ಎದೆನೋವಿನಿಂದ ಆಸ್ಪತ್ರೆಯಲ್ಲಿ ಸಾವು

New Project (30)
Published on

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಕಲ್ಲಾಜೆ ಗಂಪದಕೋಡಿ ಎಂಬಲ್ಲಿ ಆರೋಗ್ಯವಾಗಿದ್ದ ವ್ಯಕ್ತಿಗೆ ಏಕಾಏಕಿ ಎದೆನೋವು ಕಾಣಿಸಿದ್ದು ಆಸ್ಪತ್ರೆಗೆ ಹೋದಾಗ ಮೃತಪಟ್ಟಿದ್ದಾರೆ.

ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಕಲ್ಲಾಜೆ ಗಂಪದಕೋಡಿ ನಿವಾಸಿ ವಜ್ರಾಕ್ಷ ಪೂಜಾರಿ(53) ಎಂಬುವರಿಗೆ ಸೋಮವಾರ ರಾತ್ರಿ ಎದೆನೋವು ಕಾಣಿಸಿದೆ. ಬಳಿಕ ತನ್ನ ಸ್ಕೂಟರ್‌ನಲ್ಲಿ ಉಜಿರೆ ಖಾಸಗಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆಗೆ ಮುಂದಾದಾಗ ಮೃತಪಟ್ಟಿದ್ದಾರೆ. ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ಹೋಗಿ ಸಂಜೆ ಮನೆಗೆ ಬಂದಾಗ ಎದೆನೋವು ಕಾಣಿಸಿಕೊಂಡಿದೆ. ಅವರು ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net