ಕುಸಿದು ಬಿದ್ದು ಸಾವು

Death Case
Published on

ಪಡುಬಿದ್ರಿ: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಹೆಜಮಾಡಿ ಸಂತೋಷ್(43) ಕುಸಿದು ಬಿದ್ದು ಮೃತಪಟ್ಟಿದ್ದಾರೆ. 2 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರ ಬೆಳಗ್ಗೆ ಎದ್ದು ಮನೆಯ ಹೊರಗೆ ಮೂತ್ರ ಮಾಡಲು ಹೋಗಿದ್ದಾಗ ಕುಸಿದು ಬಿದ್ದಿದ್ದು, ತಕ್ಷಣ ಅವರನ್ನು ವೈದ್ಯರಲ್ಲಿಗೆ ಕರೆದೊಯ್ಯಲಾಗಿತ್ತು. ವೈದ್ಯರ ಸೂಚನೆಯಂತೆ ಮೂಲ್ಕಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದರು. ವೈದ್ಯರು ಪರೀಕ್ಷಿಸಿದ್ದು, ಅದಾಗಲೇ ಮೃತಪಟ್ಟಿರುವುದಾಗಿ ಖಚಿತಪಡಿಸಿದ್ದಾರೆ. ಪಡುಬಿದ್ರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net