More

    ಮೃತ ಅಪ್ರಾಪ್ತೆ ಕುಟುಂಬಕ್ಕೆ ಸೂಕ್ತ ನ್ಯಾಯ ಒದಗಿಸಿ

    ಬೆಳಗಾವಿ: ಅಪ್ರಾಪ್ತೆಯನ್ನು ವಿವಾಹವಾಗಿ ಕೊಲೆ ಮಾಡಿರುವ ಕುಟುಂಬದ ವಿರುದ್ಧ ಕಾನೂನು ಕ್ರಮ ಕೈಗೊಂಡು, ಅಪ್ರಾಪ್ತೆ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಮಕ್ಕಳ ಮಾರಾಟ ಮತ್ತು ಸಾಗಣೆ ವಿರೋಧಿ ಆಂದೋಲನ ಸಂಘಟನೆ, ದಲಿತ ಮಹಿಳಾ ಒಕ್ಕೂಟ ಸೇರಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ ಪ್ರತಿಭಟಿಸಿದರು. ಬಳಿಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

    ಹುಕ್ಕೇರಿ ತಾಲೂಕಿನ ಹಗೇದಾಳ ಗ್ರಾಮದ 16 ವರ್ಷದ ಅಪ್ರಾಪ್ತೆಯನ್ನು ಬೆಳಗಾವಿ ತಾಲೂಕಿನ ಹುದಲಿ ಗ್ರಾಮದ ಬಸವರಾಜ ನಾಯಿಕ ಎಂಬುವರು 2020ರ ಮೇ 5ರಂದು ವಿವಾಹವಾಗಿದ್ದರು. ವರದಕ್ಷಣೆಗಾಗಿ ಕಿರುಕುಳ ನೀಡುತ್ತಿದ್ದರು. ಹೀಗಾಗಿ 2020ರ ಮೇ 30ರಂದು ಅಪ್ರಾಪ್ತೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

    ಕೊಲೆ ಮಾಡಿರುವುದಾಗಿ ಸಂಶಯದಿಂದ ಮಾರೀಹಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಆದರೆ, ಪೊಲೀಸರು ಸರಿಯಾಗಿ ತನಿಖೆ ಮಾಡುತ್ತಿಲ್ಲ. ಬಸವರಾಜ ನಾಯಿಕ ಕುಟುಂಬದ ಸದಸ್ಯರನ್ನು ಬಂಧಿಸಿ, ವಿಚಾರಣೆ ನಡೆಸಿಲ್ಲ ಎಂದು ಆರೋಪಿಸಿದರು.

    ಅಪ್ರಾಪ್ತೆ ಸಾವಿನ ತನಿಖೆಗೆ ವಿಶೇಷ ತನಿಖಾಧಿಕಾರಿ ನೇಮಿಸಬೇಕು. ಜತೆಗೆ ಜಿಲ್ಲೆಯಲ್ಲಿ ಅಪ್ರಾಪ್ತೆಯರನ್ನು ಹಣದ ಆಸೆಗಾಗಿ ವಿವಾಹ ಮಾಡಿಸುವ ದಲ್ಲಾಳಿಗಳ ಹಾವಳಿಯೂ ಹೆಚ್ಚಾಗಿದೆ. ಇಂತಹವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಡಳಿತದ ಮೂಲಕ ಸಕಾರಕ್ಕೆ ಮನವಿ ಸಲ್ಲಿಸಿದರು. ಸಂಘಟನೆಯ ಮುಖಂಡೆ ಸುಶೀಲಾ, ರಾಯವ್ವ ಪಾಟೀಲ, ಲಕ್ಷ್ಮೀ ಪೂಜೇರಿ ಹಾಗೂ ಅನೇಕ ಸದಸ್ಯೆಯರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts