ರೈಲು ಹಳಿಯಲ್ಲಿ ಮೃತದೇಹ ಪತ್ತೆ

ಕಾಸರಗೋಡು: ತ್ರಿಕರಿಪುರ ವೆಲ್ಲಪ್ ರೈಲ್ವೆ ಗೇಟ್ ಸನಿಹ ರೈಲು ಹಳಿ ಮೇಲೆ ಅಪರಿಚಿತ ಪುರುಷನ ಮೃತದೇಹ ಪತ್ತೆಯಾಗಿದೆ. ರೈಲು ಡಿಕ್ಕಿಯಾಗಿ ಸಾವು ಸಂಭವಿಸಿರಬೇಕೆಂದು ಸಂಶಯಿಸಲಾಗಿದೆ. 60 ವರ್ಷ ಪ್ರಾಯದ ವ್ಯಕ್ತಿ ಎಂದು ಅಂದಾಜಿಸಲಾಗಿದೆ. ಚಂದೇರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.