ಗೂಡ್ಸ್ ವಾಹನದಲ್ಲಿದ್ದ ಮೃತ ದೇಹವನ್ನು ರಸ್ತೆ ಬದಿ ಎಸೆದು ಹೋದ ಸ್ನೇಹಿತರು

blank

ಉಡುಪಿ : ವಿಪರೀತ ಕುಡಿತ ಚಟದಿಂದ ಗೂಡ್ಸ್ ವಾಹನದಲ್ಲೇ ಸಾವನ್ನಪ್ಪಿದ ವ್ಯಕ್ತಿಯ ಮೃತದೇಹವನ್ನು ಸ್ನೇಹಿತರು ರಸ್ತೆ ಬದಿಯ‌ ಕಸದ ಕೊಂಪೆಗೆ ಎಸೆದು ಹೋದ ಅಮಾನವೀಯ ಘಟನೆ ಕೆಮ್ಮಣ್ಣು ಸಂತೆ ಮಾರುಕಟ್ಟೆಯ ಬಳಿ ಬುಧವಾರ ಮಧ್ಯಾಹ್ನ ನಡೆದಿದೆ. ಈ ದುಷ್ಕೃತ್ಯ ಸಿಸಿಟಿವಿಯಲ್ಲಿ ಸರಿಯಾಗಿದೆ.


ಸೊರಬದ ಹನುಮಂತ (48) ಮೃತರು. ಈತ ವಾರದ ಸಂತೆ ಹಿನ್ನೆಲೆಯಲ್ಲಿ ಕೆಮ್ಮಣ್ಣು ಮಾರುಕಟ್ಟೆಗೆ ವ್ಯಾಪಾರ ನಡೆಸಲು ಬಂದಿದ್ದ ಎನ್ನಲಾಗಿದೆ. ಆದರೆ ವಿಪರೀತ ಮದ್ಯಪಾನ ಮಾಡಿ ವಾಹನದಲ್ಲಿಯೇ ಮಲಗಿದ್ದಲ್ಲಿಯೇ ಮೃತಪಟ್ಟಿದ್ದನು. ಇದನ್ನು ಕಂಡು ಇತರ ಇಬ್ಬರು ವ್ಯಾಪಾರಿಗಳು ಹನುಮಂತನ ಮೃತದೇಹವನ್ನು ಗೂಡ್ಸ್ ವಾಹನದಲ್ಲಿ ಸಾಗಿಸಿಕೊಂಡು ಹೋಗಿ ಕೆಮ್ಮಣ್ಣು ಸಂತೆಮಾರುಕಟ್ಟೆ ಬಳಿಯ ರಸ್ತೆಬದಿ ಕಸದ ಕೊಂಪೆಯಲ್ಲಿ ಎಸೆದು ಹೋಗಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ಸಮಾಜ ಸೇವಕ ಈಶ್ವರ್ ಮಲ್ಪೆ ಅವರು ಮೃತದೇಹವನ್ನು ಉಡುಪಿ ಅಜ್ಜರ ಕಾಡು ಆಸ್ಪತ್ರೆಗೆ ಸಾಗಿಸಿದ್ದಾರೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

ಈ ನಾಲ್ವರೊಂದಿಗೆ ನೀವು ಎಂದಿಗೂ ಜಗಳವಾಡಬೇಡಿ; ಅದರಿಂದ ನಿಮಗೆ ಹಾನಿ | Chanakya Niti

ಆಚಾರ್ಯ ಚಾಣಕ್ಯ ತನ್ನ ಒಂದು ನೀತಿಯ ಮೂಲಕ ಮಾನವನಿಗೆ ತನ್ನ ಜೀವನವನ್ನು ನಡೆಸುವ ಮಾರ್ಗವನ್ನು ಹೇಳಿದ್ದಾರೆ.…

ಬೊಜ್ಜು ಕರಗಿಸಿ ಫಿಟ್​ ಆಗಿರಲು ಈ ತರಕಾರಿಗಳೇ ಸಾಕು; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಇಂದಿನ ಕಾರ್ಯನಿರತ ಜೀವನದಲ್ಲಿ ತೂಕ ಹೆಚ್ಚಾಗುವುದು ತುಂಬಾ ಸಾಮಾನ್ಯ ಸಮಸ್ಯೆಯಾಗಿದೆ. ಅನೇಕರು ಹೆಚ್ಚಿದ ತೂಕದ ಬಗ್ಗೆ…

ಡಯಟ್ ಸೋಡಾ ಕುಡಿಯಲು ಇಷ್ಟಪಡುತ್ತೀರಾ?; ಹಾಗಾದ್ರೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿ ಇದು.. | Health Tips

ನಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸುವ ಜನರು ಸಾಮಾನ್ಯ ಸೋಡಾಕ್ಕಿಂತ ಡಯಟ್ ಸೋಡಾ ಕುಡಿಯಲು…