More

    ‘ಸಾವಿನ ವಿಷಯದಲ್ಲೂ ಕೀಳು ರಾಜಕಾರಣ ಮಾಡ್ತಿದ್ದಾರೆ ಕಾಂಗ್ರೆಸ್ಸಿಗರು’

    ಬೆಳಗಾವಿ: ಕೋವಿಡ್-19 ಮಾರ್ಗಸೂಚಿ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಧಾರದಂತೆ ಸಚಿವ ಸುರೇಶ ಅಂಗಡಿ ಅವರ ಪಾರ್ಥಿವ ಶರೀರವನ್ನು ಬೆಳಗಾವಿಗೆ ತರಲಿಲ್ಲ. ಈ ವಿಷಯದಲ್ಲಿ ಕಾಂಗ್ರೆಸ್ ಕೀಳು ಮಟ್ಟದ ರಾಜಕಾರಣ ಮಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.

    ನಗರದ ಪ್ರವಾಸಿ ಮಂದಿರದಲ್ಲಿ ‘ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ’ಯಡಿ ಶುಕ್ರವಾರ ಪ್ರತಕರ್ತರಿಗೆ ವಿಶೇಷ ಆರೋಗ್ಯ ಕಾರ್ಡ್ ವಿತರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಯಾರು ಎಷ್ಟೇ ದೊಡ್ಡವರಾಗಿದ್ದರೂ ಕೋವಿಡ್-19 ಮಾರ್ಗಸೂಚಿ ಪಾಲಿಸಬೇಕು ಎನ್ನುವುದು ಬಿಜೆಪಿ ಮತ್ತು ಸರ್ಕಾರದ ನಿಲುವಾಗಿದೆ.

    ಇದನ್ನೂ ಓದಿ: Video | ಏನೇ ಆದ್ರೂ ಹತ್ರಾಸ್​​ಗೆ ಹೋಗೇ ಹೋಗ್ತೀನಿ: ಪ್ರಿಯಾಂಕಾ ಗಾಂಧಿ ವಾದ್ರಾ ಸವಾಲ್​

    ಈ ವಿಷಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಪ್ರಚಾರಕ್ಕಾಗಿ ಕೀಳು ಮಟ್ಟದ ರಾಜಕಾರಣ ಮಾಡುವುದನ್ನು ಬಿಡಲಿ. ಕೋವಿಡ್-19ನಂತಹ ತುರ್ತು ಸಂದರ್ಭದಲ್ಲಿ ರಾಜ್ಯದ ಅಭಿವೃದ್ಧಿಗೆ ಪಕ್ಷಾತೀತರಾಗಿ ಕೆಲಸ ಮಾಡಬೇಕಿದೆಯೇ ಹೊರತು ಜನರ ದಿಕ್ಕು ತಪ್ಪಿಸಲು ಯತ್ನಿಸಬಾರದು ಎಂದು ಕೈ ನಾಯಕರನ್ನು ರಮೇಶ ತರಾಟೆಗೆ ತೆಗೆದುಕೊಂಡರು.

    ಇದನ್ನೂ ಓದಿ: ಆರು ತಿಂಗಳ ಬಳಿಕ ಇಸ್ಕಾನ್​ ದೇವಾಲಯ ಭಕ್ತರಿಗೆ ಮುಕ್ತ, ದರ್ಶನ ಸಮಯ ಹೀಗಿದೆ

    ಸಿದ್ದರಾಮಯ್ಯಗೆ ಸೂಕ್ತ ಉತ್ತರ: ನೆರೆ ಸಂತ್ರಸ್ತರಿಗೆ ಸರ್ಕರದಿಂದ ಅಗತ್ಯ ಸೌಲಭ್ಯ ಕಲ್ಪಿಸಲಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಸೂಕ್ತ ವೇದಿಕೆಯಲ್ಲಿ ಉತ್ತರಿಸ ಲಾಗುವುದು ಕೋವಿಡ್-19 ವೈದ್ಯಕೀಯ ಸಲಕರಣೆ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಅನಗತ್ಯವಾಗಿ ಆರೋಪಿಸುತ್ತಿದ್ದಾರೆ. ಆಡಳಿತದ ಪಕ್ಷದ ಬಗ್ಗೆ ಆರೋಪ ಮಾಡುವ ಮೊದಲು ಕಾಂಗ್ರೆಸ್ಸಿಗರು ಪಕ್ಷದ ಬೆಳವಣಿಗೆಗೆ ಶ್ರಮಿಸಲಿ ಎಂದರು.

    ಇದನ್ನೂ ಓದಿ: ಡ್ರಗ್ಸ್​ ಜತೆಗೆ ಬದುಕುವವರೂ ಇದ್ದಾರೆ ಎಂದ ಕಾಂಗ್ರೆಸ್​ ಶಾಸಕ

    ಹೈಕಮಾಂಡ್ ನಿರ್ಧಾರವೇ ಅಂತಿಮ: ದಿ.ಸುರೇಶ ಅಂಗಡಿ ಅವರ ಅಕಾಲಿಕ ನಿಧನದಿಂದ ತೆರವಾದ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಅಂಗಡಿ ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡಬೇಕೋ ಅಥವಾ ಪಕ್ಷದ ನಾಯಕರಿಗೆ ನೀಡಬೇಕೋ ಎಂದು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಬಿಜೆಪಿಗೆ ತನ್ನದೇ ಆದ ಸಿದ್ಧಾಂತವಿದೆ. ಹೀಗಾಗಿ ಸದ್ಯದ ಪರಿಸ್ಥತಿಯಲ್ಲಿ ಅಭ್ಯರ್ಥಿ ಆಯ್ಕೆ ವಿಚಾರ ಹಾಗೂ ಚರ್ಚೆ ಅನಗತ್ಯ ಎಂದು ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು.

    ‘ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ದಿಗ್ವಿಜಯ ಸಿಂಗ್ ಅವರನ್ನು ಕಾಂಗ್ರೆಸ್ ಉಚ್ಛಾಟಿಸಿತ್ತಾ?’

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts