Saturday, 17th November 2018  

Vijayavani

ಮೈಸೂರು ಪಾಲಿಕೆಯಲ್ಲಿ ದೋಸ್ತಿ ತಂತ್ರ - ಮಾತುಕತೆ ಯಶಸ್ವಿ - 2 ವರ್ಷ ಕಾಂಗ್ರೆಸ್, 3 ವರ್ಷ ಜೆಡಿಎಸ್​​ಗೆ        ಮೀಸಲಾತಿ ವಿಚಾರದಲ್ಲಿ ದೋಸ್ತಿಗಳೇ ಗರಂ - ಸಿಎಂ ಎಚ್​​ಡಿಕೆಗೆ ಸಚಿವ ಪ್ರಿಯಾಂಕ ಖರ್ಗೆ ಪತ್ರ        ಅನಂತ್ ನಿಧನದಿಂದಾಗಿರೋ ನಷ್ಟ ಭರಿಸಲು ಸರ್ಕಸ್ - ರಾಜ್ಯ ಬಿಜೆಪಿ ಸಂಸದರಿಗೆ ಸಿಗುತ್ತಾ ಸಚಿವ ಭಾಗ್ಯ        ಇಂದು ಮಹದಾಯಿ ಕುರಿತು ಸರ್ವಪಕ್ಷ ಸಭೆ - ಮುಂದಿನ ಕ್ರಮದ ಬಗ್ಗೆ ನಡೆಯಲಿದೆ ಮಹತ್ವದ ಚರ್ಚೆ        ಇಂದು ಶಬರಿಮಲೆ ಬಾಗಿಲು ಮತ್ತೆ ಓಪನ್ - ಮಹಿಳೆಯರಿಗೆ ದರ್ಶನ ಸಿಗುತ್ತೋ? ಸಿಗಲ್ವೋ..?       
Breaking News

ಮಳೆಗೆ ಮನೆಗಳು ಕುಸಿದು ಬಾಲಕಿ ಸಾವು, ಇಬ್ಬರಿಗೆ ಗಂಭೀರ ಗಾಯ

Thursday, 12.07.2018, 6:37 PM       No Comments

ಬೀದರ್: ರಾಜ್ಯದ ಹಲವೆಡೆ ಭಾರಿ ಮಳೆ ಸುರಿಯುತ್ತಿದ್ದು, ಕೆಲವೆಡೆ ಅವಘಡಗಳು ನಡೆದಿವೆ. ಬೀದರ್‌ನಲ್ಲಿ ರಾತ್ರಿಯಿಂದ ಸುರಿಯುತ್ತಿರುವ ಮಳೆಗೆ ಮನೆ ಗೋಡೆ ಕುಸಿದು ಬಾಲಕಿ ಮೃತಪಟ್ಟಿದ್ದು, ಇಬ್ಬರಿಗೆ ಗಾಯವಾಗಿದೆ.

ತಾಲೂಕಿನ ಕಪಲಾಪೂರ ಗ್ರಾಮದಲ್ಲಿ ನಿದ್ದೆ ಮಾಡುತ್ತಿದ್ದ ವೇಳೆ ಮನೆಯ ಗೋಡೆ ಕುಸಿದು ಭಾಗ್ಯಶ್ರೀ(12) ಮೃತಪಟ್ಟು, ಬಾಲಕಿ ತಾಯಿ ಹಾಗೂ ಅಜ್ಜನಿಗೆ ಗಂಭೀರ ಗಾಯಗಳಾಗಿವೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮನೆ ಕುಸಿದು ಇಬ್ಬರಿಗೆ ಗಂಭೀರ ಗಾಯ

ಸೋಗೆ ಮನೆ ಕುಸಿದು ಅಜ್ಜ ಹಾಗೂ ಮೊಮ್ಮಗನಿಗೆ ಗಂಭೀರ ಗಾಯವಾಗಿರುವ ಘಟನೆ ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಗರವಳ್ಳಿಯಲ್ಲಿ ನಡೆದಿದೆ. ಬಸವ(58) ಹಾಗೂ ಅವರ ಮೊಮ್ಮಗ ಸುಬ್ರಹ್ಮಣ್ಯ(10) ಎಂಬವರಿಗೆ ಗಂಭೀರ ಗಾಯವಾಗಿದೆ.

ಕಳೆದ ವಾರದಿಂದಲೂ ಎಡೆಬಿಡದೆ ಮಳೆ ಸುರಿಯುತ್ತಿರುವುದರಿಂದ ಸೋಗೆ ಮನೆಯ ಗೋಡೆಗಳು ತೇವಗೊಂಡು ಮನೆ ಕುಸಿದಿದೆ. ಈ ವೇಳೆ ಮನೆಯ ಒಳಗಿದ್ದ ಇಬ್ಬರಿಗೆ ಗಾಯವಾಗಿದ್ದು, ಬಸವ ಅವರ ಪತ್ನಿ, ಸೊಸೆ ಹಾಗೂ ಮೊಮ್ಮಗಳು ಅಪಾಯದಿಂದ ಪಾರಾಗಿದ್ದಾರೆ.

ಗಾಯಗೊಂಡ ಇಬ್ಬರನ್ನು ಚಿಕಿತ್ಸೆಗಾಗಿ ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆ‌ ಅಧಿಕಾರಿಗಳು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top