

ಕುಂದಾಪುರ: ಕೀಟನಾಶಕ ವಿಷ ಸೇವಿಸಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅಸೋಡು ಗ್ರಾಮದ ಭಾಸ್ಕರ ಮೊಗವೀರ (46) ಎಂಬುವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದ್ದಾರೆ.
ಅಸೋಡಿನ ವಾಸದ ಮನೆಯಲ್ಲಿ ಆ.27ರಂದು ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದ ಭಾಸ್ಕರ ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕುಂದಾಪುರ ಗ್ರಾವಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.