ಮನೆ ಅಂಗಳದ ಬಾವಿಯಲ್ಲಿ ಮಹಿಳೆ ಮೃತದೇಹ ಪತ್ತೆ

Death Case
Published on

ಕಾಸರಗೋಡು: ಬಂಗ್ರಮಂಜೇಶ್ವರ ಶ್ರೀ ಕಾಳಿಕಾಪರಮೇಶ್ವರೀ ದೇವಸ್ಥಾನ ಸಮೀಪದ ನಿವಾಸಿ ದಿ.ಜನಾರ್ದನ ಆಚಾರ್ಯ ಅವರ ಪತ್ನಿ ಸುಗುಣ(77)ಎಂಬುವರ ಮೃತದೇಹ ಮನೆ ಅಂಗಳದ ಬಾವಿಯಲ್ಲಿ ಪತ್ತೆಯಾಗಿದೆ. ಶುಕ್ರವಾರ ರಾತ್ರಿ ಆಹಾರ ಸೇವಿಸಿ ಮಲಗಿದ್ದ ಅವರು, ಶನಿವಾರ ಬೆಳಗ್ಗೆ ನಾಪತ್ತೆಯಾಗಿದ್ದರು. ಹುಡುಕಾಡುವಾಗ ಮನೆ ಅಂಗಳದಲ್ಲಿರುವ ಬಾವಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಅಗ್ನಿಶಾಮಕ ದಳದ ನೆರವಿನಿಂದ ಮೃತದೇಹ ಮೇಲಕ್ಕೆತ್ತಲಾಗಿದ್ದು, ಮಂಗಲ್ಪಾಡಿ ಸರ್ಕಾರಿ ಆಸ್ಪತ್ರೆಯಲ್ಲಿ ಶವಮಹಜರು ನಡೆಸಲಾಯಿತು. ಮಂಜೇಶ್ವರ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net