈ ದೇವಸ್ಯ, ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು ಶುಭಹಾರೈಸಿದರು.
ಮದ್ಯವರ್ಜನಾ ಶಿಬಿರದ ವ್ಯವಸ್ಥಾಪನ ಸಮಿತಿ ಗೌರವಾಧ್ಯಕ್ಷ ಗಿರಿಶಂಕರ ಸುಲಾಯ, ಮದ್ಯವರ್ಜನಾ ಶಿಬಿರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸಚಿನ್ ಕುಮಾರ್ ಜೈನ್, ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ವಿಭಾಗ ಉಡುಪಿಯ ಯೋಜನಾಧಿಕಾರಿ ಗಣೇಶ್ ಆಚಾರ್ಯ, ಸವಣೂರು ಸಿ.ಎ.ಬ್ಯಾಂಕ್ ಉಪಾಧ್ಯಕ್ಷ ಚೇತನ್ ಕುಮಾರ್ ಕೋಡಿಬೈಲು, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸವಣೂರು ವಲಯಾಧ್ಯಕ್ಷ ರಾಮಚಂದ್ರ ಗೌಡ ಇಡ್ಯಡ್ಕ, ಪುಣ್ಚಪ್ಪಾಡಿ ಒಕ್ಕೂಟದ ಅಧ್ಯಕ್ಷ ವಿಜಯ ಗೌಡ ಕುಚ್ಚೆಜಾಲು ಮೊದಲಾದವರು ಉಪಸ್ಥಿತರಿದ್ದರು.
ಗ್ರಾಮಾಭಿವೃದ್ದಿ ಯೋಜನೆಯ ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ ಸ್ವಾಗತಿಸಿ, ಶಿಬಿರಾಧಿಕಾರಿ ದೇವಿಪ್ರಸಾದ್ ಸುವರ್ಣ ಪ್ರಸ್ತಾವನೆಗೈದರು. ಶಿಬಿರದ ಗೌರವ ಸಲಹೆಗಾರ ಶೀನಪ್ಪ ಶೆಟ್ಟಿ ನೆಕ್ರಾಜೆ ವಂದಿಸಿದರು. ರವಿಪ್ರಸಾದ್ ಆಲಾಜೆ ನಿರೂಪಿಸಿದರು.