More

    ಲೋಕಸಭೆ ಚುನಾವಣೆ: ಮಣಿಪುರದಲ್ಲಿ ಗುಂಡಿನ ದಾಳಿ! ದಿಕ್ಕಾಪಾಲಾದ ಮತದಾರರು

    ಇಂಫಾಲ್: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಮೊದಲ ಹಂತದ ಚುನಾವಣೆಯಲ್ಲಿ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಸಂಸದೀಯ ಸ್ಥಾನಗಳಲ್ಲಿ ಇಂದು ಏಪ್ರಿಲ್ 19 ರಂದು ಮತದಾನ ನಡೆಯುತ್ತಿದೆ. ಮತದಾನವು ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾಗಿ ಸಂಜೆ 6 ಗಂಟೆಗೆ ಮುಕ್ತಾಯಗೊಳ್ಳಲಿದೆ. ಆದರೆ ಸರಾಗವಾಗಿ ನಡೆಯಬೇಕಿದ್ದ ಮತದಾನ ಹಿಂಸಾಚಾರಕ್ಕೆ ಕಾರಣವಾಗಿದೆ.

    ಇದನ್ನೂ ಓದಿ: ಶ್ರೀರಾಮನವಮಿ ಆಚರಿಸಿ ಹೋಗುತ್ತಿದ್ದವರನ್ನ ಅಡ್ಡಗಟ್ಟಿ ಅನ್ಯಕೋಮಿನ ಯುವಕರಿಂದ ಬೆದರಿಕೆ!

    ಇತ್ತೀಚೆಗೆ ಭಾರೀ ಗಲಭೆ ನಡೆದು ವಿಶ್ವದಾದ್ಯಂತ ಸುದ್ದಿಯಾಗಿದ್ದ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಘಟನೆ ನಡೆದಿದೆ. ಮೊದಲ ಹಂತದ ಮತದಾನದ ವೇಳೆ ಮಣಿಪುರದ ಮತಗಟ್ಟೆಯೊಂದರಲ್ಲಿ ಗುಂಡಿನ ದಾಳಿ ನಡೆದಿದ್ದು ಗುಂಡಿನ ಸದ್ದು ಕೇಳುತ್ತಿದ್ದಂತೆ ಮತಟ್ಟೆಯಲ್ಲಿದ್ದ ಮತದಾರರು ದಿಕ್ಕಾಪಾಲಾಗಿ ಓಡಿದ್ದಾರೆ.

    ಬಿಷ್ಣುಪುರ ಜಿಲ್ಲೆಯ ಮೊಯಿರಾಂಗ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಥಮನ್​ಪೋಕ್ಪಿ ಮತದಾನ ಕೇಂದ್ರದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದ್ದ ವೇಳೆ ಗುಂಡಿನ ದಾಳಿ ಸಂಭವಿಸಿದೆ. ಈ ದೃಶ್ಯವನ್ನು ವ್ಯಕ್ತಿಯೊಬ್ಬರು ತನ್ನ ಮೊಬೈಲ್​ನಲ್ಲಿ ಸೆರೆಯಾಗಿದೆ.

    ಶುಕ್ರವಾರ ಮತದಾನ ನಡೆಯುವ ವೇಳೆ ಈ ಘಟನೆ ನಡೆದಿದೆ. ಪೂರ್ವ ಇಂಫಾಲ್‌ನ ಮತಗಟ್ಟೆಯೊಂದರಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿತ್ತು. ಈ ವೇಳೆ ದುಷ್ಕರ್ಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಆಗ ರಕ್ಷಣಾ ಸಿಬ್ಬಂದಿ ಸಹ ಪ್ರತಿದಾಳಿ ನಡೆಸಿದ್ದಾರೆ.

    ಛತ್ತೀಸ್‌ಗಢದಲ್ಲಿ 29 ನಕ್ಸಲೀಯರ ಎನ್‌ಕೌಂಟರ್​: ಅನುಮಾನ ವ್ಯಕ್ತಪಡಿಸಿದ ಕಾಂಗ್ರೆಸ್‌ ನಾಯಕ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts