ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಸಾವು

ಕೊಳ್ಳೇಗಾಲ: ಬೈಕ್‌ನಿಂದ ಬಿದ್ದು ತೀವ್ರ ಸ್ವರೂಪದ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆನಂದಜ್ಯೋತಿ ಕಾಲನಿ ಯುವಕ ಬುಧವಾರ ಮೃತಪಟ್ಟಿದ್ದಾರೆ.

ಚಿತ್ರ ಬರಹಗಾರ ಜಯರಾಜ್ ಅವರ ಪುತ್ರ ಸಚಿನ್(28) ಮೃತ ಯುವಕ. 20 ದಿನಗಳ ಹಿಂದೆ ಪಟ್ಟಣದ ಎಂಜಿಎಸ್‌ವಿ ಕಾಲೇಜು ರಸ್ತೆಯಲ್ಲಿ ಸಚಿನ್ ಬೈಕ್‌ನಲ್ಲಿ ಹೋಗುವಾಗ ಬಿದ್ದು, ತಲೆಗೆ ತೀವ್ರ ಸ್ವರೂಪದ ಗಾಯಗಳಾಗಿತ್ತು.

ಬಳಿಕ ಸಾರ್ವಜನಿಕರ ಸಹಾಯದಿಂದ ಆತನನ್ನು ಪಟ್ಟಣದ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಬೆಳಗ್ಗೆ ಮೃತಪಟ್ಟಿದ್ದು, ಪಟ್ಟಣದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.

Leave a Reply

Your email address will not be published. Required fields are marked *