More

    ಜವಾಬ್ದಾರಿಯಿಂದ ಬರಗಾಲ ಎದುರಿಸಿ

    ಸಿದ್ದಾಪುರ: ಬರಗಾಲವನ್ನು ಸಮರ್ಥವಾಗಿ ಎದುರಿಸಲು ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಸೂಚಿಸಿದರು.

    ತಾಲೂಕಿನ ಸೋವಿನಕೊಪ್ಪ ಗ್ರಾಪಂ ಸಭಾಭವನದಲ್ಲಿ ಕುಡಿಯುವ ನೀರು ಹಾಗೂ ಮೇವಿನ ಪರಿಸ್ಥಿತಿ ಕುರಿತು ಶುಕ್ರವಾರ ಆಯೋಜಿಸಿದ್ದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

    ಪ್ರತಿ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರ ಸಹಕಾರ ಪಡೆದು ನೀರಿನ ಸಮಸ್ಯೆ ನೀಗಿಸಬೇಕಿದೆ. ಕುಡಿಯುವ ನೀರಿನ ವಿಷಯದಲ್ಲಿ ಉದಾಸೀನತೆ ತೋರಿದರೂ ಸಹಿಸಲು ಸಾಧ್ಯ ಇಲ್ಲ. ಒಂದೇ ನೀರಿನ ಮೂಲವನ್ನು ನಂಬಿಕೊಂಡರೆ ದಿನ ಕಳೆದಂತೆ ಸಮಸ್ಯೆಯಾಗಲಿದೆ. ಬದಲಿ ವ್ಯವಸ್ಥೆ ಮಾಡಿಟ್ಟುಕೊಳ್ಳಬೇಕು. ನೀರಿನ ಮೂಲವನ್ನು ತಕ್ಷಣ ಕಂಡುಕೊಂಡು ಕುಡಿಯುವ ನೀರು ಸಮರ್ಪಕವಾಗಿ ಪೂರೈಸಬೇಕು. ಕುಡಿಯುವ ನೀರಿನ ವಿಚಾರದಲ್ಲಿ ಹಣದ ಕೊರತೆಯಾಗದಂತೆ ತಾಲೂಕು ಆಡಳಿತ ನೋಡಿಕೊಳ್ಳಲಿದೆ ಎಂದರು.

    ತಾಪಂ ಇಒ ದೇವರಾಜ ಹಿತ್ತಲಕೊಪ್ಪ ಮಾತನಾಡಿ, ತಾಲೂಕಿನ 97 ಮಜರೆಗಳಲ್ಲಿ ಕುಡಿಯುವ ನೀರಿನ ಕೊರತೆಯಾಗುವುದನ್ನು ಪಟ್ಟಿ ಮಾಡಿಕೊಳ್ಳಲಾಗಿದೆ. ಪಂಚಾಯಿತಿಯಲ್ಲಿ 15ನೇ ಹಣಕಾಸು ಯೋಜನೆಯಡಿ 2 ಲಕ್ಷ ರೂ. ಕಾಯ್ದಿರಿಸಲಾಗಿದೆ ಎಂದರು.

    ತಹಸೀಲ್ದಾರ್ ಎಂ.ಆರ್. ಕುಲಕರ್ಣಿ, ಸೋವಿನಕೊಪ್ಪ ಗ್ರಾಪಂ ಅಧ್ಯಕ್ಷೆ ಸುಮಾ ಗೌಡ, ಸದಸ್ಯರು, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts