ಶ್ರೀಲಂಕಾದಲ್ಲಿ ಮೃತಪಟ್ಟವರ ಮೃತದೇಹವನ್ನು ಇಂದು ರಾತ್ರಿ ರಾಜ್ಯಕ್ಕೆ ತರಲಾಗುವುದು: ಎಚ್‌ ಡಿ ಕುಮಾರಸ್ವಾಮಿ

Latest News

ನಾಮಪತ್ರ ಹಿಂಪಡೆದು ತಂದೆಯ ಪರ ಪ್ರಚಾರ ಆರಂಭಿಸಿದ ಸೃಷ್ಟಿ ಪಾಟೀಲ್​: ಮಾಜಿ ಸ್ಪೀಕರ್​ಗೆ ಟಾಂಗ್​ ಕೊಟ್ಟ ಕೌರವನ ಪುತ್ರಿ!

ಹಾವೇರಿ: ಅಧಿಕೃತವಾಗಿ ಇಂದು ಬಿಜೆಪಿ ಪರ ಪ್ರಚಾರ ಆರಂಭಿಸಿದ್ದೇವೆ. ತಂದೆಯ ಗೆಲುವಿಗೆ ದುಡಿದು ಅವರನ್ನು ವಿಜಯಶಾಲಿಯನ್ನಾಗಿಸುತ್ತೇವೆ ಎಂದು ಅನರ್ಹ ಶಾಸಕ ಬಿ.ಸಿ.ಪಾಟೀಲ್​ ಪುತ್ರಿ...

ಸರ್ಕಾರಿ ಸ್ವಾಮ್ಯದ ಕಂಪನಿಗಳ ಖಾಸಗೀಕರಣ ವಿರೋಧಿಸಿ ಲೋಕಸಭೆ ಸ್ಪೀಕರ್ ಪೀಠದ ಎದುರು ಕಾಂಗ್ರೆಸ್​ ಪ್ರತಿಭಟನೆ

ನವದೆಹಲಿ: ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್​ ಲಿಮಿಟೆಡ್​ (ಬಿಪಿಸಿಎಲ್​) ಸೇರಿ ಕೆಲ ಸರ್ಕಾರಿ ಸ್ವಾಮ್ಯದ ಕಂಪನಿಗಳ ಖಾಸಗೀಕರಣ ಮತ್ತು ಚುನಾವಣಾ ಬಾಂಡ್​ ವಿತರಣೆಯನ್ನು ಬಹುದೊಡ್ಡ...

ಮಾಜಿ ಪ್ರಧಾನಿ ರಾಜೀವ್​ ಗಾಂಧಿ ಹಂತಕ ರಾಬರ್ಟ್​ ಪಯಾಸ್​ಗೆ ಒಂದು ತಿಂಗಳ ಪರೋಲ್​

ಚೆನ್ನೈ: ಮಾಜಿ ಪ್ರಧಾನ ಮಂತ್ರಿ ರಾಜೀವ್​ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ರಾಬರ್ಟ್ ಪಯಾಸ್​ಗೆ ಮದ್ರಾಸ್​ ಹೈಕೋರ್ಟ್​ ಗುರುವಾರ 30 ದಿನಗಳ ಪರೋಲ್​...

ಡಿಕೆಶಿ ಗೆ ಹುಬ್ಬಳ್ಳಿಯಲ್ಲಿ ಭರ್ಜರಿ ಸ್ವಾಗತ ನೀಡಿದ ಅಭಿಮಾನಿಗಳು

ವಿಜಯವಾಣಿ ಸುದ್ದಿಜಾಲ, ಹುಬ್ಬಳ್ಳಿ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿ.ಕೆ. ಶಿವಕುಮಾರ ಅವರಿಗೆ ನಗರದಲ್ಲಿ ಗುರುವಾರ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಭರ್ಜರಿ ಸ್ವಾಗತಿಸಿದರು.ಗೋಕುಲ ರಸ್ತೆ ವಿಮಾನ...

ನಾಳೆ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಸರ್ಜರಿಗೆ ಒಳಗಾಗುತ್ತಿದ್ದಾರೆ ನಟ, ನೇತಾರ ಕಮಲ್ ಹಾಸನ್

ಚೆನ್ನೈ: ಮಕ್ಕಳ್ ನೀದಿ ಮೈಯ್ಯಮ್(ಎಂಎನ್​ಎಂ) ಪಕ್ಷ ಸ್ಥಾಪಕ ನಟ ಕಮಲ್ ಹಾಸನ್ ನಾಳೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಮುಖ ಸರ್ಜರಿಗೆ ಒಳಗಾಗಲಿದ್ದಾರೆ ಎಂದು...

