ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

0 Min Read
vishwanatha
ವಿಶ್ವನಾಥ ಗೌಡ

ಕಡಬ: ಗುಡ್ಡದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕುಂತೂರು ಗ್ರಾಮದ ಬಲತ್ತನೆ ನಿವಾಸಿ ವಿಶ್ವನಾಥ ಗೌಡ(45) ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಶುಕ್ರವಾರ ಮೃತಪಟ್ಟಿದ್ದಾರೆ.

ಗುರುವಾರ ತಮ್ಮ ತೋಟದ ಗುಡ್ಡ ಪ್ರದೇಶದಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದರು. ತಕ್ಷಣ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಯಿತಾದರೂ ಸ್ಪಂದಿಸಿದೆ ಮೃತಪಟ್ಟಿದ್ದಾರೆ. ಸಾಮಾಜಿಕ, ಧಾರ್ಮಿಕ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದರು. ತಾಯಿ, ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

See also  ಆಟೋಗೆ ಬೈಕ್​ ಟಚ್​ ಆಗಿದ್ದಕ್ಕೆ ಕೊಲೆ: ತಿರುಪತಿಗೆ ಹೋಗಿ ಮುಡಿ ಕೊಟ್ಟು ಬಂದು ಪೊಲೀಸರಿಗೆ ಶರಣು!
Share This Article