ಹಾಸನ: ಶ್ರೀಲಂಕಾದಲ್ಲಿ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ರಾಯಭಾರಿ ಕಚೇರಿ ಸಂಪರ್ಕದಲ್ಲಿದ್ದೇವೆ. JDS ಶಾಸಕರು, ಮಾಜಿ ಶಾಸಕರು ಶ್ರೀಲಂಕಾಗೆ ಹೋಗಿದ್ದಾರೆ. ಇಂದು ರಾತ್ರಿ ರಾಜ್ಯಕ್ಕೆ ಮೃತದೇಹ ತರಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಚನ್ನರಾಯಪಟ್ಟಣದಲ್ಲಿ ಮಾತನಾಡಿ, ಶ್ರೀಲಂಕಾ ಬಾಂಬ್ ಸ್ಫೋಟ ಘಟನೆಯಲ್ಲಿ ನಮ್ಮ ಪ್ರವಾಸಿಗರು ಸಾವಿಗೀಡಾಗಿದ್ದಾರೆ. ಎಲ್ಲ ಮೃತದೇಹ ಒಂದೇ ಬಾರಿಗೆ ತರಲು ಸಾಧ್ಯವಿಲ್ಲ. ಸರ್ಕಾರದ ಕಡೆಯಿಂದ ಎಲ್ಲ ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದರು.

ಶಿವಮೊಗ್ಗ ಸೇರಿ ಉಳಿದ ಮೂರು ಕಡೆ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ. ಜತೆಗೆ 11 ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳೂ ಗೆಲ್ಲುತ್ತಾರೆ ಎಂದ ಅವರು ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಬಿಡುವ ವಿಚಾರ ಕುರಿತು ಪ್ರತಿಕ್ರಿಯಿಸಿ, ಈ ಸುದ್ದಿ ಹೊಸದಲ್ಲ, ಎಲ್ಲರನ್ನೂ ವಿಶ್ವಾಸಕ್ಕೆ ಪಡೆಯುವ ಕೆಲಸ ಮಾಡಲಾಗುವುದು. ಸರಕಾರ ಬೀಳಿಸಲು ಬಿಜೆಪಿಯ ಎಲ್ಲ ನಾಯಕರು ಕಾಯುತ್ತಿದ್ದಾರೆ. ನಮ್ಮ ಶಾಸಕರನ್ನು ಉಳಿಸಿಕೊಳ್ಳುವ ಕೆಲಸವನ್ನು ನಾವು ಮಾಡುತ್ತೇವೆ ಎಂದರು.

ನನ್ನ ಆಡಳಿತದ ಬಗ್ಗೆ ಶಾಸಕರು ಮುನಿಸಿಕೊಂಡಿದ್ದಾರೆ ಎಂದು ಯಡಿಯೂರಪ್ಪಗೆ ಯಾರು ಹೇಳಿದರೋ ಗೊತ್ತಿಲ್ಲ. ಬಿಜೆಪಿಯವರು ಮೇ 23ರ ನಂತರ ಸರಕಾರ ಬೀಳಲಿದೆ ಎಂದು ಗಡುವು ಕೊಟ್ಟಿದ್ದಾರೆ. ಯಾರು ಏನು ಹೇಳಿದ್ದಾರೆ ಎನ್ನುವುದು ಮುಖ್ಯವಲ್ಲ. ಕಾಂಗ್ರೆಸ್ ಜೆಡಿಎಸ್ ನಾಯಕರು ಸೇರಿ ಸರ್ಕಾರವನ್ನು ಸುಭದ್ರವಾಗಿ ನಡೆಸಬೇಕಿದೆ. ಸರ್ಕಾರ ಅಸ್ಥಿರಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಬಿಜೆಪಿಯವರ ಹೈಡ್ರಾಮಾ ನೋಡಿ‌ ಖುಷಿಪಡುವೆ ಎಂದು ತಿಳಿಸಿದರು.

ಮಂಡ್ಯ, ತುಮಕೂರು, ಹಾಸನದಲ್ಲಿ JDS ಗೆಲ್ಲಲಿದೆ. ಫಲಿತಾಂಶ ನಂತರ ಕೆಲವು ಮಾಧ್ಯಮಗಳಿಗೆ ನಿರಾಶೆ ಕಾದಿದೆ. ಬಿಎಸ್​ವೈ ರೀತಿ ಭವಿಷ್ಯ ಹೇಳಲು ನನಗೆ ಬರುವುದಿಲ್ಲ. ಚುನಾವಣೆ ಫಲಿತಾಂಶ ಬಳಿಕ ಎಲ್ಲವೂ ತಿಳಿಯಲಿದೆ. ದೇಶದಲ್ಲಿ ಬಿಜೆಪಿಗೆ ಪರ್ಯಾಯವಾದ ಸರ್ಕಾರ ರಚನೆಯಾಗಲಿದೆ. ರಾಜ್ಯ ಬಿಜೆಪಿ ನಾಯಕರು ಮೋದಿ‌ ಹೆಸರಲ್ಲಿ ಮತ ಕೇಳಿದರು. ಆದರೆ, ಮೋದಿ ಅವರಿಗೆ ವರ್ಚಸ್ಸು ಇಲ್ಲ ಎಂದಮೇಲೆ ಜನ ಬೆಂಬಲ ಎಲ್ಲಿಂದ ಸಿಗಲಿದೆ ಎಂದು ಪ್ರಶ್ನಿಸಿದರು. (ದಿಗ್ವಿಜಯ ನ್ಯೂಸ್)

- Advertisement -

Stay connected

278,645FansLike
573FollowersFollow
611,000SubscribersSubscribe

ವಿಡಿಯೋ ನ್ಯೂಸ್

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...